Breaking News

ದೆಹಲಿ

ದೆಹಲಿಯಲ್ಲಿ ದಿನೆ ದನೇ ಏರಿಲೆಯಾಗುತ್ತಿರುವ ಕೊರೋನಾ ಪ್ರಕರಣಗಳು

ದೆಹಲಿ: ನಿಲ್ಲದ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 15 ದಿನಗಳಲ್ಲಿ ಸೋಂಕಿನಿಂದ ಆಸ್ಪತ್ರೆ ದಾಖಲಾಗುತ್ತಿರುವವ ಸಂಖ್ಯೆ ಶೇ 60ರಷ್ಟು ಹೆಚ್ಚಾಗಿದ್ದು ಕೃತಕ ಆಮ್ಲಜನಕದ ಸಹಾಯದಿಂದ ಉಸಿರಾಡುತ್ತಿರವವರ ಸಂಖ್ಯೆ 2 ಪಟ್ಟು ಏರಿಕೆಗೊಂಡಿದೆ. ದೆಹಲಿಯಲ್ಲಿ ಮಂಗಳವಾರ 917 ಕೊರೊನಾ ಪ್ರಕರಣ ದೃಢಪಟ್ಟಿದ್ದು, ಅದರಲ್ಲಿ 563 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲೂ 202 ಮಂದಿ ಐಸಿಯೂ ನಲ್ಲಿದ್ದಾರೆ. ಮೂವರು ಮೃತಪಟ್ಟಿದ್ದಾರೆ. ಆ.9ರಂದು 2495 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೇವಲ ಶೇ …

Read More »

5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ ಮಾಡಲಿದ್ದೇವೆ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ವೆಬ್‌ಸೈಟ್‌ನಲ್ಲಿ ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಾಷ್ಟ್ರ ಧ್ವಜದ ಜತೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ಸಿಬ್ಬಂದಿ ನೇಮಕ ಕಾರ್ಯ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿಯೂ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆ ಭರ್ತಿ …

Read More »

ಹರ್ ಘರ್ ತಿರಂಗಾ ಅಭಿಯಾನದ ವೆಬ್‌ಸೈಟ್‌ನಲ್ಲಿ 5 ಕೋಟಿಗೂ ಹೆಚ್ಚು ಸೆಲ್ಫಿ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ವೆಬ್‌ಸೈಟ್‌ನಲ್ಲಿ ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಾಷ್ಟ್ರ ಧ್ವಜದ ಜತೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಇದೊಂದು ಅದ್ಭುತ ಸಾಧನೆ ಎಂದು ಸಚಿವಾಲಯ ಬಣ್ಣಿಸಿದೆ. 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ವೈಭವೋಪೇತವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ‘ಅಮೃತ ಕಾಲ’ದ …

Read More »

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್‌

ನವದೆಹಲಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭರ್ಜರಿ ಸಂಭ್ರಮಾಚರಣೆಗೆ ನವದೆಹಲಿ ಸಜ್ಜಾಗಿದ್ದು, ಈ ಬಾರಿ ಹಿಂದೆಂದಿಗಿಂತಲೂ ಉಗ್ರರ ದಾಳಿಯ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್‌ ಮಾಡಲಾಗಿದ್ದು, ಹೈಅಲರ್ಟ್‌ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಆ.15ರ ಸೋಮವಾರ ಕೆಂಪುಕೋಟೆಯ ಮೇಲೆ ರಾಷ್ಟ್ರ ಧ್ವಜಾರೋಹಣ ನಡೆಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸುಮಾರು 7000 ಜನರನ್ನು ಆಹ್ವಾನಿಸಲಾಗಿದ್ದು, ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು …

Read More »

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಕೆಂಪು ಕೋಟೆ ಪೊಲೀಸರ ಭದ್ರಕೋಟೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ …

Read More »

ಈದ್ ಉಲ್ ಅಧಾ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ..!

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ದೇಶಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ …

Read More »

ಪೊಲೀಸರು ತಳ್ಳಿದ ಪರಿಣಾಮ : ಪಿ. ಚಿದಂಬರಂ ಎಡ ಪಕ್ಕೆಲುಬು ಮೂಳೆ ಮುರಿತ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದು ಕಡೆ ಸಂಸದ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರೆ, ದೇಶದ ಹಲವೆಡೆ ಕಾಂಗ್ರೆಸ್ ನಾಯಕರು ಇಡಿ ಅಧಿಕಾರಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯ ವೇಳೆ ಪೊಲೀಸರು ತಳ್ಳಿದ ನಂತರ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಪಿ. ಚಿದಂಬರಂ ಎಡ ಪಕ್ಕೆಲುಬು ಮೂಳೆ ಮುರಿತಕ್ಕೆ ಒಳಗಾಗಿದೆ ಎಂದು …

Read More »

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ …

Read More »

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ನವದೆಹಲಿ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ( 78 ವರ್ಷ) ಅವರು ದುಬೈನಲ್ಲಿ ನಿಧನರಾಗಿದ್ದರು. ಪರ್ವೇಜ್ ಮುಷರಫ್ ಅವರು ಪಾಕಿಸ್ತಾನಿ ರಾಜಕಾರಣಿ ಮತ್ತು ನಿವೃತ್ತ ಫೋರ್-ಸ್ಟಾರ್ ಜನರಲ್ ಆಗಿದ್ದಾರೆ. ಅವರು 1999 ರಲ್ಲಿ ಫೆಡರಲ್ ಸರ್ಕಾರದ ಯಶಸ್ವಿ ಮಿಲಿಟರಿ ಸ್ವಾಧೀನದ ನಂತರ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಪರ್ವೇಜ್ ಮುಷರಫ್ ಅವರು 2001 ರಿಂದ 2008 ರವರೆಗೆ ಅಧ್ಯಕ್ಷರಾಗಿದ್ದರು. ಅಲ್ಲದೇ ಸ್ವಲ್ಪ ವರ್ಷದಲ್ಲಿಯೇ ತಮ್ಮ ಹುದ್ದೆಗಳಿಗೆ ರಾಜೀನಾಮೆಯನ್ನು …

Read More »

ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕಿತರ  ಸಂಖ್ಯೆಯಲ್ಲಿ ಏರಿಕೆ ಯಾಗುತ್ತಿದ್ದು, ಕಳೆದ 24 ಗಂಟೆಗಳಲ್‌ಇ 8,329 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್‌ಇ 8,329 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »