Breaking News

ಕಲಬುರಗಿ

ಕೊಳೆಗೇರಿ ಪ್ರದೇಶಗಳಲ್ಲಿ ಮರೀಚಿಕೆಯಾದ ಅಭಿವೃದ್ದಿ

ಕಲಬುರಗಿ: ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಕೊಳೆಗೇರಿಗಳ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿದ್ದು, ಕೊಳೆಗೇರಿಗಳಲ್ಲಿನ 21,389 ಕುಟುಂಬಗಳ ಪೈಕಿ 2,799 ಕುಟುಂಬಗಳಿಗೆ ಮಾತ್ರ ಹಕ್ಕುಪತ್ರ ಭಾಗ್ಯ ಸಿಕ್ಕಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಲಬುರಗಿ ಉಪವಿಭಾಗ ಗುರುತಿಸಿರುವ ಬಹುತೇಕ ಕೊಳೆಗೇರಿಗಳು ಇಕ್ಕಟ್ಟಾದ ಪ್ರದೇಶದಲ್ಲಿವೆ, ಅಲ್ಲಿನ ನಿವಾಸಿಗಳಿಗೆ ಸಮರ್ಪಕವಾದ ಸೂರಿನ ವ್ಯವಸ್ಥೆ ಇಲ್ಲದೇ ಗುಡಿಸಲು, ಶೆಡ್‌ಗಳಲ್ಲಿ ವಾಸವಾಗಿದ್ದು, ಅವರ ಬದುಕು ಯಾತನಾಮಯವಾಗಿದೆ. ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಸಮಸ್ಯೆಯ ಜತೆಗೆ ಆರೋಗ್ಯ …

Read More »

ಪಿಎಂ ಆವಾಸ್ ಯೋಜನೆ: ಸೆ.15 ಕ್ಕೆ 26 ಲಕ್ಷ ಫಲಾನುಭವಿಗಳ ಗೃಹಪ್ರವೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಪ್ರದೇಶದ ಲಕ್ಷಾಂತರ ಫಲಾನುಭವಿಗಳಿಗೆ ಪಿಎಂ ಆವಾಸ್ ಯೋಜನೆಯ ಮೊದಲ ಕಂತುಗಳನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು 26 ಲಕ್ಷ ಫಲಾನುಭವಿಗಳ ಗೃಹ ಪ್ರವೇಶ ಸೆಪ್ಟೆಂಬರ್ 15 ರಂದು ಜೆಮ್ಶೆಡ್ಪುರದಲ್ಲಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಪ್ರಕಟಿಸಿದ್ದಾರೆ. ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಆನ್ಲೈನ್ ಸಭೆಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷಾಂತರ ಪಿಎಂ ಆವಾಸ್ ಯೋಜನೆ …

Read More »

ಬೈಕ್ ಸರಿಯಾಗಿ ದುರಸ್ತಿ ಮಾಡಿಲ್ಲ ಎಂದು ಶೋರೂಂಗೆ ಬೆಂಕಿ ಹಚ್ಚಿದ ವ್ಯಕ್ತಿ

ಕಲಬುರಗಿ: ತನ್ನ ಬೈಕ್‌ ಸರಿಯಾಗಿ ದುರಸ್ತಿ ಮಾಡಿಲ್ಲ ಎಂಬ ಕೋಪದಲ್ಲಿ ವ್ಯಕ್ತಿಯೊಬ್ಬರು ಹುಮನಾಬಾದ್ ಮುಖ್ಯರಸ್ತೆಯಲ್ಲಿನ ಓಲಾ ಎಲೆಕ್ಟ್ರಿಕ್‌ ವಾಹನದ ಶೋರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ನಗರದ ನಿವಾಸಿ ಮಹಮದ್ ನದೀಮ್ ಬೆಂಕಿ ಹಚ್ಚಿದ ಆರೋಪಿ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಿಗ್ಗೆ 10ರ ಸುಮಾರಿಗೆ ಶೋರೂಂಗೆ ಬಂದ ನದೀಮ್, ತನ್ನ ಎಲೆಕ್ಟ್ರಿಕ್ ಬೈಕ್ ದುರಸ್ತಿಯ ಬಗ್ಗೆ ಶೋರೂಂ ಸಿಬ್ಬಂದಿ ಜತೆಗೆ …

Read More »

ಹೆಸರು ಖರೀದಿಗೆ ನೋಂದಣಿ ದಿನಾಂಕ ವಿಸ್ತರಿಸಲು ರೈತ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ

ಕಲಬುರಗಿ: ರೈತರು, ರೈತ ಸಂಘಟನೆಗಳ ಒತ್ತಾಯದ ಬಳಿಕ ಹೆಸರು ಕಾಳು ಖರೀದಿಗೆ ಸರ್ಕಾರ ಮುಂದಾಗಿದೆ. ಆದರೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವಿಧಿಸಿರುವ ನಿಯಮದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಮಾರಾಟ ನೋಂದಣಿ ಮಾಡಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸಾವಿರಾರು ರೈತರು ತಾವು ಬೆಳೆದ ಹೆಸರು ಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡುವ ಬದಲು ಅಗ್ಗದ ಬೆಲೆಗೆ ಅಡತಿ ಅಂಗಡಿಗಳಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ 55,444 …

Read More »

