BigTv News
July 26, 2023
ದೆಹಲಿ, ಸುದ್ದಿ
ನವದೆಹಲಿ:ಹಿಂದು ದೇವಸ್ಥಾನದ ಮೇಲೆ ನಿರ್ಮಿಸಲಾದ ಜ್ಞಾನವಾಪಿ ಮಸೀದಿಯ ಸರ್ವೇಗೆ ತಡೆ ನೀಡಿದ್ದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಕೋರಲಾಗಿದ್ದ ಅರ್ಜಿಯನ್ನು ಮರು ಸ್ಥಾಪಿಸಿ, ವಿಚಾರಣೆ ನಡೆಸಲು ಆದೇಶಿಸಿದೆ. ಜ್ಞಾನವಾಪಿ ಮಸೀದಿ ಸರ್ವೇ ನಡೆಸಬೇಕೆಂದು ಕೋರಿ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ, ಮಸೀದಿ ಸರ್ವೇಗೆ ಅನುಮತಿ ನೀಡಿತ್ತು. ಅದರಂತೆ ಸರ್ವೇ ಕಾರ್ಯ ಕೂಡ ಆರಂಭವಾಗಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಸಿದ ಜ್ಞಾನವಾಪಿ ಮಸೀದಿ …
Read More »
BigTv News
July 26, 2023
ದೆಹಲಿ, ಸುದ್ದಿ
ದೆಹಲಿ: ಜುಲೈ 26ರಂದು ಪ್ರತಿ ವರ್ಷ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ವೀರೋಚಿತ ಗೆಲುವು ಸಾಧಿಸಿತ್ತು. ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ತ್ಯಾಗ, ಬಲಿದಾನವನ್ನು ಇಂದು ಸ್ಮರಿಸಲಾಗುತ್ತಿದೆ. ಮಂಗಳವಾರ (ನಿನ್ನೆ) ಯುದ್ಧದಲ್ಲಿ ಮಡಿದ ಯೋಧರಿಗೆ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಇಂದು ಪುಷ್ಪಾರ್ಚನೆ ಸಮಾರಂಭ …
Read More »
BigTv News
July 26, 2023
ದೆಹಲಿ, ಸುದ್ದಿ
ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ. …
Read More »
BigTv News
July 22, 2023
News, ದೆಹಲಿ, ಸುದ್ದಿ
ನವದೆಹಲಿ: ರೋಜ್ಗಾರ್ ಮೇಳದ ಮೂಲಕ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಕೇಂದ್ರ ಸರ್ಕಾರದ ಹುದ್ದೆಗಳಿಗೆ ಹೊಸದಾಗಿ ನೇಮಕಗೊಂಡ 70 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ದೇಶಾದ್ಯಂತ 44 ಸ್ಥಳಗಳಲ್ಲಿ ಈ ವರ್ಚುಯಲ್ ನೇಮಕಾತಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಅವರು ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಾರ್ವಜನಿಕ ಬ್ಯಾಂಕ್ಗಳು ಸಾವಿರಾರು ಕೋಟಿ ನಷ್ಟವನ್ನು ಹೊಂದಿದ್ದವು ತಿಳಿದಿದ್ದವು. ಆದರೆ ಈಗ ಅವು ಅನುತ್ಪಾದಕ ಆಸ್ತಿಗಳು …
Read More »
BigTv News
July 18, 2023
News, ದೆಹಲಿ, ಸುದ್ದಿ
ನವದೆಹಲಿ :ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »
BigTv News
July 18, 2023
News, ಕರ್ನಾಟಕ, ದೆಹಲಿ, ಸುದ್ದಿ
ನವದೆಹಲಿ : ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆ ಇಂದು ಸಂಜೆ ನಡೆಯಲಿದ್ದು, ಸುಮಾರು 38 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾರ್ಥಕ್ಕಾಗಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿವೆ. ತಮ್ಮ ಮೇಲಿನ 20 ಲಕ್ಷ ಕೋಟಿಗೂ ಅಧಿಕ ಭ್ರಷ್ಟಾಚಾರ ಪ್ರಕರಣವನ್ನು ಮುಚ್ಚಿಹಾಕಲು ಅವರು ಒಗ್ಗಟ್ಟಾಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿ …
