Breaking News

ಕಲಬುರಗಿ

ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಭೂ ದೂರು ದಾಖಲು

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಭೂ ಕಬಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಅಂಬೇಡ್ಕರ್ ಸ್ಮಾರಕ ಸಮಿತಿಗೆ ಮದುವೆ ಮಂಟಪ ನಿರ್ಮಿಸಲು ನೀಡಿದ 36,000 ಚದರ ಅಡಿ ಭೂಮಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಕಲಬುರಗಿ ಜಿಲ್ಲಾಡಳಿತ 1981ರಲ್ಲಿ ಈ ಭೂಮಿಯನ್ನು ಸಾರ್ವಜನಿಕ ಬಳಕೆಗೆ ನೀಡಿತ್ತು. ಆದರೆ, ಕಳೆದ ಕೆಲವು ವರ್ಷಗಳಿಂದ, ಮದುವೆ …

Read More »

ದೇವೇಗೌಡರ ಮಾತುಕೇಳಿ ಧರಂಸಿಂಗ್ ನನ್ನನ್ನು ಡಿಸ್ ಮಿಸ್ ಮಾಡಿದರು : ಸಿದ್ದರಾಮಯ್ಯ

ಕಲಬುರಗಿ: ಧರಂಸಿಂಗ್ ಅವರ 86 ನೆಯ ಜನ್ಮದಿನದ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿ 108 ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೊಂದು ಬಡವರ ಪರವಾದ ಕಾರ್ಯವಾಗಿದ್ದು, ಶ್ಲಾಘನೀಯ ಎಂದರು. ನಂತರ ಮಾತನಾಡಿದ ಅವರು “2004 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು. ಜೆಡಿಎಸ್ ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ನಾನಾಗ ಜೆಡಿಎಸ್ ಅಧ್ಯಕ್ಷನಾಗಿದ್ದೆ. ಅಂದು ನಡೆದ ಮಾತುಕತೆಯಂತೆ ಧರಂಸಿಂಗ್ ಸಿಎಂ ಆದರು ನಾನು ಉಪಮುಖ್ಯಮಂತ್ರಿಯಾಗಿ …

Read More »

ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ

ಕಲಬುರಗಿ: ಗೃಹಿಣಿಯೊಬ್ಬಳು ಕುರಿಕೋಟಾ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಮಲಾಪುರ ತಾಲೂಕಿನಲ್ಲಿ ನಡೆದಿದೆ. ಸೃಷ್ಟಿ ಮಾರುತಿ (21) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸೃಷ್ಟಿ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ನಿವಾಸಿ. ಡಿಗ್ರಿ ಫೈನಲ್​​ ಇಯರ್​ನಲ್ಲಿ​ ಓದುತ್ತಿದ್ದಳು.ಡಿಸೆಂಬರ್ 13ರಂದು ಕಾಲೇಜಿಗೆ ಹೋಗಿದ್ದ ಮೃತ ಸೃಷ್ಟಿ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮಹಾಗಾಂವ್ ಪೊಲೀಸ್​ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು.ಇನ್ನು ಕಾಣೆಯಾಗಿದ್ದ ಸೃಷ್ಟಿಯ ಮೃತ ದೇಹವು ಇಂದು ಕುರಿಕೋಟಾ ಸೇತುವೆಯ …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

ಕಲಬುರಗಿ: ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ(ಡಿ.9) ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ. ಈತ ಮಾಲಗತ್ತಿಯ ಎಂ.ಎಂ.ಗಾರ್ಡನ್ ಬಳಿಯಲ್ಲಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ಹತನಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಕಾಂಗ್ರೆಸ್ ಪಕ್ಷ ಡ್ರೈವರ್ ಇಲ್ಲದ ಬಸ್ ತರಹ ಆಗಿದೆ :
ಸಿಎಂ ಇಬ್ರಾಹಿಂ ಲೇವಡಿ

ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು. ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು …

Read More »

