BigTv News
December 9, 2022
Breaking News, ಕಲಬುರಗಿ
ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು. ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು …
Read More »
BigTv News
December 2, 2022
Breaking News, ಕಲಬುರಗಿ
ಕಲಬುರಗಿ : ನನ್ನ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಬಿರುಕಿಲ್ಲ. ಸುಖಾಸುಮ್ಮನೆ ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಮಾಧ್ಯಮದವರು ಬಿಂಬಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಿಬ್ಬರ ಮಧ್ಯೆ ಬಿರುಕಿದೆ ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯಲ್ಲಿ ಸದಾನಂದ ಗೌಡ, ಯತ್ನಾಳ್ ಹಾಗೂ ವಿಜಯೇಂದ್ರ ಮಧ್ಯೆ ಬಿರುಕಿಲ್ವಾ?. ಮೊದಲು ತಮ್ಮಲ್ಲಿರುವ ಬಿರುಕುಗಳನ್ನು ಬಿಜೆಪಿಯವರು ಮುಚ್ಚಿಕೊಳ್ಳಲಿ ಎಂದರು. ಬಿಜೆಪಿಗೆ …
Read More »
BigTv News
November 15, 2022
Breaking News, ಕಲಬುರಗಿ
ಕಲ್ಬುರ್ಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ, 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಪನೆ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಶಾಲಾಕೊಠಡಿಗಳಂತೆ ಒಟ್ಟು 2000 ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ …
Read More »
BigTv News
November 14, 2022
Breaking News, ಕಲಬುರಗಿ
ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರೋಪಿ ಬಂಧನಕ್ಕೆ ಐವರು ಪೊಲೀಸ್ ತಂಡ ಹೈದರಾಬಾದ್‌ಗೆ ತೆರಳಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಿಯಾಂಕ್ ಖರ್ಗೆ ಮಾತನಾಡುವ ವೇಳೆ, ತಾಳ್ಮೆ ಮೀರಿದರೆ ಬಿಜೆಪಿಯವರಿಗೆ ಓಡಾಡಲು ಬಿಡುವುದಿಲ್ಲ ಎಂದಿದ್ದಾರೆ. ಅವರ ಕ್ರಿಯೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ’ ವಿಧಾನ ಪರಿಷತ್ ಸದಸ್ಯ ತಿಳಿಸಿದ್ದರು.
Read More »
BigTv News
November 11, 2022
Breaking News, ಕಲಬುರಗಿ
ಕಲಬುರಗಿ: ‘ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ, ಗಂಗಾ ಕಲ್ಯಾಣ ಹಗರಣದಲ್ಲಿ ಸಿಲುಕಿ ಚರ್ಚಗೆ ಬಾರದ ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ನಗದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಆಗಮನಕ್ಕಾಗಿ ಬೆಂಗಳೂರಿನ ರಸ್ತೆಗಳಿಗೆ ತೇಪೆ ಹಚ್ಚಲಾಗುತ್ತಿದೆ. ಪ್ರಧಾನಿ ಬಂದು ಹೋದ ಮೇಲೆ ತೇಪೆ ಹಚ್ಚಿದ ರಸ್ತೆಗಳು ಕಿತ್ತು ಹೋಗುತ್ತವೆ. ಪ್ರಧಾನಿ ಕಚೇರಿಯಿಂದ ಬಂದ …
Read More »
BigTv News
October 19, 2022
Breaking News, ಕಲಬುರಗಿ
ಕಲಬುರಗಿ: ಸಿಡಿಲು ಹೊಡೆದ ಪರಿಣಾಮ 13 ಆಕಳು, 4 ಎತ್ತು ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಲಕ್ಷ್ಮಣ್ ನಾಯಕ್ ತಾಂಡಾದಲ್ಲಿ ನಡೆದಿದೆ. ತಾಂಡಾದ ಹೊರವಲಯದಲ್ಲಿನ ಗುಡ್ಡದ ಮೇಲೆ ಮೇಯುತ್ತಿದ್ದಾಗ ಸಿಡಿಲು ಬಡಿದಿದೆ. ಲಕ್ಷಾಂತರ ಮೌಲ್ಯದ ಆಕಳು, ಎತ್ತು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
Read More »
BigTv News
September 24, 2022
Breaking News, ಕಲಬುರಗಿ
ಕಲಬುರ್ಗಿ : ನಾನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಿನೇಷನ್ ಮಾಡಿಲ್ಲ. ಮಾಡೋದೂ ಇಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ರೂ ನಿಭಾಯಿಸಲು ಸಿದ್ಧ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರ್ಗಿಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಮಾಡಲು ನಾನು …
Read More »
BigTv News
September 23, 2022
Breaking News, ಕಲಬುರಗಿ
ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಜೇವರ್ಗಿ ಠಾಣೆಯ ಕಾನ್ಸ್ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು …
Read More »
BigTv News
September 22, 2022
Breaking News, ಕಲಬುರಗಿ
ಕಲಬುರ್ಗಿ: ಒಂದೆಡೆ ಕಾಂಗ್ರೆಸ್ 40% ಸರ್ಕಾರ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಸರಣಿ ಕಿಡಿಕಾರುತ್ತಿದೆ. ಮತ್ತೊಂದೆಡೆ ಗುರುವಾರ ಸದನದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಹಿತ ಬಹಿರಂಗ ಪಡಿಸೋದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬುಧವಾರ ಕಲಬುರ್ಗಿ ವಿಮಾನ ನಿಲ್ದಾಣದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ನಿಯಮ ಉಲ್ಲಂಘಿಲಸಿ, ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಅಕ್ರಮವನ್ನು ಎಸಗಿದ್ದಾರೆ. ಅದರ …
Read More »
BigTv News
September 18, 2022
Breaking News, ಕಲಬುರಗಿ
ಕಲಬುರಗಿ: ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್‍ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್‍ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 …
Read More »