admin
May 2, 2022
Breaking News, ದೆಹಲಿ
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,157 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 3,157 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »
admin
May 1, 2022
Breaking News, ದೆಹಲಿ
ನವದೆಹಲಿ: ಬಸವರಾಜ ಬೊಮ್ಮಾಯಿ ವೀಕೆಸ್ಟ್ ಮುಖ್ಯಮಂತ್ರಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು, ‘ನನ್ನ ಆಡಳಿತದಲ್ಲಿ ಅವರಿಗೆ (ಡಿ.ಕೆ. ಶಿವಕುಮಾರ್) ತೊಂದರೆ ಆಗಿದೆ. ಅವರು ಏನೆನೋ ಪ್ರಯತ್ನ ಮಾಡಿದರೂ ಯಶಸ್ವಿ ಆಗಿಲ್ಲ. ನಾನು ಸರಳವಾಗಿ ಆಡಳಿತ ಮಾಡಿಯೇ ಅವರಿಗೆ ತೊಂದರೆ ಆಗಿದೆ. ಇನ್ನು ಸ್ಟ್ರಾಂಗ್ ಆಗಿ ಆಡಳಿತ ಮಾಡಿದರೆ ಅವರಿಗೆ ತಡೆದುಕೊಳ್ಳೊಕೆ ಆಗುವುದಿಲ್ಲ’ ಎಂದು ತಿರುಗೇಟು ನೀಡಿದರು. ಹಿಟ್ …
Read More »
admin
April 23, 2022
Breaking News, ದೆಹಲಿ
ನವದೆಹಲಿ: ಎರಡು ದಿನಗಳ ಭಾರತದ ಪ್ರವಾಸದಲ್ಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಮಹತ್ವದ ಮಾತುಕತೆಯಲ್ಲಿ ಭಾಗಿಯಾಗಿ ಕೋವಿಡ್ ಲಸಿಕೆ ವಿಚಾರವಾಗಿ ಮಾತನಾಡುತ್ತಾ, ‘ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ. ಇದಕ್ಕಾಗಿ ನಾನು ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದರು. ಈ ವೇಳೆ ಭಾರತದಲ್ಲೇ ತಯಾರುಗೊಂಡಿರುವ ಕೋವಿಡ್ ಲಸಿಕೆಯನ್ನು ತಾವು ಪಡೆದುಕೊಂಡಿರುವ ವಿಚಾರ ಬಹಿರಂಗಪಡಿಸಿದರು. ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ …
Read More »
admin
April 13, 2022
Breaking News, ದೆಹಲಿ
ಹೊಸದಿಲ್ಲಿ: ಈ ಬಾರಿಯ ಮುಂಗಾರು ಮಳೆ ಸಹಜವಾಗಿ ಸುರಿಯಲಿದ್ದು, ಶೇ. 98ರಷ್ಟು ದೀರ್ಘಕಾಲಿಕ ಸರಾಸರಿ (ಎಲ್‌ಪಿಎ) ಮಳೆ ತರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನ ಸಂಸ್ಥೆ ಸ್ಕೈಮೆಟ್ ಹೇಳಿದೆ. ಮುಂಗಾರಿನ ಮೊದಲ ಅರ್ಧ ಭಾಗ ಅಂದರೆ ಜೂನ್-ಜುಲೈ ಅವಧಿಯಲ್ಲಿ ಉತ್ತರಾರ್ಧದ ಆಗಸ್ಟ್ ಮತ್ತು ಸಪ್ಟೆಂಬರ್‌ಗಿಂತ ಉತ್ತಮ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ.