Read More »
BigTv News
July 18, 2023
News, ದೆಹಲಿ, ವಾಣಿಜ್ಯ, ಸುದ್ದಿ
ನವದೆಹಲಿ : ಭಾರತೀಯ ಸ್ಟಾರ್ಟಪ್ ಉದ್ಯಮಕ್ಕೆ ಬರುತ್ತಿದ್ದ ಫಂಡಿಂಗ್ ಹಣಕಾಸು ವರ್ಷ 2023ರಲ್ಲಿ ಶೇ 70ರಷ್ಟು ಕುಸಿತ ಕಂಡು 15 ಶತಕೋಟಿ ಡಾಲರ್ಗೆ ತಲುಪಿದೆ. ಕಳೆದ ಹಣಕಾಸು ವರ್ಷ 2022ರಲ್ಲಿ ಸ್ಟಾರ್ಟಪ್ ಉದ್ಯಮದ ಫಂಡಿಂಗ್ ಗರಿಷ್ಠ ಮಟ್ಟಕ್ಕೇರಿ 50 ಶತಕೋಟಿ ಡಾಲರ್ಗೆ ತಲುಪಿತ್ತು. ಮಾರುಕಟ್ಟೆ ಸಂಶೋಧನಾ ಸಂಸ್ಥೆ ರೆಡ್‌ಸೀರ್‌ನ ವರದಿಯ ಪ್ರಕಾರ, ಬಂಡವಾಳ ಕುಸಿಯುತ್ತಿದ್ದಂತೆ, ಸ್ಟಾರ್ಟ್‌ಪ್‌ಗಳು ತಮ್ಮ ಖರ್ಚು ವೆಚ್ಚ ಕಡಿಮೆ ಮಾಡುತ್ತಿವೆ ಮತ್ತು ಲಾಭದಾಯಕತೆಯ ಹಾದಿಯನ್ನು ತ್ವರಿತಗೊಳಿಸುತ್ತಿವೆ. ಬಂಡವಾಳ …
Read More »
BigTv News
June 27, 2023
News, ಕ್ರಿಕೆಟ್, ಕ್ರೀಡೆ, ದೆಹಲಿ
ಕಿವೀಸ್-ಆಂಗ್ಲರ ನಡುವೆ ಮೊದಲ ಪಂದ್ಯದೆಹಲಿ: ಬಹುನಿರೀಕ್ಷಿತ ವಿಶ್ವಕಪ್-2023ರ ಸಾಲಿನ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಮಧ್ಯಾಹ್ನ ಮುಂಬೈನಲ್ಲಿ ಬಿಡುಗಡೆಗೊಂಡಿದೆ. ಅಕ್ಟೋಬರ್ 5 ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಕಳೆದ ಬಾರಿ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಜಿಲ್ಯಾಂಡ್ ಕಾದಾಟದ ಮೂಲಕ ಟೂರ್ನಿಗೆ ಶುಭಾರಂಭ ಲಭಿಸಲಿದೆ. ಅತ್ತ ಚೆನ್ನೈನ ಚಿಪಾಕ್ ಮೈದಾನದಲ್ಲಿ ಅಕ್ಟೋಬರ್ ೮ರಂದು ಆಸ್ಟ್ರೇಲಿಯಾ ವಿರುದ್ಧ ಕಾದಾಟ ನಡೆಸುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ.ಮುಖ್ಯ ಸುತ್ತಿನಲ್ಲಿ ಪ್ರತಿಯೊಂದು ತಂಡಗಳು …
Read More »
BigTv News
March 24, 2023
Breaking News, National-International, ಕರ್ನಾಟಕ, ದೆಹಲಿ
ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇಂದು ಬೆಳಗ್ಗೆ ಲೋಕಸಭೆ ಅಧಿವೇಶನಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
Read More »
BigTv News
January 2, 2023
News, ದೆಹಲಿ
ದೆಹಲಿ- ಇವತ್ತು ಇಡೀ ದೇಶದ ಜನರ ಚಿತ್ತವೇ ಸುಪ್ರೀಂಕೋರ್ಟ್ ನ ತೀರ್ಪಿನತ್ತ ಎದುರುನೋಡ್ತಾ ಇತ್ತು. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 500, 1000 ಮುಖಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಲಯ ಮಹತ್ವದ ತೀರ್ಪು ಕೊಟ್ಟಿದ್ದು, ನೋಟುಗಳ ಅಮಾನೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ್ದು, ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಆರ್‌ಬಿಐ …
Read More »