Breaking News

ಧಾರವಾಡ

ಹುಬ್ಬಳ್ಳಿಯಲ್ಲಿ ಕಾರು ಪಲ್ಟಿ, ಮೂವರು ದುರ್ಮರಣ, ಓರ್ವ ಮಹಿಳೆ ಸ್ಥಿತಿ ಗಂಭೀರ..!

ಹುಬ್ಬಳ್ಳಿ: ಕಾರು ಪಲ್ಟಿಯಾಗಿ ಮೂವರು ದುರ್ಮರಣಕ್ಕೀಡಾದ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಗಣೇಶ ಹೋಟೆಲ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್​(26) ಮತ್ತು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನ ಎಚ್.ಕೆ. ಸುಶೀಲಾ (38) ಮೃತರು. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ ಇವರು ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ …

Read More »

ಧಾರವಾಡದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ

ಧಾರವಾಡ: ಹೊಯ್ಸಳನಗರದ ಇಸ್ಮಾಯಿಲ್ ಎಂಬುವವರಿಗೆ ಸೇರಿದ ದನ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿಯಲಾಗಿದೆ. ಈ ಹೆಬ್ಬಾವು ಆಹಾರ ಅರಸಿ ಬಂದು ದನದ ಕೊಟ್ಟಿಗೆಯಲ್ಲಿ ಅವಿತು ಕುಳಿತಿತ್ತು. ಇದನ್ನು ನೋಡಿದ ಮಾಲೀಕರು ಕೂಡಲೇ ಉರಗ ತಜ್ಞ ಸ್ನೇಕ್ ಮಾಸ್ಟರ್ ನಜೀರ್ ಅವರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ನಜೀರ್ ಅವರು ಆ ಹೆಬ್ಬಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟು ಬರುವ ವ್ಯವಸ್ಥೆ ಮಾಡಿದರು.

Read More »

ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ

ಧಾರವಾಡ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಬರುತ್ತಿವೆ ಮುಂಜಾಗ್ರತಾ ಕ್ರಮವಾಗಿ ,ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ಸೆ.6 ರಂದು ಒಂದು ದಿನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ರಜೆ ಘೋಷಿಸಿದ್ದಾರೆ. ರೈತರು,ಸಾರ್ವಜನಿಕರು ಹಳ್ಳ,ಕೊಳ್ಳಗಳನ್ನು ದಾಟುವ ಸಾಹಸಗಳಿಗೆ ಕೈ ಹಾಕಬಾರದು.ಜಾನುವಾರುಗಳ ಸುರಕ್ಷತೆಗೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ

Read More »

ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಧಾರವಾಡ …

Read More »

ಅನಧಿಕೃತ ಮೈಕ್ ಗಳನ್ನ ತೆರವುಗೊಳಿಸುವಂತೆ ಒತ್ತಾಯ

ಧಾರವಾಡ : ಅನಧಿಕೃತ ಮೈಕ್ ಗಳನ್ನ ತೆರವುಗೊಳಿಸುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಸಂಘಟನೆಯಿಂದ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರು, ಕೋರ್ಟ್ ಅದೇಶವನ್ನ ಪಾಲಿಸಿಲ್ಲ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಸೀದಿ ಮೇಲಿನ ಮೈಕ್ ಗಳನ್ನ ತೆರವುಗೊಳಿಸಬೇಕು. ಆದೇಶವನ್ನ ಕಡ್ಡಾಯವಾಗಿ ಪಾಲಿಸಬೇಕೆಂದು ಒತ್ತಾಯಿಸಿಧಾರವಾಡ ಎಸ್ ಪಿ ಲೋಕೇಶ ಗೆ ಮನವಿ ಸಲ್ಲಿಸಿದರು. ಮಸೀದಿ ಮೇಲಿನ …

Read More »

ಲವರ್ ಜೊತೆ ಲವ್ವಿಡವ್ವಿಗೆ ಅವಕಾಶ ಮಾಡಿಕೊಟ್ಟ ಬಳ್ಳಾರಿ ಪೋಲಿಸ್ : ಭೂಗತ ಪಾತಕಿ ಬಚ್ಚಾಖಾನ್ ಹುಬ್ಬಳ್ಳಿ ಖಾಕಿಪಡೆ ವಶಕ್ಕೆ

