Breaking News

ದೆಹಲಿ

ಜನ್ ಧನ್ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ: ನಿರ್ಮಲಾ ಸೀತಾರಾಮನ್.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಜನ್ ಧನ್’‘ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ ಎಂದು ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಕರೆ ತರಲಾಗಿದೆ. ಈ ಖಾತೆಗಳಲ್ಲಿ ಸುಮಾರು 2 ಲಕ್ಷ ಕೋಟಿ ಸಂಚಿತ ಠೇವಣಿ ಇಡಲಾಗಿದೆ ಎಂಬ ವಿಚಾರವನ್ನು ನಿರ್ಮಲಾ ಸೀತಾರಾಮನ್​ ಬಹಿರಂಗ ಪಡಿಸಿದ್ದಾರೆ.

Read More »

ಚಂದ್ರನ ದಕ್ಷಿಣಕ್ಕೆ ಕಾಲಿಟ್ಟ ಮೊದಲ ದೇಶ ಭಾರತ:ಇಸ್ರೋ ವಿಜ್ಞಾನಿಗಳಿಗೆ ಧನ್ಯವಾದಗಳು…

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೋಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್‌ ವಿಕ್ರಮ್‌ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 …

Read More »

ಪ್ರಧಾನಿ ಮೋದಿಗೆ ರಾಖಿ ಕಟ್ಟಲು ಪಾಕ್‌ನಿಂದ ಬರ್ತಾರೆ ಸಹೋದರಿ!

ನವದೆಹಲಿ: ರಕ್ಷಾ ಬಂಧನ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಲು ಪಾಕಿಸ್ತಾನದಿಂದ ಮಹಿಳೆಯೊಬ್ಬರು ದೆಹಲಿಗೆ ಆಗಮಿಸುತ್ತಿದ್ದಾರೆ. ಭಾರತ ಮೂಲದ ಮೋದಿ ಪಾಕಿಸ್ತಾನಿ ಸಹೋದರಿ ಕಮರ್ ಮೊಹ್ಸಿನ್ ಶೇಖ್ ರಾಖಿ ಹಬ್ಬ ಆಚರಿಸಲು ದೆಹಲಿಗೆ ಆಗಮಿಸಲಿದ್ದಾರೆ. ಪ್ರತಿವರ್ಷ ಪ್ರಧಾನಿ ಮೋದಿ ಅವರಿಗೆ ರಾಖಿ ಕಳುಹಿಸುತ್ತಿದ್ದರಂತೆ. ಆದರೆ ಕೋವಿಡ್ ಇದ್ದ ಕಾರಣ ಕಳೆದ 2 ವರ್ಷಗಳಿಂದ ಅವರು ಭಾರತಕ್ಕೆ ಆಗಮಿಸಿರಲಿಲ್ಲ. ಹೀಗಾಗಿ ಈ ಬಾರಿ ದೆಹಲಿಗೆ ಆಗಮಿಸಿ ಪ್ರಧಾನಿ ಮೋದಿ …

Read More »

ಭಾರತದ ಯುವ ಸ್ಟಾರ್​ ಬ್ಯಾಟರ್​ ನಿತೀಶ್​ ರಾಣ ಉತ್ತರ ಪ್ರದೇಶಕ್ಕಾಗಿ ದೇಶೀಯ ಕ್ರಿಕೆಟ್​ ಆಡುವುದಾಗಿ ಘೋಷಿಸಿಕೊಂಡಿದ್ದಾರೆ..

ನವದೆಹಲಿ: ಭಾರತದ ಯುವ ಸ್ಟಾರ್​ ಬ್ಯಾಟರ್​ ನಿತೀಶ್​ ರಾಣ ತಮ್ಮ ರಾಜ್ಯವನ್ನು ಬಿಟ್ಟು ಪಕ್ಕದ ಉತ್ತರ ಪ್ರದೇಶಕ್ಕಾಗಿ 2023 -24ರ ದೇಶೀಯ ಕ್ರಿಕೆಟ್​ ಆಡುವುದಾಗಿ ಘೋಷಿಸಿಕೊಂಡಿದ್ದಾರೆ. ಈ ವರ್ಷದ ಐಪಿಎಲ್​ನಲ್ಲಿ ಶ್ರೇಯಸ್​ ಅಯ್ಯರ್​ ಅವರ ಅನುಪಸ್ಥಿತಿಯಲ್ಲಿ ನಿತೀಶ್​ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡವನ್ನು ಮುನ್ನಡೆಸಿದ್ದರು. ಉತ್ತರ ಪ್ರದೇಶದ ತಂಡದಲ್ಲಿ ಕೆಕೆಆರ್​ನ ಸಹ ಆಟಗಾರ ಎಡಗೈ ಬ್ಯಾಟರ್​ ರಿಂಕು ಸಿಂಗ್​ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ಈ ವರ್ಷದಿಂದ ಉತ್ತರ ಪ್ರದೇಶದಲ್ಲಿ ಆರಂಭವಾಗುತ್ತಿರುವ ಯುಪಿಟಿ20 …

