Breaking News

ದೆಹಲಿ

ವಿವಿಧ ನಿಯಮಗಳನ್ನು ವಿರೋಧಿಸಿ ದೆಹಲಿಯಲ್ಲಿ ಬೃಹತ್‌ ರ್‍ಯಾಲಿ

ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನಿಯಮಗಳನ್ನು ವಿರೋಧಿಸಿ ಕಾಂಗ್ರೆಸ್‌ ಭಾನುವಾರ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ರ್‍ಯಾಲಿ ನಡೆಸಲಿದೆ. ಈ “ಮೆಹಂಹಾಯಿ ಪರ್‌ ಹಲ್ಲಾ ಬೋಲ್‌’ ರ್‍ಯಾಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.

Read More »

ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಸಾಂಕ್ರಾಮಿಕ ರೋಗ ಭೀತಿ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 7,219 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,965 ಜನರು ಸಾವನ್ನಪ್ಪಿದ್ದಾರೆ.ಇನ್ನು ದೇಶದಲ್ಲಿ 56,745 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,65,016 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 25,83,815 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, …

Read More »

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು.  ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ. ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ …

Read More »

ಕಾಂಗ್ರೆಸ್ ಹೊಸ ಪಕ್ಷದ ಅಧ್ಯಕ್ಷ ರ ಆಯ್ಕೆಗೆ ಮೂಹರ್ತ ಫಿಕ್ಸ್

ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ಎಐಸಿಸಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ನಿಗದಿಪಡಿಸಿತು. ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಎಣಿಕೆಯ ನಂತರ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ. ಸೆಪ್ಟೆಂಬರ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ಮತ್ತು 30ರ ನಡುವೆ ನಾಮಪತ್ರ ಸಲ್ಲಿಸುವ ದಿನಾಂಕ ಇರುತ್ತದೆ. ನಾಮಪತ್ರ ಹಿಂಪಡೆಯಲು …

Read More »

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಬೇಕು : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಇಡೀ ಪರಿಸ್ಥಿತಿ ಸ್ಪಷ್ಟವಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಎಂದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು …

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ …

Read More »

2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೋಲು: ಡಾ. ಸುಬ್ರಮಣಿಯನ್ ಸ್ವಾಮಿ

ನವದೆಹಲಿ : ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೋರಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ರಾಮ ಸೇತುವನ್ನು ಪ್ರಾಚೀನ ಪರಂಪರೆಯ ಸ್ಮಾರಕವನ್ನಾಗಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಈ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಒಂದು ವೇಳೆ …

Read More »

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗೆ ವಿದೇಶಕ್ಕೆ ಪ್ರಯಾಣ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ. ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್‌ 4ರಂದು ರಾಹುಲ್‌ ಗಾಂಧಿ ಅವರು ‘ಮೆಹಂಗಾಯಿ ಪರ್‌ ಹಲ್ಲಾ ಬೋಲ್‌’ ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು …

Read More »

ಕಾಂಗ್ರೆಸ್ ಪಕ್ಷದ ಆನಂದ ಶರ್ಮಾ ರಾಜಿನಾಮೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಜಿ 23 ಸಹವರ್ತಿ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಪಕ್ಷದ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಶರ್ಮಾ, ಪಕ್ಷದ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸದ ಕಾರಣ ಅವರ ಆತ್ಮಗೌರವಕ್ಕೆ ಧಕ್ಕೆಯಾಗಿರುವುದರಿಂದ …

Read More »

ಇಂಡಿಯಾ ಪೋಸ್ಟ್ ನಲ್ಲಿ‌ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಇಂಡಿಯಾ ಪೋಸ್ಟ್ ನೇಮಕಾತಿ 2022: indiapost.gov.inನಲ್ಲಿ ದೇಶದ 23 ವಲಯಗಳಲ್ಲಿರುವ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ಮ್ಯಾನ್, ಮೇಲ್ ಗಾರ್ಡ್ಗಳು ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ವೆಬ್ಸೈಟ್ನಿಂದ ನೇಮಕಾತಿ ಅಧಿಸೂಚನೆಯನ್ನು ಓದಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಒಟ್ಟು 98,083 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಷ್ಟ್ರದಾದ್ಯಂತ ಇರುವ ಸರಿ ಸುಮಾರು ೨೩ ವಲಯಗಳಲ್ಲಿರುವ …

Read More »