Breaking News

ಕಲಬುರಗಿ

ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ: ಜ.25 ರಂದು ರಾಷ್ಟ್ರಪತಿಗಳಿಂದ ಪ್ರಧಾನ

ಕಲಬುರಗಿ: ಚುನಾವಣಾ ಆಯೋಗವು 2024- 25 ನೇ ಸಾಲಿನ ಅತ್ಯುತ್ತಮ ಚುನಾವಣೆ ಪದ್ಧತಿ ಅಳವಡಿಸಿಕೊಂಡು ಅನುಷ್ಠಾನಕ್ಕೆ ತಂದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದೆ. ಜನರಲ್ ಕೆಟಗರಿ ವಿಭಾಗದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಜನವರಿ 25ರಂದು ನವದೆಹಲಿಯ ಮಾಣಿಕ್ ಶಾ ಸೆಂಟರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ …

Read More »

ಕಲಬುರಗಿಯಲ್ಲಿ ನಾಳೆ(ಜ.24) ರೈಲ್ ರೋಕೊ ಪ್ರತಿಭಟನೆ

ಕಲಬುರಗಿ: ಈಗಾಗಲೇ ಘೋಷಣೆಯಾಗಿರುವ ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಮುಂಬರುವ ಬಜೆಟ್‌ನಲ್ಲಿ ಅನುಮೋದನೆ ನೀಡುವಂತೆ ಆಗ್ರಹಿಸಿ ಜನವರಿ 24ರ ಬೆಳಿಗ್ಗೆ 10.30ಕ್ಕೆ ರೈಲ್ ರೋಕೊ ಪ್ರತಿಭಟನೆ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಕೆಸಿಸಿಐ) ಅಧ್ಯಕ್ಷ ಶಶಿಕಾಂತ ಬಿ.ಪಾಟೀಲ ತಿಳಿಸಿದರು. ಕಲ್ಯಾಣ ಕರ್ನಾಟಕಕ್ಕೆ ಅನುಮೋದನೆಗೊಂಡ ಯೋಜನೆಗಳು ಬೇರೆ ಕಡೆ ಸ್ಥಳಾಂತರಗೊಳ್ಳುತ್ತಿವೆ. 1984ರಲ್ಲಿ ಸರೀನ್ ಸಮಿತಿಯು ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಶಿಫಾರಸು ಮಾಡಿತ್ತು. ಮೂರು ದಶಕಗಳ …

Read More »

ಕಲಬುರಗಿ: ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಗ್ರೀನ್ ಸಿಗ್ನಲ್

ಕಲಬುರಗಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಬರುವ ಜೇವರ್ಗಿ ತಾಲೂಕಿನ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಸದರಿ ಯೋಜನೆಯ ಬಾಕಿ ಉಳಿದ ಕಾಮಗಾರಿಗಳ ಅನುಷ್ಠಾನಕ್ಕೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಹಸಿರು ನಿಶಾನೆ ದೊರಕಿದೆ ಎಂದು ತಿಳಿದುಬಂದಿದೆ. ಬುಧವಾರ ಸಿಎಂ ಕೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೆಬಿಜೆಎನ್‌ಎಲ್‌ ನಿರ್ದಶಕರ ಮಂಡಳಿಯ 142 ನೇ ಸಭೆಯಲ್ಲಿ ಮಲ್ಲಾಬಾದ್‌ ಏತ ನೀರಾವರಿ ಯೋಜನೆಯ ಸದರಿ ಪ್ರಸ್ತಾವನೆ ಪ್ರಧಾನವಾಗಿ …

Read More »

ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ

ಕಲಬುರಗಿ: ಹಲವು ದಶಕಗಳ ಬೇಡಿಕೆಯಾಗಿರುವ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯಲ್ಲಿ ರೈಲ್ವೇ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ ಕೈಗೊಳ್ಳಲು ವಾಣಿಜ್ಯೋದ್ಯಮಿಗಳು, ವಿವಿಧ ಸಂಘ- ಸಂಸ್ಥೆಗಳು ಹಾಗೂ ಹೋರಾಟಗಾರರು ಮುಂದಾಗಿದ್ದು, ಇದೇ ಜ.24 ರಂದು ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ರೈಲು ತಡೆ ಚಳವಳಿ ಮೂಲಕ ನಾಂದಿ ಹಾಡಲು ನಿರ್ಧರಿಸಿದ್ದಾರೆ. ಕಲಬುರಗಿಯಲ್ಲಿ ರೈಲ್ವೆ ಕಚೇರಿ ಸ್ಥಾಪನೆಯಾಗುವವರೆಗೂ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಕೆಕೆಸಿಸಿಐ) …

Read More »