ಕಲಬುರಗಿ: ಸಚಿವ ಸಂಪುಟ ಸಭೆಯ ಕುರಿತು ಪೂರ್ವಭಾವಿ ಸಭೆ

ಕಲಬುರಗಿ: ಸಂವಿಧಾನದ ಕಲಂ 371 ಜೆ ಜಾರಿಗೆ ಬಂದು ಹತ್ತು ವರ್ಷಗಳು ಆದ ಈ ಸಂದರ್ಭದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ನಡೆಯಲಿರುವ ದಶಮಾನೋತ್ಸವ ಏರ್ಪಡಿಸಲಾಗಿದೆ ಹಾಗೂ‌ ಹತ್ತು ವರ್ಷಗಳ ನಂತರ ನಡೆಯುತ್ತಿರುವ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು ಈ ಭಾಗದ ಸಮಗ್ರ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ …

Read More »

ಗ್ರಾಮ ಪಂಚಾಯಿತಿ ತೆರಿಗೆ ವಸೂಲಿ ಪ್ರಮಾಣ ಶೇ.58 ಕ್ಕೆ ಏರಿಕೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಆಸ್ತಿಗಳ ತೆರಿಗೆ ವಸೂಲಿ ಪ್ರಮಾಣ ಶೇ 58ಕ್ಕೆ ಹೆಚ್ಚಳವಾಗಿದೆ. ಶೇ 50ರಷ್ಟು ಹೆಚ್ಚುವರಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಸೂಲಿಗೆ ಗುರಿ ನಿಗದಿ ಮಾಡುವುದರ ಜೊತೆಗೆ ತೆರಿಗೆ ಹಣವನ್ನು ಆನ್‌ಲೈನ್ ಮೂಲಕ ಪಾವತಿಸಲು ಅನುವಾಗಲು ಪಿಒಎಸ್ ಸಾಧನಗಳನ್ನು ನೀಡಲಾಗಿದೆ. ಇದರಿಂದಾಗಿ ತೆರಿಗೆ …

Read More »

ಕಮಲಾವತಿ ನದಿಯಲ್ಲಿ ಕೊಚ್ಚಿ ಹೋದ ಬಾಲಕ

ಸೇಡಂ: ಬಹಿರ್ದೆಸೆಗೆ ಕಮಲಾವತಿ ನದಿ ಬಳಿಗೆ ತೆರಳಿದ ಬಾಲಕನೊಬ್ಬ ಭಾನುವಾರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆ. ಪಟ್ಟಣದ ದೊಡ್ಡ ಅಗಸಿ ಬಡಾವಣೆಯ ಕೋಲಿವಾಡ ನಿವಾಸಿ ರಾಹುಲ್ ನಾಗಪ್ಪ ಎಳ್ಳಿ (17) ನದಿಯಲ್ಲಿ ಕೊಚ್ಚಿ ಹೋದ ಬಾಲಕ. ನಾನು ಮತ್ತು ರಾಹುಲ್ ಕಮಲಾವತಿ ನದಿ ಬಳಿಗೆ ಬಹಿರ್ದೆಸೆಗೆ ತೆರಳಿದ್ದೆವು. ರಾಹುಲ್ ಬಹಿರ್ದೆಸೆಗೆ ಸ್ವಲ್ಪ ದೂರ ತೆರಳಿ ನೀರಿಗಿಳಿದಿದ್ದ. ನದಿ ನೀರಿನ ಪ್ರವಾಹ ಹೆಚ್ಚಿತು. ರಾಹುಲ್ ನೀರಲ್ಲಿ ಮುಳುಗಿದ. ವಿಷಯವನ್ನು ನದಿ ಸಮೀಪದಲ್ಲಿದ್ದವರ ಗಮನಕ್ಕೆ …

Read More »

ವಿದ್ಯುತ್ ಕಂಬ ಸ್ಪರ್ಶದಿಂದ ವ್ಯಕ್ತಿ ಸಾವು

ಕಲಬುರಗಿ: ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ನ್ಯೂ ಲೈಫ್ ಆಸ್ಪತ್ರೆಯ ಹೈಲೈಟ್ ಬೋರ್ಡ್ ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಶಹಾಪುರ ಪಟ್ಟಣದ ಬಿ.ಬಿ.ರೋಡ್ ನಿವಾಸಿ ಮುಹಮ್ಮದ್ ಇರ್ಶಾದ್ ಮೃತಪಟ್ಟವರು. ಇವರು ತನ್ನ ಗರ್ಭಿಣಿ ಸಹೋದರಿಗೆ ಚಿಕಿತ್ಸೆಗೆಂದು ಶನಿವಾರ ಶಹಾಪುರದಿಂದ ಕಲಬುರಗಿ ನಗರದ ನ್ಯೂ ಲೈಫ್ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆಯಲ್ಲಿ ಆಸ್ಪತ್ರೆ ಆವರಣದಲ್ಲಿರುವ ಹೈಲೈಟ್ ಬೋರ್ಡ್ ಕಂಬವನ್ನು ಸ್ಪರ್ಶಿಸಿದಾಗ …

Read More »

ಕಲಬುರಗಿಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ, ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ಕಪಿಲ್​ ಗಾಯಕ್ವಾಡ್​ ಅವರನ್ನು ಅಡ್ಡಗಟ್ಟಿ ಪತ್ನಿಯ ಮುಂದೆ ಹತ್ಯೆ ಮಾಡಲಾಗಿದೆ. ಕೊಲೆ ಹಿಂದೆ ಕಪಿಲ್ ಗಾಯಕ್ವಾಡ್ ಪತ್ನಿ ಭಾಗ್ಯ ಕೈವಾಡವಿದೆ ಎಂದು …

Read More »

ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿ

ಕಲಬುರಗಿ: 10 ವರ್ಷಗಳ ನಂತರ ತೊಗರಿ ನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ. ಸೆ.17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ. ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್‌.ಚಂದ್ರಶೇಖರ ಅಧಿಸೂಚನೆ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳು ಸೆ.17ರಂದು ಬೆಳಗ್ಗೆ 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವದ …

Read More »