Breaking News

ದೆಹಲಿ

ಹಿಜಾಬ್ ವಿವಾದ : ಇಂದು ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಗುರುವಾರ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ …

Read More »

ಹವಮಾನ ಇಲಾಖೆಯಿಂದ ಮಹತ್ವದ ಸೂಚನೆ

ನವದೆಹಲಿ: ಪ್ರಸ್ತುತ ದೇಶದ ಹಲವೆಡೆ ಅಕಾಲಿಕ ಮಳೆ ಅನಾಹುತವನ್ನು ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಕರ್ನಾಟಕ, ದೆಹಲಿ, ಯುಪಿ, ಉತ್ತರಾಖಂಡ ಮತ್ತು ಬಿಹಾರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಮೂರ್ನಾಲ್ಕು ದಿನ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಬಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ದೆಹಲಿಯಲ್ಲಿ 13 ನೇ ತಾರೀಖಿನವರೆಗೆ ಅಧಿಕ ಮಳೆಯಾಗಬಹುದು ಎಂದು ಅದು ಹೇಳಿದೆ. ಈ ಸಮಯದಲ್ಲಿ ತಾಪಮಾನ …

Read More »

ದೆಹಲಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್ ರಾಜಿನಾಮೆ

ನವದೆಹಲಿ: ಹಿಂದೂ ದೇವರು ಮತ್ತು ದೇವತೆಗಳ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ದೆಹಲಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನೂ ಅವರು ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ, ಅವರ ರಾಜೀನಾಮೆ ಬಳಿಕ ಬಿಜೆಪಿ ಮತ್ತೊಮ್ಮೆ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದೆ. ಏತನ್ಮಧ್ಯೆ, ಆಜ್ ತಕ್ ಜೊತೆಗಿನ ವಿಶೇಷ ಸಂವಾದದಲ್ಲಿ ರಾಜೇಂದ್ರ ಪಾಲ್ ತಮ್ಮ ರಾಜೀನಾಮೆಯ ಕಾರಣವನ್ನು ನೀಡಿದ್ದಾರೆ. ಇದರೊಂದಿಗೆ ಬಿಜೆಪಿಯನ್ನೂ …

Read More »

ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ರಾಷ್ಟ್ರಪತಿಗಳಿಗೆ ಶಿಫಾರಸು ಸಲ್ಲಿಕೆ

ನವದೆಹಲಿ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ಅಮಿತ್ ಶಾ ನೇತೃತ್ವದ ಸಂಸತ್ ಅಧಿಕೃತ ಭಾಷಾ ಸಮಿತಿ ರಾಷ್ಟ್ರಪತಿಗಳಿಗೆ ಶಿಫಾರಸು ಸಲ್ಲಿಸಿದೆ. ಹಿಂದಿ ಬೆಳೆಸಲು 112 ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿಗಳಿಗೆ ಸೆಪ್ಟಂಬರ್ ನಲ್ಲಿ ಅಮಿತ್ ಶಾ ನೇತೃತ್ವದ ಸಮಿತಿ ಸಲ್ಲಿಸಿದೆ. ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ ಸೇರಿದಂತೆ ಐಐಟಿಯಂತಹ ಉನ್ನತ ತಾಂತ್ರಿಕ ಸಂಸ್ಥೆಗಳಲ್ಲಿಯೂ ಇಂಗ್ಲಿಷ್ ಬದಲಿಗೆ ಹಿಂದಿ ಮಾಧ್ಯಮದಲ್ಲಿ ಬೋಧನೆ …

Read More »

