Breaking News

ದೆಹಲಿ

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ : ದೇಶದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ಮೂಲಕ ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8.40 ರೂ.ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸೋಮವಾರ ಪ್ರತಿ ಲೀಟರ್ಗೆ 40 ಪೈಸೆಯಷ್ಟು ಏರಿಕೆಯಾಗಿದ್ದು, ಇಲ್ಲಿಯವರೆಗೆ 14 ದಿನಗಳಲ್ಲಿ ಹನ್ನೆರಡು ಪರಿಷ್ಕರಣೆಗಳಲ್ಲಿ ಪ್ರತಿ ಲೀಟರ್ಗೆ ಸುಮಾರು ₹ 8.40 ರಷ್ಟು ಏರಿಕೆಯಾಗಿದೆ.

Read More »

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಪ್ರಧಾನಿ ಸಂವಾದ ಕಾರ್ಯಕ್ರಮದಲ್ಲಿ ಧಾರವಾಡ 2 ವಿದ್ಯಾರ್ಥಿನಗಳು ಆಯ್ಕೆ

ದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಇಂದು ಬೆಳಿಗ್ಗೆ 10 ಗಂಟೆಯಿಂದ ನವದೆಹಲಿಯ ತಾಲ್ಕಡೋರಾ ಕ್ರೀಡಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಧಾರವಾಡ ಕೇಂದ್ರೀಯ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪೋಷಕರು ಆಯ್ಕೆಯಾಗಿದ್ದಾರೆ . ಇಬ್ಬರು ವಿದ್ಯಾರ್ಥಿಗಳಾದ ಬಿ . ಮುರಳೀಧರ , ಪ್ರಣವ ಲಿಂಗದಳ್ಳಿ ಹಾಗೂ ಪಾಲಕರಾದ ಜ್ಯೋತಿ . ಬಿ.ಎನ್.ಅವರಿಗೆ ನೇರವಾಗಿ ಪ್ರಧಾನ ಮಂತ್ರಿಯವರೊಡನೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ದೊರೆತಿದೆ . ಉಳಿದಂತೆ ಧಾರವಾಡ ಜಿಲ್ಲೆಯಲ್ಲಿ 6 ನೇ …

Read More »

ಯುಗಾದಿ ಹಬ್ಬದ ದಿನ ಜನತೆಗೆ ಬಿಗ್ ಶಾಕ್

ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ .

Read More »

ದೆಹಲಿಗೆ ಪ್ರಯಾಣ ಮಾಡಲು ಡಿಕೆಶಿಗೆ ಅನುಮತಿ ನೀಡಿದ ಹೈಕೋರ್ಟ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು …

Read More »

ಗ್ರಾಮೀಣ ಜನೆತೆಗೆ ಸಿಹಿ‌ ಸುದ್ದಿ ನೀಡಿದ ಪ್ರಧಾನಿ

ನವದೆಹಲಿ: ಗ್ರಾಮೀಣ ಬಡವರಿಗೆ ಮನೆ ಒದಗಿಸುವ ಅಭಿಯಾನವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಬದ್ಧತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ವಾಸ್ತವ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.

Read More »

ಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: ಭಾರತದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುವ 40 ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ವಿಶೇಷ ಮನ್ನಣೆ ನೀಡಿರುವಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. ಕೃಷಿ ಸಂಶೋಧಕ ಅಬ್ದುಲ್ ಖಾದರ್ ಅವರ ನುಡಿ : ನಾನೊಬ್ಬ ಸಾಮಾನ್ಯ ರೈತ. ಆದರೆ, ಕಳೆದ 35 ವರ್ಷಗಳಲ್ಲಿ ಕೃಷಿಯಲ್ಲಿ ಬಳಸುವ ಯಂತ್ರಗಳ ಕುರಿತು ನಾನು ನಡೆಸಿದ ಸಂಶೋಧನೆಗೆ ಭಾರತ …

Read More »

ಕೇಂದ್ರ ಸರ್ಕಾರ ನೀತಿ ವಿರೋಧಿಸಿ ಇಂದು ಮುಷ್ಕರ

ನವದೆಹಲಿ: ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ. ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು ಮತ್ತು ನಾಳೆ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.

Read More »

ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಶೇ.100 ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ …

Read More »

ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ ಪ್ರಕಾಶ್​ ರಾಜ್​

ದೆಹಲಿ : ನಟ ಹಾಗೂ ರಾಜಕಾರಣಿ ಪ್ರಕಾಶ್​ ರಾಜ್​ ಅವರ ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ್ದು, ಭಾರಿ ಸದ್ದು ಮಾಡುತ್ತೀದೆ.ಪ್ರಕಾಶ್​ ರಾಜ್​ ಅವರು ಮಾಡಿರುವ ಟ್ವೀಟ್​ ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್​ ಆಸ್ಕಿಂಗ್​ ಎಂದು ಟ್ವೀಟ್​ ಮಾಡಿದ್ದಾರೆ. ಟ್ವೀಟ್​ ಜತೆಗೆ ಕಾಶ್ಮೀರ ಫೈಲ್ಸ್​ …

Read More »