ನನ್ನ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಬಿರುಕಿಲ್ಲ : ಡಿಕೆಶಿ

ಕಲಬುರಗಿ : ನನ್ನ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಬಿರುಕಿಲ್ಲ. ಸುಖಾಸುಮ್ಮನೆ ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಮಾಧ್ಯಮದವರು ಬಿಂಬಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಿಬ್ಬರ ಮಧ್ಯೆ ಬಿರುಕಿದೆ ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯಲ್ಲಿ ಸದಾನಂದ ಗೌಡ, ಯತ್ನಾಳ್‌ ಹಾಗೂ ವಿಜಯೇಂದ್ರ ಮಧ್ಯೆ ಬಿರುಕಿಲ್ವಾ?. ಮೊದಲು ತಮ್ಮಲ್ಲಿರುವ ಬಿರುಕುಗಳನ್ನು ಬಿಜೆಪಿಯವರು ಮುಚ್ಚಿಕೊಳ್ಳಲಿ ಎಂದರು. ಬಿಜೆಪಿಗೆ …

Read More »

4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ : ಸಿಎಂ

ಕಲ್ಬುರ್ಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ, 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಪನೆ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಶಾಲಾಕೊಠಡಿಗಳಂತೆ ಒಟ್ಟು 2000 ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ …

Read More »

ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ  ಆರೋಪ :
ಬಿಜೆಪಿ ಮುಖಂಡ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರೋಪಿ ಬಂಧನಕ್ಕೆ ಐವರು ಪೊಲೀಸ್‌ ತಂಡ ಹೈದರಾಬಾದ್‌ಗೆ ತೆರಳಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಿಯಾಂಕ್ ಖರ್ಗೆ ಮಾತನಾಡುವ ವೇಳೆ, ತಾಳ್ಮೆ ಮೀರಿದರೆ ಬಿಜೆಪಿಯವರಿಗೆ ಓಡಾಡಲು ಬಿಡುವುದಿಲ್ಲ ಎಂದಿದ್ದಾರೆ. ಅವರ ಕ್ರಿಯೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ’  ವಿಧಾನ ಪರಿಷತ್ ಸದಸ್ಯ ತಿಳಿಸಿದ್ದರು.

Read More »

ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ : ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಕಲಬುರಗಿ: ‘ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ, ಗಂಗಾ ಕಲ್ಯಾಣ ಹಗರಣದಲ್ಲಿ ಸಿಲುಕಿ ಚರ್ಚಗೆ ಬಾರದ ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ನಗದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಆಗಮನಕ್ಕಾಗಿ ಬೆಂಗಳೂರಿನ ರಸ್ತೆಗಳಿಗೆ ತೇಪೆ ಹಚ್ಚಲಾಗುತ್ತಿದೆ. ಪ್ರಧಾನಿ ಬಂದು ಹೋದ ಮೇಲೆ ತೇಪೆ ಹಚ್ಚಿದ ರಸ್ತೆಗಳು ಕಿತ್ತು ಹೋಗುತ್ತವೆ. ಪ್ರಧಾನಿ ಕಚೇರಿಯಿಂದ ಬಂದ …

Read More »

ಸಿಡಿಲು ಬಡಿತಕ್ಕೆ 13 ಆಕಳು, 4 ಎತ್ತು ಬಲಿ

ಕಲಬುರಗಿ: ಸಿಡಿಲು ಹೊಡೆದ ಪರಿಣಾಮ 13 ಆಕಳು, 4 ಎತ್ತು ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಲಕ್ಷ್ಮಣ್ ನಾಯಕ್ ತಾಂಡಾದಲ್ಲಿ ನಡೆದಿದೆ. ತಾಂಡಾದ ಹೊರವಲಯದಲ್ಲಿನ ಗುಡ್ಡದ ಮೇಲೆ ಮೇಯುತ್ತಿದ್ದಾಗ ಸಿಡಿಲು ಬಡಿದಿದೆ. ಲಕ್ಷಾಂತರ ಮೌಲ್ಯದ ಆಕಳು, ಎತ್ತು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Read More »

You cannot copy content of this page