Read More »

ಸರ್ಕಾರಿ ಅಧಿಕಾರಿಯೊಬ್ಬರು ತನ್ನ ಮೃತ ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ…..

ನವದೆಹಲಿ: ದೆಹಲಿ ಸರ್ಕಾರಿ ಅಧಿಕಾರಿಯೊಬ್ಬರು ತನ್ನ ಮೃತ ಸ್ನೇಹಿತನ ಅಪ್ರಾಪ್ತ ಪುತ್ರಿಯ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 2020 ಮತ್ತು 2021ರ ನಡುವೆ ಅತ್ಯಾಚಾರದ ಪ್ರಕರಣ ನಡೆದಿದೆ ಎನ್ನಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿ ಅಧಿಕಾರಿಯ ವಿರುದ್ಧ ಆಗಸ್ಟ್ …

Read More »

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿಕೆ….

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮನವಿಯನ್ನು ಆಲಿಸಲು ಇಂದೇ ವಿಚಾರಣಾ ಪೀಠವನ್ನು ರಚಿಸುವುದಾಗಿ ಸುಪ್ರೀಂಕೋರ್ಟ್​ ಹೇಳಿದೆ. ಆಗಸ್ಟ್​ ತಿಂಗಳ ನದಿ ನೀರಿನ ಪಾಲನ್ನು ಬಿಡುಗಡೆ ಮಾಡುವಲ್ಲಿ ಕರ್ನಾಟಕ ವಿಳಂಬ ಮಾಡಿದ ಹಿನ್ನೆಲೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರ ಪೀಠದ ಮುಂದೆ ತಮಿಳುನಾಡು ಪರ ವಾದ ಮಂಡಿಸಿದ ಮಾಜಿ ಅಟಾರ್ನಿ ಜನರಲ್​, ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಹೆಚ್ಚುವರಿ …

Read More »

ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು..

ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್‌ಜಿಆರ್‌ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ ನೆಡುತೋಪು ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಬಳಸಬಹುದು ಎಂದು ಹೇಳಿದರು.”2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರತಿ ಗ್ರಾಮ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಅಭಿವೃದ್ಧಿಯ ದೀಪ ಬೆಳಗಬೇಕು. …

Read More »

ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ…

ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಇಲ್ಲಿನ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶೀಘ್ರದಲ್ಲೇ, ಭದ್ರತಾ ಏಜೆನ್ಸಿಗಳ ಸರಿಯಾದ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಕಾಲ್ ಸೆಂಟರ್‌ಗೆ ಬಾಂಬ್ ಕರೆ ಬೆದರಿಕೆ …

Read More »

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ…..

ನವದೆಹಲಿ: ಹಣಕಾಸು ಸಂಸ್ಥೆಗಳು ಸಾಲ ನೀಡುವ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್​​ಬಿಎಫ್​ಸಿ) ಮತ್ತು ಅಖಿಲ ಭಾರತ ಹಣಕಾಸು …

Read More »

ಭಾರತ ವಿಭಜನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ದಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ…….

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೇಶ ವಿಭಜನೆಯ ಕರಾಳ ನೆನಪಿನ ದಿನವಾದ ಇಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ಸ್ಮರಿಸಿದರು. ವಿಭಜನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರನ್ನು ಸ್ಮರಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಅವರು ಹೇಳಿದರು ದೇಶ ವಿಭಜನೆಯಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ಸಂದರ್ಭವೇ ’ವಿಭಜನೆಯ ಸಂಸ್ಮರಣಾ ದಿನ’ವಾಗಿದೆ. ಇದರೊಂದಿಗೆ, ಈ …

Read More »