ನಾಳೆ(ಜ.23) ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಕನ್ನಡದ ಚಿನ್ನ-2024 ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜ.23ರ ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ 2024ನೇ ಸಾಲಿನ ‘ಕನ್ನಡ ಚಿನ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ-ಜಲಗಳ ತುಡಿತ ಹೊಂದಿರುವ ಮತ್ತು ಮಾತೃ ಭಾಷೆಯ ಕಳಕಳಿಯನ್ನು ಹೊಂದಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರನ್ನು ಕನ್ನಡದ ಚಿನ್ನ-2024 ಗೌರವ …

Read More »

ಅತ್ಯುತ್ತಮ ಚುನಾವಣಾ ಪದ್ಧತಿ ಅನುಷ್ಠಾನ: ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಿದ ಚುನಾವಣಾ ಆಯೋಗ

ಕಲಬುರಗಿ: ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು, ಜನರಲ್ ಕೆಟಗರಿ ವಿಭಾಗದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಿದೆ. ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಭಾರತ ಚುನಾವಣಾ ಆಯೋಗವು ಇದೇ ಜನವರಿ 25 ರಂದು ನವದೆಹಲಿಯ ದೆಹಲಿ ಕಂಟೋನ್ಮೆಂಟ್ ಪ್ರದೇಶದ ಮಾಣಿಕಶಾ ಸೆಂಟರ್ …

Read More »

ಬೆಂಬಲ ಬೆಲೆಯಡಿ ತೊಗರಿ ಖರೀದಿ ಕೇಂದ್ರ ಆರಂಭ; ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ: ಡಿಸಿ ಫೌಜಿಯಾ ತರನ್ನುಮ್

ಕಲಬುರಗಿ : ಜಿಲ್ಲೆಯಾದ್ಯಂತ ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಆರಂಭವಾಗಿದ್ದು, ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರಗಳನ್ನು ಗುರುತಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ. ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ ಎಫ್.ಎ.ಕ್ಯೂ. ಗುಣಮಟ್ಟದ 3,06,150 ಮೆಟ್ರಿಕ್ ಟನ್ ತೊಗರಿ ಖರೀದಿಗೆ ಸರಕಾರ ಆದೇಶಿಸಿದೆ ಎಂದಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ …

Read More »

ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆ ಸೌಲಭ್ಯಗಳನ್ನು ಅರ್ಹರಿಗೆ ನೀಡಿ: ಸಚಿವ ಸಂತೋಷ್ ಲಾಡ್

ಕಲಬುರಗಿ: ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್.ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಲ್ಬುರ್ಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಬುರ್ಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಲಾಖೆಯ …

Read More »

ಕಲಬುರಗಿ: ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತು ಅಧಿಕಾರಿಗಳೊಂದಿಗೆ ಡಿಸಿ ಫೌಜಿಯಾ ತರನ್ನುಮ್ ಸಭೆ

ಕಲಬುರಗಿ : ಜಿಲ್ಲೆಯ ಚಿಂಚೋಳಿ ವನ್ಯಜೀವಿ ಪ್ರದೇಶದಲ್ಲಿರುವ ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಶೆರಿಭೀಕನಳ್ಳಿ ತಾಂಡಾ ನಿವಾಸಿಗಳನ್ನು ಸ್ಥಾಳಾಂತರಿಸುವ ಸಂಬಂಧ ಸುದೀರ್ಘವಾಗಿ ಚರ್ಚಿಸಲಾಯಿತು. ಇದಲ್ಲದೆ ಮಾಡಬೂಳ ಬಳಿ ಅರಣ್ಯ ಇಲಾಖೆಯಿಂದ ಸ್ಥಾಪಿಸಲಾಗುತ್ತಿರುವ ಮೃಗಾಲಯ ಕಾಮಗಾರಿ ಕುರಿತು ಸಹ ಡಿ.ಸಿ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, …

Read More »

ಕಲಬುರಗಿ: 515 ಅಂಗನವಾಡಿಗಳಿಗೆ ನೂತನ ಕಟ್ಟಡ ನಿರ್ಮಾಣ

ಕಲಬುರಗಿ: ಶಿಥಿಲಾವಸ್ಥೆ ತಲುಪಿದ ಅಂಗನವಾಡಿ ಕಟ್ಟಡಗಳಲ್ಲಿ ಮಕ್ಕಳು ಭಯದಲ್ಲಿ ಕಲಿಯುವುದನ್ನು ತಪ್ಪಿಸಲು ಮುಂದಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ 515 ಅಂಗನವಾಡಿಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸುತ್ತಿದೆ. ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್‌)ಯಡಿ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 3420 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಪೈಕಿ ಇದುವರೆಗೆ 1960 ಅಂಗನವಾಡಿಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. …

Read More »