Breaking News

ಧಾರವಾಡ

ನವಲಗುಂದದಲ್ಲಿ ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ

ನವಲಗುಂದ: ಪಟ್ಟಣದ ಬಸ್ತಿ ಓಣಿಯಲ್ಲಿ ನೂತನವಾಗಿ ನಿರ್ಮಾಣವಾದ ಲಕ್ಷ್ಮೀ ದೇವಸ್ಥಾನಕ್ಕೆ ಇಂದು ಶ್ರೀ ಲಕ್ಷ್ಮೀ ದೇವಿಯ ಪ್ರಾಣ ಪ್ರತಿಷ್ಠಾಪನೆ ಜರುಗಿತು. ವಾದ್ಯ ಮೇಳದೊಂದಿಗೆ ಶ್ರೀ ಲಕ್ಷ್ಮೀ ದೇವಿಯ ಮೂರ್ತಿ ಮೆರವಣಿಗೆ ಪ್ರಾರಂಭವಾಗಿದ್ದು, ಸುಮಂಗಲೆಯರು ಕುಂಭ ಹೊತ್ತು ಮೆರವಣಿಗೆಗೆ ಮೆರಗು ತಂದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಸ್ಥಾನ ತಲುಪಿದ ಶ್ರೀ ಲಕ್ಷ್ಮೀ ದೇವಿಯ ವಿಗ್ರಹ ಪೂಜಾ ವಿಧಿ ವಿಧಾನ ನೆರವೇರಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಇನ್ನೂ ಇಂದಿನಿಂದ …

Read More »

ಜಾನುವಾರುಗಳಿಗೆ ತಗುಲಬಹುದಾದ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ : ಡಾ.ಮನೋಹರ ದ್ಯಾಬೇರಿ

ನವಲಗುಂದ: ಜಾನುವಾರುಗಳಿಗೆ ತಗುಲಬಹುದಾದ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ, ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯ ಪಶುವೈದ್ಯಾಧಿಕಾರಿ ಡಾ.ಮನೋಹರ ದ್ಯಾಬೇರಿ ಸಲಹೆ ನೀಡಿದರು. ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಕರುಗಳ ಪ್ರದರ್ಶನ ಹಾಗೂ ಜಾನುವಾರುಗಳ ಆರೋಗ್ಯ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತು ಸಿಗುತ್ತಿದೆ. ಹಾಲು ಉತ್ಪಾದನೆ, ಬರಡು ರಾಸುವಿಗೆ ಚಿಕಿತ್ಸೆ ಸೇರಿದಂತೆ ಜಾನುವಾರುಗಳ ಆರೈಕೆ …

Read More »

ಕ್ವಾಯಿಲ್ ಹಾಕುವ ವೇಳೆ ವಿದ್ಯುತ್‌ ಶಾಕ್ ಆಗಿ ಯುವಕ ಸಾವು

ಕುಂದಗೋಳ: ನೀರನ್ನು ಕಾಯಿಸಲು ಕ್ವಾಯಿಲ್ ಹಾಕುವ ವೇಳೆ ವಿದ್ಯುತ್‌ ಶಾಕ್ ಆಗಿ ಯುವಕನೋರ್ವ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದಲ್ಲಿ ಸಂಭವಿಸಿದೆ. ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದ ಅಲಿ ಮರ್ತುಜಾ ಮೌಲಾಲಿ ದೊಡ್ಡಮನಿ (21) ಮೃತ ದುರ್ದೈವಿಯಾಗಿದ್ದಾನೆ. ಕುಂಕೂರು ಗ್ರಾಮದ ಜಾಮೀಯಾ ಮಸೀದಿಯಲ್ಲಿ ಇಮಾಮತ ಕೆಲಸ ಮಾಡುತ್ತಿದ್ದ ಯುವಕ, ಶುಕ್ರವಾರ ಬೆಳಿಗ್ಗೆ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೀರು ಕಾಯಿಸಲು ವಿದ್ಯುತ್‌ ಸ್ವಿಚ್ ಗೆ ಕ್ವಾಯಿಲ್ ಹಾಕಿ ಕೈಯಲ್ಲಿ ಹಿಡಿದುಕೊಂಡಾಗ …

Read More »

ಭಾರಿ ಮಳೆಯಿಂದಾಗಿ ಹಾನಿಯಾದ ಮನೆ, ಬೆಳೆಗೆ ಪರಿಹಾರ ನೀಡುವಂತೆ ಮನವಿ ಸಲ್ಲಿಕೆ

ಕುಂದಗೋಳ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ರೈತಾಪಿ ಜನರ ಬೆಳೆಗಳನ್ನು ಅಕ್ಷರಶಃ ನಾಶ ಮಾಡಿದೆ. ಈ ಕಾರಣ ರೈತರಿಗೆ ಪ್ರತಿ ಹೆಕ್ಟೇ‌ರ್’ಗೆ 50 ಸಾವಿರ ರೂಪಾಯಿ ಪರಿಹಾರ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ಕೊಡಬೇಕು ಎಂದು ಜೆಡಿಎಸ್‌ ಪಕ್ಷದ ಮುಖಂಡರು ತಹಶೀಲ್ದಾ‌ರ್ ರಾಜು ಮಾವರಕರ ಅವರಿಗೆ ಸಲ್ಲಿಸಿದರು. ಈಗಾಗಲೇ ರಾಜ್ಯಾದ್ಯಂತ ಕುಂದಗೋಳ ತಾಲೂಕಿನಾದ್ಯಂತ ಬೆಳೆ ಹಾನಿಯಾಗಿರುವ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲ ತುಂಬಲು ನೋಟಿಸ್‌ …

