Breaking News

ಧಾರವಾಡ

ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಕೆ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿರುವ ನರಚನಹಳ್ಳ ಮಳೆ ಬಂದಾಗ ನೀರು ತುಂಬಿ ರಭಸದಿಂದ ಹರಿದು ಪ್ರವಾಹ ಸೃಷ್ಟಿ ಮಾಡುವ ಸಂದರ್ಭದಲ್ಲಿ ಬೆಣ್ಣೆ ಹಳ್ಳ ಹಾಗೂ ನರಚನಹಳ್ಳ ತುಂಬಿ ಹರಿಯುವ ವೇಳೆ ನರಚನಹಳ್ಳದ ನೀರು ತನ್ನ ಹರಿವಿನಲ್ಲಿ ಸೇರಿಸಿಕೊಳ್ಳದೆ ರೈತರ ಜಮೀನುಗಳಿಗೆ ಪ್ರತಿ ವರ್ಷವೂ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿದೆ. ನರಚನಹಳ್ಳವನ್ನು ಕೂಡಲೇ ಹೂಳೆತ್ತುವ ಕಾರ್ಯವನ್ನು ಮಾಡಬೇಕು ಹಾಗೂ ಹಳ್ಳದ ನೀರು ನುಗ್ಗಿ ಅಕ್ಕಪಕ್ಕ ಜಮೀನಿನಲ್ಲಿ ಹಾಳಾಗಿರುವ ಬೆಳೆಗಳಿಗೆ ಪರಿಹಾರ …

Read More »

ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಜನ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದರು. ಧಾರವಾಡದ ಕಲಾಭವನದಲ್ಲಿ ಜಮಾಯಿಸಿದ ಸಾವಿರಾರು ಜನ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತ ಬಂದಿದ್ದರೂ ಈ ಒಳ …

Read More »

ಪರಿಶಿಷ್ಟ ಜಾತಿ ಉಪ ಯೋಜನೆ: ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನ

ಧಾರವಾಡ : ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಯುವಕ, ಯುವತಿಯರು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

Read More »

ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥ ಸ್ವಾಗತ

ಧಾರವಾಡ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಇಂದು ಬೆಳಿಗ್ಗೆ ಆಗಮಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ …

Read More »

ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂ.ಆಭರಣ ಕಳ್ಳತನ

ಹುಬ್ಬಳ್ಳಿ: ನಗರದ ವಿಜಯನಗರದಲ್ಲಿ ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ವಿಜಯನಗರದ ಶಂಬಯ್ಯ ಬಾಡದಮಠ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ 1 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ಸ್ವಲ್ಪ ಹಣ ಕಳ್ಳತನ ಮಾಡಲಾಗಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಹಿಳೆಯರ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಕೋನರಡ್ಡಿ

ನವಲಗುಂದ: ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದು, ಮಹಿಳೆಯರ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ಗವಿಮಠ ದಾಸೋಹ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಹಾಗೂ ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಅ. 23 ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು …

Read More »

ನವಲಗುಂದ: ಅ.16ಕ್ಕೆ ವಿದ್ಯುತ್ ವ್ಯತ್ಯಯ

ನವಲಗುಂದ: ನವಲಗುಂದದ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಬುಧವಾರ ದಿ. 16 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಇದೇ ಬುಧವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ ನವಲಗುಂದ, ಅಳಗವಾಡಿ, ಯಮನೂರ, ಶಾನವಾಡ, ಕುಮಾರಕೊಪ್ಪ, ಇಬ್ರಾಹಿಂಪುರ, ಕಡದಳ್ಳಿ, ಅಮರಗೋಳ, ಸೊಟಕನಾಳ, ಶಲವಡಿ, ಬಳ್ಳೂರು, ಚೆನ್ನಮ್ಮನ ಕೆರೆ ( ವಾಟರ್ ಸಪ್ಪೆ) ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ …

Read More »

ಅ.15ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಅಣ್ಣಿಗೇರಿ: 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಾಗೂ ವಿದ್ಯುತ್‌ ಪರಿವರ್ತಕ ಅಳವಡಿಕೆ ಮತ್ತು ಸ್ವಿಚ್‌ ಗೇ‌ರ್ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ನಲವಡಿ, ಭದ್ರಾಪುರ, ಕೋಳಿವಾಡ, ಅಣ್ಣಿಗೇರಿ, ಹಳ್ಳಿಕೇರಿ, ಮಜ್ಜಿಗುಡ್ಡ, ಕೊಂಡಿಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ …

Read More »

ಹಿಂದೂ – ಮುಸ್ಲಿಂ ಭಾವೈಕ್ಯತೆಯ ಪುರಾಣ ಮಹಾ ಮಂಗಲೋತ್ಸವ

ಕುದಗೋಳ ; ಬೃಹತ್ ಕುಂಭ ಕೋಡಗಳ ಮೆರವಣಿಗೆ, ಶೃಂಗಾರಗೊಂಡ ಚಿಕ್ಕೋಡಿಯಲ್ಲಿ ತಾಯಿ ದೇವಿಯ ಮೆರವಣಿಗೆ ವಿಜಯದಶಮಿ ಹಬ್ಬಕ್ಕೆ ಮುಸ್ಲಿಂ ಬಾಂಧವರ ಸಹಕಾರದೊಂದಿಗೆ ಜಾತಿ, ಮತ, ಧರ್ಮ ಮೀರಿದ ವಾತಾವರಣ ಗುಡೇನಕಟ್ಟಿ ಗ್ರಾಮದಲ್ಲಿ ಕಂಡು ಬಂದಿದೆ. ನವರಾತ್ರಿ ಹಬ್ಬದ ಒಂಬ್ಬತ್ತು ದಿನಗಳು ಪುರಾಣ ಪ್ರವಚನ ಕೈಗೊಂಡ ಗ್ರಾಮಸ್ಥರು ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮವನ್ನು ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಮಣಕವಾಡದ ಮೃತ್ಯುಂಜಯ ಮಹಾಸ್ವಾಮಿಗಳು, ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.

Read More »