ಇಂದಿನಿಂದ ಬಜೆಟ್‌ ಸಿದ್ಧತೆ ಪ್ರಾರಂಭ

ನವದೆಹಲಿ: ಮುಂದಿನ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ ಇರುವ ಬಜೆಟ್‌ ಸಿದ್ಧತೆಯನ್ನು ಕೇಂದ್ರ ಸರ್ಕಾರ ಸೋಮವಾರದಿಂದ ಶುರು ಮಾಡಲಿದೆ. ಜಗತ್ತಿನ ವಿತ್ತೀಯ ವ್ಯವಸ್ಥೆಗೆ ಮತ್ತೆ ಹಿಂಜರಿತ ಉಂಟಾಗಲಿದೆ ಎಂಬ ಆತಂಕದ ನಡುವೆಯೇ ದೇಶದ ಅರ್ಥ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಉತ್ತೇಜನಾ ಕ್ರಮಗಳನ್ನು ಸಚಿವೆ ನಿರ್ಮಲಾ ಸೀತಾರಾಮನ್‌ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಜೆಟ್‌ ಪೂರ್ವ ಸಿದ್ಧತೆಯ ಮೊದಲ ದಿನದಿಂದಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೇಂದ್ರ ಪರಿಸರ, ಅರಣ್ಯ …

Read More »

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Read More »

ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,754 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 30362 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,47,344 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 3,97,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,88,17,589 ಡೋಸ್ …

Read More »

ಚೀತಾ ಹೆಲಿಕ್ಯಾಪ್ಟರ್ ಪತನ : ಪೈಲೆಟ್ ಸಾವು

ನವದೆಹಲಿ : ಭಾರತೀಯ ವಾಯುಸೇನೆಯ ಚೀತಾ ಹೆಲಿಕ್ಯಾಪ್ಟರ್ ಇಂದು ಅರುಣಾಚಲ ಪ್ರದೇಶದ ತಾವಂಗ್ ಜಿಲ್ಲೆಯಲ್ಲಿ ಚೀನಾ ಜೊತೆಗಿನ ಗಡಿ ಸಮೀಪ ಪತನಗೊಂಡಿದ್ದು ಹೆಲಿಕ್ಯಾಪ್ಟರ್ ನ ಪೈಲೆಟ್ ಮೃತಪಟ್ಟಿದ್ದಾರೆ. ಫಾರ್ವರ್ಡ್ ಪ್ರದೇಶದಲ್ಲಿ ನಿಯಮಿತ ಹಾರಾಟ ನಡೆಸುತ್ತಿರುವ ವೇಳೆ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹೆಲಿಕ್ಯಾಪ್ಟರ್ ಪತನಕ್ಕೆ ಕಾರಣ ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು ರಕ್ಷಣಾ ಇಲಾಖೆಯ ವಕ್ತಾರ ಕರ್ನಲ್ ಎ ಎಸ್ ವಾಲಿಯ ಹೇಳಿದ್ದಾರೆ. ಹೆಲಿಕ್ಯಾಪ್ಟರ್ …

Read More »

ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ : ಇದೀಗ ಪೋಲಿಸ್ ರ ಅತಿಥಿ

ನವದೆಹಲಿ: ನೂರೆಂಬತ್ತು ಕೆ.ಜಿ. ತೂಕದ 23 ವರ್ಷದ ಯುವಕನೊಬ್ಬ ಪೊಲೀಸ್ ಸಮವಸ್ತ್ರ ಧರಿಸಿ, ಇನ್​ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಕೊನೆಗೂ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೋಸ ಮಾಡಲು ಹೋಗಿ ಸಿಕ್ಕಿಹಾಕಿಕೊಂಡವನ ಹೆಸರು ಮುಖೇಶ್ ಯಾದವ್. ಉತ್ತರಪ್ರದೇಶದ ಘಾಜಿಯಾಬಾದ್ ನಿವಾಸಿಯಾಗಿರುವ ಮುಖೇಶ್ ಯಾದವ್, ತುಂಡ್ಲಾದ ಜರೌಲಿಕಾಲ ಮೋರ್​ನ ರಾಜಾತಾಲ್​ ಚೌಕಿ ಬಳಿ ಇನ್​ಸ್ಪೆಕ್ಟರ್ ಸಮವಸ್ತ್ರ ಧರಿಸಿ ರಾತ್ರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದನ್ನು ಚಾಳಿ …

Read More »

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ, ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೊಂಡಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು. ಹೀಗಾಗಿ …

Read More »