ಧಾರವಾಡ : ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ್ದ ಬಳ್ಳಾರಿ ಪೊಲೀಸರು ಮತ್ತು ಭೂಗತ ಪಾತಕಿ ಲಾಡ್ಜ್ ನಲ್ಲಿಯೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಧಾರವಾಡದ ರಾಯಾಪುರ ಸಮೀಪದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಭೂಗತ ಪಾತಕಿಯನ್ನು ಕೋರ್ಟ್ ಗೆ ಹಾಜರುಪಡಿಸಲು ಬಳ್ಳಾರಿ ಪೊಲೀಸರು ಕರೆದುಕೊಂಡು ಬಂದಿದ್ದರು. ಇದೇ ವೇಳೆ ಪ್ರೇಯಸಿಯೊಂದಿಗೆ ಸರಸ ಸಲ್ಲಾಪಕ್ಕೆ ಲಾಡ್ಜ್ ನಲ್ಲಿ ಅವಕಾಶ ಕಲ್ಪಿಸಿದ್ದರು. ಬಚ್ಚಾ ಖಾನ್ …

Read More »

ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ಸಾಲಿನಲ್ಲಿ ನಿಂತ ಶಿಕ್ಷಕರು

ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ . ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು , ಶಿಕ್ಷಕ ಮತದಾರರ ಮತ ಹಾಕಲು ಆಗಮಿಸುತ್ತಿದ್ದಾರೆ. ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಆಗಮಿಸುತ್ತಿರುವ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ .

Read More »

ಮಗಳ ಶಿಕ್ಷಣದ ಸಲುವಾಗಿ ನಾನು ಅಮೇರಿಕಾಕ್ಕೆ ಹೋಗಿದ್ದೆ : ಬೆಲ್ಲದ

ಧಾರವಾಡ : ನಾನು ನನ್ನ ಮಗಳ ಶಿಕ್ಷಣದ ಸಲುವಾಗಿ ಅಮೇರಿಕಾಕ್ಕೆ ಹೋಗಿದ್ದೆ . ಈಗ ವಾಪಸ್ ಬಂದಿದ್ದು , ಕ್ಷೇತ್ರದ ಅಭಿವೃದ್ಧಿ ಕೆಲಸದತ್ತ ಗಮನಹರಿಸುತ್ತೇನೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಲ್ಲದ್ , ನಾನು ನನ್ನ ಮಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಿದ್ದೆ . ಐದು ವರ್ಷದಿಂದ ನನ್ನ ಮಗಳು ಅಮೇರಿಕಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ ಅವಳ ಕಾಲೇಜ್ ಪ್ರವೇಶದ ಸಂದರ್ಭದಲ್ಲೂ ನಾನು ಹೋಗಿರಲಿಲ್ಲ …

Read More »

ಬೆಲ್ಲದ ಅವರ ಮನೆಗೆ ಅನ್ನದಾತರ ಮುತ್ತಿಗೆ

ಧಾರವಾಡ : ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ರೈತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ರಸಗೊಬ್ಬರಕ್ಕಾಗಿ ಅಲೆದಾಡುತ್ತಿರುವ ಅನ್ನದಾತರು ಕಂಗಾಲಾಗಿ ಧಾರವಾಡದಲ್ಲಿರುವ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದೆ. ಸೊಸೈಟಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರವೇ ಸಿಗುತ್ತಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಬರೀ ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದ್ದು, ಬಿತ್ತನೆಗೆ ಪೂರಕವಾದ …

Read More »

ಟಿಕಾಯತ್ ಮುಖಕ್ಕೆ ಮಸಿ: ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಖಂಡಿಸಿ ಧಾರವಾಡದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ಧಾರವಾಡದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದವರ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಅವರನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಟಿಕಾಯತ್ ಅವರ ಮುಖಕ್ಕೆ ನಿನ್ನೆ …

Read More »