BigTv News
October 2, 2024
Breaking News, ಕಲಬುರಗಿ
ಚಿಂಚೋಳಿ: ಮಹಿಳೆಯೊಬ್ಬರು ಬಟ್ಟೆ ಒಗೆಯುವಾಗ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಘಟನೆ ತಾಲೂಕಿನ ಕರ್ಚಖೇಡ ಗ್ರಾಮದಲ್ಲಿ ನಡೆದಿದೆ. ಕರ್ಚಖೇಡ ಗ್ರಾಮದ ಬುಜ್ಜಮ ಜರಣಪ್ಪ ಯಂಪಳ್ಳಿ(35) ಮುಲ್ಲಾಮಾರಿ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಮಹಿಳೆ. ಅ.1ರ ಮಂಗಳವಾರ ರಾತ್ರಿ ತಾಲೂಕಿನಲ್ಲಿ ಬಿರುಸಿನ ಮಳೆಯಿಂದಾಗಿ ನದಿಯಲ್ಲಿ ನೀರು ರಭಸದಿಂದ ಹರಿಯುತ್ತಿರುವ ಕಾರಣ ಮಹಿಳೆಯ ಶವ ಇನ್ನೂ ಪತ್ತೆಯಾಗಿಲ್ಲ. ಚಿಂಚೋಳಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮತ್ತು ಸುಲೇಪೇಟ ಪೊಲೀಸ್ ಠಾಣೆಯ ಪೊಲೀಸರು …
Read More »
BigTv News
September 27, 2024
Breaking News, ಕಲಬುರಗಿ
ಕಲಬುರಗಿ : ಬ್ಯಾಂಕ್ ಸಾಲದ ನೋಟಿಸ್‌ಗೆ ಹೆದರಿ ರೈತನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊತಂಗಲ ಗ್ರಾಮದ ನಿವಾಸಿ ಪಾಂಡಪ್ಪ ಕೋರವನ್ (46) ಮೃತ ರೈತ ಎಂದು ತಿಳಿದು ಬಂದಿದೆ. ರೈತ ಪಾಂಡಪ್ಪ ಬ್ಯಾಂಕ್‌ನಿಂದ 1 ಲಕ್ಷ ರೂ. ಸಾಲ ಪಡೆದಿದ್ದ. ಈ ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. …
Read More »
BigTv News
September 27, 2024
Breaking News, ಕಲಬುರಗಿ
ಚಿಂಚೋಳಿ: ತೆಲಂಗಾಣದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಮೊಹ್ಮದ್ ಗೌಸ್ ಮೊಹ್ಮದ್ ಒಸ್ಮಾನ್ ಗೆ ಸೇರಿದ ಸರ್ವೇ ನಂಬರ್ 109//1 ರ 1 ಎಕರೆ ಹಾಗೂ ಅಬ್ದುಲ್ ರವೂಫ್ ಅಬ್ದುಲ್ ನಬೀಸಾಬ್ ಗೆ ಸೇರಿದ ಸರ್ವೇ ನಂಬರ್ 106//1 ರ 4 ಎಕರೆ 37 ಗುಂಟೆ ಕೃಷಿ ಜಮೀನು ಮಾರ್ಪಡಿಸಿ ಶಾಹಬಾದ ಕಲ್ಲು ಗಾಣಿಗರಿಕೆ ನಡೆಸುವ ಅನುಮತಿ ಕೋರಿ ಸಲ್ಲಿಸಿದ ಅನುಮತಿಗಾಗಿ ರಾಜ್ಯ ಪರಿಸರ ಮಾಲಿನ್ಯ …
Read More »
BigTv News
September 25, 2024
Breaking News, ಕಲಬುರಗಿ
ಕಲಬುರಗಿ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಸಾಮಾನ್ಯ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊಸದಾಗಿ ಏಳು ನಮ್ಮ ಕ್ಲಿನಿಕ್ ಗಳನ್ನು ಜಿಲ್ಲೆಗೆ ಮಂಜೂರು ಮಾಡಿದೆ. ಅವುಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸ್ಥಳವನ್ನೂ ಗುರುತಿಸಿದ್ದಾರೆ. ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಶ್ರೀರಾಮ ನಗರ, ಸಂತ್ರಾಸವಾಡಿಯ ನಯಾ ಮೊಹಲ್ಲಾ, ಕಪನೂರ ಕೈಗಾರಿಕೆ ಪ್ರದೇಶ, ರಾಮಜಿ ನಗರ, ರಾಜಾಪೂರ, ಕೋಟನೂರ ಹಾಗೂ ಬಂಬೂ ಬಜಾರ್ ಸೇರಿ 7 …
Read More »
BigTv News
September 24, 2024
Breaking News, ಕಲಬುರಗಿ
ಕಲಬುರಗಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳತನ ಪ್ರಕರಣಗಳಿಂದಾಗಿ ಜನರು ನಿದ್ರೆಗೆಡುವಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್ ಕಳವು, ಮನೆಯ ಮುಂದೆ ನಿಲ್ಲಿಸಿದ ಸರಕು ವಾಹನ ಕಳವು, ಕೃಷಿ ಪಂಪ್‌ಸೆಟ್ ಕಳ್ಳತನ, ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಮತ್ತು ಪುರುಷರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು, ಜೇಬುಗಳವು, ಮನೆಯ ಬೀಗ ಮುರಿದು ಒಡವೆಗಳ ಕಳವು, ಪೊಲೀಸರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹೀಗೆ ವಿವಿಧ …
Read More »
BigTv News
September 23, 2024
Breaking News, ಕಲಬುರಗಿ
ಅಫಜಲಪುರ: ತಾಲ್ಲೂಕಿನ ವಿವಿಧೆಡೆ ಅಲ್ಲಲ್ಲಿ ಧಾರಾಕಾರ ಮಳೆ ಆಗಿದ್ದು ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ತೊಗರಿ, ಹತ್ತಿ ಮತ್ತು ಮೆಕ್ಕೆಜೋಳ, ಶೇಂಗಾ ಬೆಳೆಗಳಿಗೆ ಮಳೆ ಅವಶ್ಯಕತೆ ಇತ್ತು. ಮಳೆ ಬಂದಿರುವುದು ಒಳ್ಳೆಯದಾಗಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದರು. ಮಾಶಾಳದ ರೈತರಾದ ಸಂತೋಷ ಗಂಜಿ, ಚಂದ್ರಶೇಖರ್ ಕರ್ಜಿಗಿ ಮತ್ತು ಚಂದ್ರರಾಮ ಬಳಗೊಂಡೆ ಮಳೆ ಬಗ್ಗೆ ಮಾಹಿತಿ ನೀಡಿ, ಮಳೆಗಾಲ ಆರಂಭವಾಗಿ ಮೂರು ತಿಂಗಳು ಕಳೆಯುತ್ತಾ ಬಂದರೂ …
Read More »
BigTv News
September 21, 2024
Breaking News, ಕಲಬುರಗಿ
ಚಿತ್ತಾಪುರ: ತಾಲ್ಲೂಕಿನ ದಂಡೋತಿ ಗ್ರಾಮದ ಹತ್ತಿರ ಹರಿಯುತ್ತಿರುವ ಕಾಗಿಣಾ ನದಿಗೆ ಹೊಸದಾಗಿ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ದಶಕದ ಬೇಡಿಕೆಗೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರಯತ್ನಕ್ಕೆ ಹಾಗೂ ರಾಜ್ಯ ಸರ್ಕಾರದಿಂದ ಕೊನೆಗೂ ಮನ್ನಣೆ ಸಿಕ್ಕಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಒಟ್ಟು ₹ 218 ಕೋಟಿ ಅನುದಾನಕ್ಕೆ ಅನುಮೋದನೆ ದೊರೆತಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನ ಕಲಬುರಗಿ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ …
Read More »
BigTv News
September 18, 2024
Breaking News, ಕಲಬುರಗಿ
ಕಲಬುರಗಿ: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ 50 ಕೆ ಕೆ ಆರ್ ಟಿ ಸಿ ವೇಗದೂತ ಬಸ್ಸುಗಳಿಗೆ ಸಿಎಂ ಸಿದ್ಧರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಜನತೆಯ ಸುಖಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಹೌದು ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವೇಗದೂತ ಮಾದರಿಯ ಬಸ್ಸುಗಳನ್ನು ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು. ಕಲ್ಯಾಣ …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ನೀಡಲಾಗಿದೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದ್ದು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ …
Read More »