Breaking News

ದೆಹಲಿ

15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ

ನವದೆಹಲಿ:  ಕೊರೋನಾ ನಿಯಂತ್ರಣಕ್ಕಾಗಿ ಕೊವಿಡ್ ಲಸಿಕೆ ಯನ್ನು ಹಾಕಿಕೊಳ್ಳುವಯೋಮಿತಿಯನ್ನು ಹೇಳಲಾಗುತ್ತು. ಸಣ್ಣ ಮಕ್ಕಳಿಗೆ ಲಸಿಕೆಯನ್ನು ನೀಡುಲು ಸರ್ಕಾರ ಆದೇಶ ಹೊರಡಿಸರಲಿಲ್ಲಾ.  ಆದರೆ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ. ಹೀಗಿರುವಾಗ ಲಸಿಕೆ ನೀಡಿಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಬೇರೆ ಲಸಿಕೆಗಳು ಮಿಶ್ರವಾಗದಂತೆ ನೀಡದಂತೆ ತೀವ್ರ ಎಚ್ಚರ ವಹಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ …

Read More »

ಅವಕಾಶ ಸಿಕ್ಕಾಗಲೆಲ್ಲ ನಾವು ಪುಟಿದೇಳುತ್ತೇವೆ: ವಿರಾಟ್ ಕೊಹ್ಲಿ

ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …

Read More »

ಎಂಇಎಸ್ ಬ್ಯಾನ್‌ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ‌ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …

Read More »

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟಿವ್; ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!

ಶಿಕಾಗೋ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ ಮಹಿಳೆಗೆ ಮಾರ್ಗಮಧ್ಯೆ ಕೋವಿಡ್ ಪಾಸಿಟೀವ್ ಕಾಣಿಸಿಕೊಂಡಿತ್ತು. ಆದ ಕಾರಣ ಆಕೆ ಸತತ ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೊಲೇಟ್ ಆಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಮಿಚಿಗನ್ ನಲ್ಲಿ ಶಿಕ್ಷಕಿಯಾಗಿರುವ ಮಾರಿಸಾ ಫೋಟಿಯೊ, ವಿಮಾನ ಪ್ರಯಾಣದ ಮಾರ್ಗಮಧ್ಯದಲ್ಲಿರಬೇಕಾದರೆ ಆಕೆಗೆ ಗಂಟಲು ಬೇನೆ ಬಾಧಿಸಲು …

Read More »

ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ‌ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …

Read More »

ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ

ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …

Read More »
Featured Video Play Icon

ಬಿಜೆಪಿ ಯಲ್ಲಿ ಎಲ್ಲರೂ ಕಾರ್ಯಕರ್ತರು. ಯಾರೇ ಅಶಿಸ್ತು ತೋರಿದರು ಕಟ್ಟುನಿಟ್ಟಿನ ಕ್ರಮ: ಮಹೇಶ್

Read More »

ಕರ್ನಾಟಕ ಬಂದ್ ಇಲ್ಲವೇ ಇಲ್ಲ: ಗೃಹಮಂತ್ರಿ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.

Read More »
Featured Video Play Icon

ಕೇಂದ್ರ ಸರ್ಕಾರದ ವಿರುದ್ಧ ಜವಳಿ ವ್ಯಾಪಾರಸ್ಥರ ಆಕ್ರೋಶ

Read More »
Featured Video Play Icon

ಬಂದ್ ಕರೆ ಬೇಡ ಕನ್ನಡಪರ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಮನವಿ…!

ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …

Read More »