BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಇಥೇನಾಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪಬ್ಲಿಕ್ ಗಾರ್ಡನ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ರೈತರು, ಕೂಡಲೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಸರಕಾರದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಪರಿಹರಿಸಬೇಕು ಎಂದು …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ …
Read More »
BigTv News
September 16, 2024
Breaking News, ಕಲಬುರಗಿ
ಕಲಬುರಗಿ: ಹತ್ತು ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ …
Read More »
BigTv News
September 16, 2024
Breaking News, ಕಲಬುರಗಿ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸೆಪ್ಟೆಂಬರ್ 17ರ ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಕಲಬುರಗಿ ಮಿನಿ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ, ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿದ್ದರಾಮಯ್ಯ ಸೋಮವಾರ ಸಂಜೆಯೇ ಕಲಬುರಗಿ ನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಯಾವ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ. ಮಂಗಳವಾರ ಕಲಬುರಗಿ ನಗರದ …
Read More »
BigTv News
September 16, 2024
Breaking News, ಕಲಬುರಗಿ
ಕಲಬುರಗಿ: ನಾಳೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ, ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ್ಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು …
Read More »
BigTv News
September 14, 2024
Breaking News, ಕಲಬುರಗಿ
ಕಲಬುರಗಿ: ಇದೇ ತಿಂಗಳ 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನಲೆ ಭೀಮಾ ನದಿ ತೀರದಲ್ಲಿ 130 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಅಫಜಲಪುರ ಶಾಸಕ ಎಂವೈ ಪಾಟೀಲ್ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಬೆಳಗುಂಪಾ ಹಾಗು ಹರವಾಳ ನಡುವಿನಲ್ಲಿ ಈ ಬ್ರಿಜ್ ಕಂ ಬ್ಯಾರೇಜ್ ಬರಲಿದೆ ಅದಕ್ಕಾಗಿ ಮೈನರ್ ಇರಿಗೇಶನ್ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದು ಸಚಿವ ಸಂಪುಟ …
Read More »
BigTv News
September 14, 2024
Breaking News, ಕಲಬುರಗಿ
ಕಲಬುರಗಿ: ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು. ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಆಶಾ ಕಾರ್ಯಕರ್ತೆಯರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸ್ಟೇಶನ್ ರಸ್ತೆ, ಎಸ್.ಎಂ. ಪಂಡಿತ್ …
Read More »
BigTv News
September 13, 2024
Breaking News, ಕಲಬುರಗಿ
ಕಲಬುರಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾದಂತಹ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ವಿಶ್ವನಾಥ ಜಮಾದಾರ್ (50) ಎಂಬುವರನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಬಾರಿ ಗುಂಡಿನ ದಾಳಿಯಿಂದಾಗಿ ವಿಶ್ವನಾಥ ಅವರು ಸ್ಥಳದಲ್ಲೇ …
Read More »
BigTv News
September 13, 2024
Breaking News, ಕಲಬುರಗಿ
ಕಲಬುರಗಿ: ಹಾಸ್ಟೆಲ್ ದಲ್ಲಿ ಹಾಜರಾತಿ ಹಾಕಲು ಅಡುಗೆ ಸಹಾಯಕರಿಂದ 15 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತರು ಬಲೆ ಬೀಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ವಿಶ್ವ ವಿದ್ಯಾಲಯ ಮೆಟ್ರಿಕ್ ನಂತರ ಸ್ನಾತಕೋತರ ಬಾಲಕರ ವಸತಿ ನಿಲಯದ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ 20 ಸಾವಿರ ರೂ ಲಂಚ ಬೇಡಿಕೆ ಇಟ್ಟು 15 ಸಾವಿರ ರೂ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಡುಗೆ ಸಹಾಯಕ ಶ್ರೀಮಂತ ಎನ್ನುವರು ದೂರು ನೀಡಿದ್ದಾರೆ, …
Read More »