Read More »
admin
April 10, 2022
Breaking News, ದೆಹಲಿ
ನವದೆಹಲಿ: “ಉತ್ತರ ಪ್ರದೇಶ ಚುನಾವಣೆಗೂ ಮುನ್ನ ನಾವು ಮಾಯಾವತಿಯವರ ಬಿಎಸ್‌ಪಿ ಪಕ್ಷದ ಜೊತೆಗೆ ಕೈ ಜೋಡಿಸಲು ಸಿದ್ಧವಾಗಿದ್ದೆವು. ಮಾಯಾವತಿಯವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಸಹ ಒಪ್ಪಿದ್ದೆವು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ “ದ ದಲಿತ್ ಟ್ರಾತ್’ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
Read More »
admin
April 7, 2022
Breaking News, ದೆಹಲಿ
ನವದೆಹಲಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮತ್ತುಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ರಾಷ್ಟ್ರೀಯ ಯೋಜನೆ ಎಂದು ಘೋಷಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅಂದಾಜು ₹ 23,000 ಕೋಟಿ ವೆಚ್ಚ ತಗುಲಲಿದೆ. ಕೇಂದ್ರದ ಪಾಲನ್ನು ಕೂಡಲೇ ಬಿಡುಗಡೆ ಮಾಡಲು ಕೇಂದ್ರ ಸಚಿವರನ್ನು ಕೋರಲಾಗಿದೆ …
Read More »
admin
April 7, 2022
Breaking News, ದೆಹಲಿ
ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಯೋಜನೆ ಮತ್ತು ಸಂಪುಟ ವಿಸ್ತರಣೆಗಳ ಬಗ್ಗೆ ಕೇಂದ್ರ ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ಅವರು ಬುಧವಾರ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್, ಧರ್ಮೇಂದ್ರ ಪ್ರಧಾನ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದರು. ಮಂಗಳವಾರ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ …
Read More »
admin
April 6, 2022
Breaking News, ದೆಹಲಿ
ನವದೆಹಲಿ: ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರುಷೋತ್ತಮ್ ರೂಪಾಲಾ ಅವರು, ಹೈನುಗಾರರಿಗೆ ಕೆಸಿಸಿ ಒದಗಿಸಲು ಸರ್ಕಾರವು ವಿಶೇಷ ಅಭಿಯಾನವನ್ನು ಸಹ ಆಯೋಜಿಸಿದೆ ಎಂದು ಹೇಳಿದರು. ಈ ವರ್ಷದ ಮಾರ್ಚ್ 25 ರವರೆಗೆ ದೇಶದ ಹಾಲಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕ ಕಂಪನಿಗಳಿಗೆ ಸಂಬಂಧಿಸಿದ ಅರ್ಹ ಹೈನುಗಾರರಿಗೆ ಸುಮಾರು 15 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಮಂಜೂರು ಮಾಡಲಾಗಿದೆ. ಈ ಕಾರ್ಡ್‌ಗಳು 10,974 …
Read More »
admin
April 5, 2022
Breaking News, ದೆಹಲಿ
ದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್ ಗೆ 9.20 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ …
Read More »
admin
April 5, 2022
Breaking News, ದೆಹಲಿ
ನವದೆಹಲಿ: ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಮತ್ತು ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಸೋಮವಾರ ಆದೇಶಿಸಿದೆ. ರಾಷ್ಟ್ರೀಯ ರೆಸ್ಟಾರೆಂಟ್ ಸಂಘ (ಎನ್‌ಆರ್‌ಎಐ) ಸಲ್ಲಿಸಿದ ದೂರು ಆಧರಿಸಿ ಈ ಆದೇಶ ಹೊರಡಿಸಲಾಗಿದೆ. ಈ ಕಂಪನಿಗಳ ಮಾರುಕಟ್ಟೆ ಶಕ್ತಿಯನ್ನು ತೋರಿಸುತ್ತಿದೆ. ಸಮಾನ ನೆಲೆಯಲ್ಲಿ ಆಗಬೇಕಿರುವ ಸ್ಪರ್ಧೆಯ ಮೇಲೆ ಪರಿಣಾಮ ಉಂಟುಮಾಡುವಷ್ಟು ಇವು ಶಕ್ತಿಶಾಲಿ ಆಗಿರುವುದನ್ನೂ ತೋರಿಸುತ್ತಿದೆ’ ಎಂದು ಸಿಸಿಐ ಹೇಳಿದೆ.
Read More »