Breaking News

ಧಾರವಾಡ

ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾದ ಕೇಂದ್ರ ಹಾಗೂ ರಾಜ್ಯ ಸಚಿವರು

ಹುಬ್ಬಳ್ಳಿ; ರಾಜ್ಯ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಮತ್ತು ಒಳ ಮೀಸಲಾತಿ ನೀಡಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ದೀಪ ಬೆಳಗಿಸಿದ ಬಳಿಕ ಹಲಗೆ ಬಾರಿಸುವ …

Read More »

ಚುನಾವಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ಡಾ.ಗೋಪಾಲಕೃಷ್ಣ

ಹುಬ್ಬಳ್ಳಿ: ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 13 ರಂದು ನಾಮ ಪತ್ರ ಸಲ್ಲಿಕೆ ದಿನ ಆರಂಭ, ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ. ನಾಮ ಪತ್ರ ಪರಿಶೀಲನೆ ಏಪ್ರಿಲ್ 21 ಕ್ಕೆ. ನಾಮ ಪತ್ರ ಹಿಂಪಡೆಯುವ ಕೊನೆಯ ದಿನಾಂಕ ಏಪ್ರಿಲ್ 24. ಇವುಗಳು ಚುನಾವಣೆಯ ನಿಯಮಗಳು ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ಅಧಿಕಾರಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ …

Read More »

ಕಾಂಗ್ರೆಸ್ ಶಾಸಕಿ ವಿರುದ್ಧ ಹ… ಅಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮುಖಂಡ…

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದೆ. ಹಾಲಿ ಶಾಸಕಿಯ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿಯೇ ಟಿಕೆಟ್ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಯೊಬ್ಬರು ಸುದ್ಧಿಗೋಷ್ಟಿಯಲ್ಲಿಯೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿಂದು ಶಿವಾನಂದ ಬೆಂತೂರ ನೇತೃತ್ವದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಸಿ.ಜೆ. ಪಾಟೀಲ ಎಂಬುವಂತ ಟಿಕೆಟ್ ಆಕಾಂಕ್ಷಿ, ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ವಿರುದ್ಧವೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. …

Read More »

ಬಾಲಕನ ಮರ್ಡರ್ ಸ್ಟೋರಿ ಬಿಚ್ಚಿಟ್ಟ ಡಿಸಿಪಿ

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದ ತನಿಖೆ ನಡೆಸಿದ್ದು, ಆರೋಪಿ ರವಿ ವೆಂಕಟೇಶ ಬಳ್ಳಾರಿ ಎಂಬುವವನನ್ನು ವಶಕ್ಕೆ ಪಡೆದಿದ್ದೇವೆ. ಆ ಬಾಲಕ ಆರೋಪಿಗೆ ಮಾಮಾ, ಮಾಮಾ ಎಂದುಕೊಂಡಿದ್ದ ಅಂತಹ ಬಾಲಕನನ್ನೇ ಆರೋಪಿ ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ರಾಜೀವ.ಎಂ ಹೇಳಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಾಲಕನ ಶವ …

Read More »

ಕೆಎಲ್ ಇ ಘಟಿಕೋತ್ಸವ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ

ಹುಬ್ಬಳ್ಳಿ: ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ಘಟಕೋತ್ಸವ ಸಮಾರಂಭಕ್ಕೆ ವಿವಿಯ ಕುಲಪತಿ, ಅಧ್ಯಕ್ಷ ಪ್ರಭಾಕರ ಕೋರೆ, ಉಪಕುಲಪತಿ ಡಾ.ಅಶೋಕ‌ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಿದರು. ಸಂಸ್ಥೆಯ ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವದಲ್ಲಿ 1619 ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ವಿತರಿಸಲಾಯಿತು. ಇನ್ನು ಮೊದಲ ಹಾಗೂ ಎರಡನೇ ರ‌್ಯಾಂಕ್ ಪಡೆದ 35 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಈ ವೇಳೆ ಚಿನ್ನ ಹಾಗೂ ಬೆಳ್ಳಿ ಪದಕ …

Read More »

ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಸಮಾರಂಭ

ಧಾರವಾಡ: ಪೊಲೀಸ್ ಇಲಾಖೆಯು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸುಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮಹಿಳಾ ಪೊಲೀಸ ಅಧಿಕಾರಿ ಎಲ್. ಎಸ್. ಮುಗಳಗೇರ ಅವರು ಮಾತನಾಡಿದರು. ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಒಂದು ಶಪಥವಿದ್ದಂತೆ. ಅದನ್ನು ಪಾಲಿಸಿ, ಕೆಲಸ ಮಾಡುವಾಗ ಅಧೀನ ಅಧಿಕಾರಿ, ಸಿಬ್ಬಂದಿಗಳಿಂದ ಆಗುವ …

Read More »

ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಿದ ಪೊಲೀಸರು

ಧಾರವಾಡದ :ಹಳಿಯಾಳ ರಸ್ತೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಜಿಲ್ಲೆಯ ಒಳಬರುವ ಹಾಗೂ ಹೊರ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ, ಸೀರೆ, ಮದ್ಯ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಆ ರೀತಿಯ ವಾಹನಗಳು ಸಂಚರಿಸಿದ್ದೇ ಆದಲ್ಲಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದಂತೂ ಗ್ಯಾರಂಟಿ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ …

Read More »

ಜಿಲ್ಲಾ ಪಂಚಾಯತ್ ನೂತನ ಸಿಇಓ ಆಗಿ ಶ್ರೀಮತಿ ಸ್ವರೂಪ ಟಿ.ಕೆ.

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಶ್ರೀಮತಿ ಸ್ವರೂಪ ಟಿ.ಕೆ. ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಮೊದಲು ಅವರು ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (ಸಂಜೀವಿನಿ) ಅಪರ ಅಭಿಯಾನ ನಿರ್ದೇಶಕರಾಗಿದ್ದರು.

Read More »

ಬಿಜೆಪಿ ವಿರುದ್ಧ ಕಾಂಗ್ರೆಸ್’ನವರು ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ- ಅಶ್ವಥ್ ನಾರಾಯಣ

ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಪಡೆಯುವುದು ಬಹಿರಂಗಗೊಂಡಿದ್ದು, ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಬೇಕು. ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ‌. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್’ನವರು 40% ಕಮಿಷನ್ ಕುರಿತಾಗಿ ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ …

Read More »

ದಾಖಲೆ ಇಲ್ಲದ ಸೀರೆಗಳನ್ನು ವಶಕ್ಕೆ ಪಡೆದ ಪೊಲೀಸರು

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡಲಾಗುತ್ತಿದ್ದ ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ 12 ಸಾವಿರ ಸೀರೆಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿರುವ ಇಟಿಗಟ್ಟಿ ಬಳಿ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ವೇಳೆ ಲಾರಿ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಲಾರಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ …

Read More »