Breaking News

ದೆಹಲಿ

ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್​ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್​ಸಿಂಗ್​ ಗ್ರಾಮವಾದ, ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

Read More »

ದ ಕಾಶ್ಮೀರ್ ಫೈಲ್ಸ್ ಪ್ರಧಾನಿ ಸಂದೇಶ : ಕಾಂಗ್ರೆಸ್ ಆಕ್ರೋಶ ವ್ಯಕ್ತ

ಹೊಸದಿಲ್ಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷ ಮತ್ತು ಸುಳ್ಳು ಹರಡುವ ಮೂಲಕ ಎಷ್ಟು ರಾಜಕೀಯ ಅವಕಾಶಗಳನ್ನು ಪಡೆಯಲು ಬಯಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

Read More »

ಕಾಶ್ಮೀರ್‌ ಫೈಲ್ಸ್‌ ಸಿನಿಮಾ ಅಪಪ್ರಚಾರ : ಪ್ರಧಾನಿ ಗರಂ

ನವದೆಹಲಿ: ‘ಕಾಶ್ಮೀರ್‌ ಫೈಲ್ಸ್‌ ’ಸಿನಿಮಾವನ್ನು ನೋಡಿ, ಅದರಲ್ಲಿ ಏನಿದೆ ಎಂಬುದನ್ನು ವೀಕ್ಷಿಸಿ ಸತ್ಯ ಪರೀಕ್ಷಿಸುವ ಬದಲು ಅದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ವಾಕ್‌ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂದು ಪ್ರತಿಪಾದಿಸುವ ಕೆಲವರು 5-6 ದಿನಗಳಿಂದ ವ್ಯಗ್ರರಾಗಿದ್ದಾರೆ. ಬಹಳ ಕಾಲದಿಂದ ಉದ್ದೇಶ ಪೂರ್ವಕವಾಗಿ ಮುಚ್ಚಿಟ ಸತ್ಯ ಈಗ ಬಹಿರಂಗವಾಗಿರುವುದಕ್ಕೆ ಕೆಲವರಿಗೆ ಅಸಮಾಧಾನ ಇದೆ ಎಂದೂ ಮೋದಿ ಛೇಡಿಸಿದ್ದಾರೆ. …

Read More »

12 ರಿಂದ 14 ವರ್ಷ ಮಕ್ಕಳಿಗೆ ಕೋವಿಡ್ ಲಸಿಕೆ ಘೋಷಣೆ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಲ್ಲಿ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಸೋಮವಾರ 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆಯನ್ನು ಘೋಷಿಸಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ಮಕ್ಕಳು ಮತ್ತು ವೃದ್ಧರ ಪೋಷಕರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ …

Read More »

ನವೀನ್ ಮೃತದೇಹವನ್ನು ಭಾರತಕ್ಕೆ ತರಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಸೂಚನೆ : ಮೋದಿ

ನವದೆಹಲಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಉಕ್ರೇನ್‍ನಲ್ಲಿ ಕಳೆದ ಮಾರ್ಚ್ 1ರಂದು ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.

Read More »

ಇಂದಿನಿಂದ ಕೇಂದ್ರ ಬಜೆಟ್ ಪ್ರಾರಂಭ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದ ಎರಡನೇ ಭಾಗವು ಇಂದಿನಿಂದ ಆರಂಭವಾಗಲಿದೆ. ಕೇಂದ್ರ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳುವುದು ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ ಮಂಡನೆ ಸರ್ಕಾರದ ಪ್ರಮುಖ ಗುರಿಯಾಗಿದೆ. ಭವಿಷ್ಯ ನಿಧಿ ಬಡ್ಡಿ ದರ ಇಳಿಕೆ ಸೇರಿದಂತೆ ನಾನಾ ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ.

Read More »

ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,614 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 89 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

Read More »

ಅಖಿಲೇಶ್ ಯಾದವ್ ಗೆ ಭರ್ಜರಿ ಜಯ

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯ ಎಸ್‌ಪಿ ಸಿಂಗ್ ಬಘೇಲ್ ಅವರನ್ನು 67,000 ಮತಗಳಿಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಲಿಸಿದ್ದಾರೆ. ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯ ಕರ್ಹಾಲ್‌ನಿಂದ ಸ್ಪರ್ಧಿಸಿದ್ದುಅಖಿಲೇಶ್ ಯಾದವ್ ಅವರು 1.47 ಲಕ್ಷ ಮತಗಳನ್ನು ಪಡೆದಿದ್ದು, ಬಘೇಲ್ ಅವರ 80,045 ಮತಗಳನ್ನು ಗಳಿಸಿದ್ದಾರೆ.ಅವರು ಕನೌಜ್‌ನಿಂದ ಮೂರು ಬಾರಿ ಲೋಕಸಭಾ ಸಂಸದರಾಗಿದ್ದಾರೆ.

Read More »

ಪಂಚರಾಜ್ಯ ಚುನಾವಣೆಯಲ್ಲಿ 4 ಸ್ಥಾನವನ್ನು ಮುಡಿಗೇರಿಸಿಕೊಂಡ ಬಿಜೆಪಿ

ನವದೆಹಲಿ: ಪಂಚರಾಜ್ಯದ ಚುನಾವಣೆಯಲ್ಲಿ 4 ಸ್ಥಾನವನ್ನು ಬಿಜೆಪಿಯೇ ಬಾಜಿಕೊಂಡಿದೆ. ಎಲ್ಲರೂ ಕಾತುರದಿಂದ ಕಾಯುತ್ತೀದ್ದ ಫಲಿತಾಂಶ ದೊರೆಕಿದೆ.ಉತ್ತರಪ್ರದೇಶ, ಪಂಜಾಬ್‌, ಮಣಿಪುರ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ ಹೊರತು ಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿ ಕರ್ನಾಟಕದ ಬಿ.ಎಲ್‌.ಸಂತೋಷ್‌, ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರಿನ ಸಿ.ಟಿ.ರವಿ, ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ …

Read More »

ಉತ್ತರ ಪ್ರದೇಶ, ಉತ್ತರರಾಖಂಡ್ ಚುನಾವಣೆ ಪ್ರಕಟ: ಬಿಜೆಪಿ ಮುನ್ನಡೆ

ನವದೆಹಲಿ: ಉತ್ತರ ಪ್ರದೇಶ ಚುನಾವಣೆ ಮುಗಿದಿದ್ದು, ಇದೀಗ ಮತಗಳ ಏಣಿಕೆ ಪ್ರಾರಂಭ ವಾಗಿದೆ. ಎಲ್ಲರೂ ಫಿಲತಾಂಶಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಪಂಜಾಬ್ ನಲ್ಲಿ ಆಪ್ 4, ಶಿರೋಮಣಿ ಅಕಾಲಿದಳ 1, ಕಾಂಗ್ರೆಸ್ 1 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಉತ್ತರಾಖಂಡ್ ನಲ್ಲಿ ಬಿಜೆಪಿ 5, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಗೋವಾದಲ್ಲಿ 3 ಕಡೆಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ.ಅಂಚೆ ಮತಗಳ ಎಣಿಕೆ …

Read More »