Breaking News

ದೆಹಲಿ

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಹಿನ್ನೆಲೆ ಸಭೆ ಕರೆದ ಮೋದಿ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಮುಂದುವರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸತತ 2 ಗಂಟೆಗಳ ಕಾಲ ಸಭೆ ನಡೆಸಿದ ಪ್ರಧಾನಿ ಮೋದಿ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕುರಿತು ಚರ್ಚೆ ನಡೆಸಿದ್ದಾರೆ. ತ್ವರಿತಗತಿಯಲ್ಲಿ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಉಕ್ರೇನ್‌ನ ನೆರೆಯ ರಾಷ್ಟ್ರಗಳ ಸಹಕಾರಕ್ಕೆ ಕೂಡ ಸೂಚನೆ ನೀಡಿದ್ದಾರೆ.

Read More »

ಪ್ರತಿಯೊಬ್ಬರಿಗೆ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು: ಮೋದಿ

ನವದೆಹಲಿ: ಪ್ರತಿಯೊಬ್ಬರು ತಮ್ಮ ಮಾತೃ ಭಾಷೆಯನ್ನು ಹೆಮ್ಮೆಯಿಂದ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಅಲ್ಲದೆ ಇಂಥ ಬೆಳವಣಿಗೆಯು, ಇಡೀ ಹೊಸ ತಲೆಮಾರಿಗೆ ಮತ್ತು ಇಡೀ ಜಗತ್ತಿಗೆ ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ಪರಿಚಯಿಸುತ್ತದೆ ಎಂದು ಹೇಳಿದ್ದಾರೆ. ಮಾಸಿಕ ‘ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಸ್ವಾತಂತ್ರ್ಯಾನಂತರದ 75 ವರ್ಷಗಳ ನಂತರವೂ ತಮ್ಮ ಭಾಷೆ, ವಸ್ತ್ರ, ಆಹಾರ ಮತ್ತು ಪಾನೀಯಗಳ ಹಿರಿಮೆ ಬಗೆಗಿನ ಗೊಂದಲ ಮತ್ತು …

Read More »

ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513226 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 134235 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. …

Read More »

ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಯುದ್ದ ನಿಲಿಸುವಂತೆ ಮಾನವಿ ಮಾಡಿದ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು . ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ. “ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ …

Read More »

ಆಫ್‌ಲೈನ್‌ ಪರೀಕ್ಷೆಗಳನ್ನು ಸಲ್ಲಿಕೆ ಮನವಿಗೆ ಸುಪ್ರೀಂ ಕೋರ್ಟ್‌ ನಿರಾಕರಣೆ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹಾಗೂ ಇತರ ಶಿಕ್ಷಣಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಯ ಆಫ್‌ಲೈನ್‌ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌, ದಿನೇಶ್‌ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ಪೀಠವು, ‘ಈರೀತಿಯ ಅರ್ಜಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಸುಳ್ಳು ಭರವಸೆಗಳನ್ನು ಮೂಡಿಸುವುದರ ಜತೆಗೆ ಗೊಂದಲಗಳನ್ನು ಮೂಡಿಸುತ್ತದೆ’ ಎಂದು ಹೇಳಿತು.

Read More »

ಇಂದು 2022ರ ಕೇಂದ್ರ ಬಜೆಟ್ ಅನುಷ್ಠಾನ ಕುರಿತು ಪ್ರಾಧಾನಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದುʻಕೇಂದ್ರ ಬಜೆಟ್ 2022ರ ಬಜೆಟ್ ನಂತರದ ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ‘ಯಾವುದೇ ನಾಗರಿಕರನ್ನು ಹಿಂದೆ ಬಿಡುವುದಿಲ್ಲ ಕಾರ್ಯಕ್ರಮದ ಥೀಮ್ ಆಗಿದೆ. ಬಜೆಟ್‌ನ ಸಕಾರಾತ್ಮಕ ಪರಿಣಾಮದ ಕುರಿತು ಉದ್ದೇಶಪೂರ್ವಕವಾಗಿ ಉದ್ಯಮದ ಮುಖಂಡರು, ನೀತಿ ನಿರೂಪಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ ಮತ್ತು ಸಾಮೂಹಿಕವಾಗಿ ಕೆಲಸ ಮಾಡಲು ಕಾರ್ಯತಂತ್ರಗಳನ್ನು ಗುರುತಿಸುತ್ತದೆ. ಪ್ರತಿಯೊಬ್ಬರ ಉನ್ನತಿಯ ಸಾಮಾನ್ಯ …

Read More »

ಹಿಜಾಬ್ ವಿವಾದ ಕುರಿತು ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು : ಅಮಿತ್ ಶಾ

ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತಂತೆ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದವರು ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯವಾಗಿದೆ. ಈ ವಿಚಾರದಲ್ಲಿ ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ. ಎಲ್ಲಾ ಧರ್ಮದ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ …

Read More »

ಪಂಜಾಬ್‌ ವಿಧಾನಸಭೆಯ ಚುನಾವಣೆ : 3 ನೇ ಹಂತದ ಮತದಾನ ಆರಂಭ

ನವದೆಹಲಿ: ಇಂದು ಪಂಜಾಬ್‌ ವಿಧಾನಸಭೆಯ ಎಲ್ಲಾ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿಗೂ ಹೆಚ್ಚು ಜನರು ಮತದಾರರಿದ್ದಾರೆ. ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 8 …

Read More »

2 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ : ಮನ್‌ಸುಖ್‌ ಮಾಂಡವೀಯಾ

ನವದೆಹಲಿ: ದೇಶದಾದ್ಯಂತ 15ರಿಂದ 18ರ ವಯೋಮಾನದ ಸುಮಾರು 2 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯಾ ತಿಳಿಸಿದ್ದಾರೆ. ಈ ವಯೋಮಾನದ 2 ಕೋಟಿ ಯುವಜನರು ಕೋವಿಡ್‌ ವಿರುದ್ಧ ಈಗ ಲಸಿಕೆ ಪಡೆಯುವ ಮೂಲಕ ಯುವ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನ ನಡೆಸಿದಂತಾಗಿದೆ ಎಂದು ಮಾಂಡವೀಯಾ ಟ್ವೀಟ್‌ ಮಾಡಿದ್ದಾರೆ.

Read More »

ಮನಮೋಹನ್ ಸಿಂಗ್ ವಿರುದ್ಧ ನಿರ್ಮಲಾ ಸೀತಾರಾಮನ್ ತೀವ್ರ ವಾಗ್ದಾಳಿ

ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ಆರ್ಥಿಕತೆಯನ್ನು ಹಳಿಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇದು ನನಗೆ ನೋವುಂಟುಮಾಡುತ್ತದೆ” ಎಂದು ಹೇಳಿರುವ ಸೀತಾರಾಮನ್‌, ಚುನಾವಣಾ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗಳು ಭಾರತವನ್ನು ಕೆಳಕ್ಕೆ ತಲುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ …

Read More »