Read More »

ಗ್ರಾಮ ಪಂಚಾಯತ್ ನೌಕರರ ಸಭೆ

ಧಾರವಾಡ: ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್‌ ನೌಕರರ ಸಮಾಲೋಚನೆ ಸಭೆ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮರ ಅಧ್ಯಕ್ಷತೆಯಲ್ಲಿ ಅಕ್ಟೋಬ‌ರ್ 20 ರಂದು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಭೆಗೆ ಜಿಲ್ಲೆ ಎಲ್ಲಾ ಗ್ರಾಮ ಪಂಚಾಯತ್ ನೌಕರರು ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಮಳೆಯಿಂದ ಮನೆ ಕುಸಿತ: ಅತ್ತೆ, ಸೊಸೆ ತೀವ್ರವಾಗಿ ಗಾಯ

ನವಲಗುಂದ: ಮಳೆಯಿಂದ ಮನೆಯೊಂದು ಕುಸಿದು ಅತ್ತೆ, ಸೊಸೆ ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಹನಸಿ ಗ್ರಾಮದ ಬಾಪುಗೌಡ ಬಸನಗೌಡ ಪಾಟೀಲ ಎಂಬುವರ ಮನೆ ಇದಾಗಿದ್ದು, ಮನೆ ಬೀಳುತ್ತಿದ್ದಂತೆಯೇ ಮನೆಯ ಅಡಿಯಲ್ಲಿ ಸಿಲುಕಿದ ಅತ್ತೆ ಮಂಗಳಾ ಪಾಟೀಲ (55) ಹಾಗೂ ಸೊಸೆ ಸುವರ್ಣ ಪಾಟೀಲ (37) ಅವರನ್ನು ಗ್ರಾಮಸ್ಥರೇ ರಕ್ಷಣೆ ಮಾಡಿ, ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನು ಮಂಗಳಾ ಅವರ ಎಡಗಾಲಿಗೆ ತೀವ್ರ …

Read More »

ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕು : ಬಸವರಾಜ ಗುರಿಕಾರ

ಧಾರವಾಡ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಭಾರತ ಶಿಕ್ಷಕರ ಪೆಡರೇಷನ್‌ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಏಕರೂಪವಾಗಿರುವುದಿಲ್ಲ, ಪ್ರತಿ ವಿದ್ಯಾರ್ಥಿಗೂ ಭಿನ್ನವಾಗಿರುತ್ತದೆ. ಕಲಿಕಾ ಸಾಮರ್ಥ್ಯ ಹೆಚ್ಚು ಇರುವ ವಿದ್ಯಾರ್ಥಿಗಳು, ಸಾಧಾರಣ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು …

Read More »

ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕಂದು ಮನವಿ ಸಲ್ಲಿಕೆ

ನವಲಗುಂದ: ತಾಲೂಕಷ್ಟೇ ಅಲ್ಲದೇ ಉತ್ತರ ಕರ್ನಾಟಕ ಭಾಗದಲ್ಲಿ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ, ಉಳ್ಳಾಗಡ್ಡಿ, ಶೇಂಗಾ ಸೇರಿದಂತೆ ಅನೇಕ ಬೆಳೆಗಳು ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ರೈತ ಭವನದ ರೈತ ಹೋರಾಟ ವೇದಿಕೆಯಿಂದ ತಹಶೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಈ ವೇಳೆಯಲ್ಲಿ ರೈತ ಮುಖಂಡ ಸುಭಾಷಗೌಡ …

Read More »

ತೋಟಗಾರಿಕೆ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕುಂದಗೋಳ : ಸಹಾಯಕ ತೋಟಗಾರಿಕೆ ನಿರ್ದೇಶಕರ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತೋಟಗಾರಿಕೆ ನಿರ್ದೇಶಕ ಮಂಜುನಾಥ ಕರೋಶಿಯವರ ನೇತೃತ್ವದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More »

69 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ಪ್ರದಾನ : ರಾಮಪ್ಪ ಬಡಿಗೇರ

ಹುಬ್ಬಳ್ಳಿ : ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಈ ಬಾರಿ 69 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್ ರಾಮಪ್ಪ ಬಡಿಗೇರ ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಯುಕ್ತ ನಡೆದ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಅಧಿಕಾರಿಗಳ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಹಿತ್ಯ, ಕ್ರೀಡೆ, ಸಮಾಜಸೇವೆ, ವೈದ್ಯಕೀಯ, ಕಲೆ, ರಂಗಭೂಮಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ 16 ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ …

Read More »