Breaking News

ಕಲಬುರಗಿ

ಅಂಬಿಗರ ಚೌಡಯ್ಯ ಭವನದ ಕಟ್ಟಡ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕಲಬುರಗಿ : ಚಿತ್ತಾಪುರ ಪಟ್ಟಣದ ನಾಗಾವಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಭವನದ ಕಟ್ಟಡ ಕಾಮಗಾರಿ ಬರುವ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭರವಸೆ ನೀಡಿದರು. ಚಿತ್ತಾಪೂರ ತಾಲೂಕು ಕೋಲಿ ಸಮಾಜದ ಗೌರವಾಧ್ಯಕ್ಷ ರಾಮಲಿಂಗ ಬಾನರ, ನೂತನ ಅದ್ಯಕ್ಷ ನಿಂಗಣ್ಣಾ ಹೆಗಲೇರಿ, ನೂತನ ನಗರಾಧ್ಯಕ್ಷ‌ ಪ್ರಭು‌ ಹಲಕರ್ಟಿ, ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು …

Read More »

ಕಲಬುರಗಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಘೋಷಣೆಗಾಗಿ ಶಾಸಕಿ ಕನೀಜ್ ಫಾತೀಮಾರಿಂದ ಸಿಎಂಗೆ ಮನವಿ

ಕಲಬುರಗಿ: ಕಲಬುರಗಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಫಾತಿಮಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಮನವಿ ಮಾಡಿದರು. ಕಲಬುರಗಿ ನಗರದಲ್ಲಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ದೇಶ, ವಿದೇಶದಿಂದ ಅಗಮಿಸುವ ಪ್ರವಾಸಿಗರಿಗೆ ಆಕರ್ಷಿಸಲು ಮುಂಬರುವ ಫೆಬ್ರವರಿ-2025ರ ಆಯವ್ಯಯನಲ್ಲಿ ಪಮುಖ ಸ್ಥಳಗಳ ಅಭಿವೃದ್ಧಿಗಾಗಿ ರೂ.25 ಕೋಟಿಗಳ ಅನುದಾನ ಮೀಸಲಿಡಬೇಕು, ವಕ್ಫ್ ಆಸ್ತಿಗಳು ಸಂರಕ್ಷಣೆ, ಅಭಿವೃದಿಗಾಗಿ ಹಾಗೂ …

Read More »

ಮನರೇಗಾ ಯೋಜನೆ ರಾಜ್ಯದ ರೈತರ ಬದುಕಿಗೆ ಬೆಳಕಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಉದ್ಯೋಗ ಖಾತ್ರಿ ಯೋಜನೆ ರಾಜ್ಯದ ರೈತರ ಬದುಕಿಗೆ ಬೆಳಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊ‌ಂಡಿರುವ ಅವರು, ಗ್ರಾಮೀಣ ಭಾಗದ ಜನರು ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರೆ ಗ್ರಾಮಸಭೆಗಳಲ್ಲಿ ಕಾಮಗಾರಿಗೆ ಬೇಡಿಕೆ ಸಲ್ಲಿಸಬೇಕಿತ್ತು. ಇದನ್ನು ತಪ್ಪಿಸಲು ತಾವಿದ್ದಲ್ಲಿಯೇ ಆನ್ ಲೈನ್ ಮೂಲಕ ಕಾಮಗಾರಿ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿನೂತನ ವ್ಯವಸ್ಥೆಗೆ …

Read More »

24 ಗಂಟೆ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ 2026 ಕ್ಕೆ ಮುಗಿಸಲು ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚನೆ

ಕಲಬುರಗಿ : ಕಲಬುರಗಿ ಮಹಾನಗರದಲ್ಲಿ ಪ್ರಗತಿಯಲ್ಲಿರುವ 24 ಗಂಟೆ ನಿರಂತರ ಕುಡಿಯುವ ನೀರಿನ ಯೋಜನೆ ಕಾಮಗಾರಿ 2026ರ ಡಿಸೆಂಬರ್ ಅಂತ್ಯದವರೆಗೆ ಮುಗಿಸುವಂತೆ ಕಾಮಗಾರಿಯ ಟೆಂಡರ್ ಪಡೆದಿರುವ ಎಲ್ ಆಂಡ್‌ ಟಿ ಕಂಪನಿ ಅಧಿಕಾರಿಗಳಿಗೆ ರಾಜ್ಯದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌ ಸೂಚನೆ ನೀಡಿದರು. ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ, ಕಲಬುರಗಿ ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮಾಂತರ ಯೋಜನಾ, ಕೆ.ಯು.ಡಬ್ಲ್ಯೂ.ಎಸ್.ಡಿ.ಬಿ …

Read More »

ಕಲಬುರಗಿ: ಕೆಎಎಸ್ ಪರೀಕ್ಷೆಗೆ ಶೇ.50 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಗೈರು

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಗೆ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರಾಗಿದ್ದರು. ಮರು ಪರೀಕ್ಷೆಯು ನಗರದ 38 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ಮೊದಲ ಪ್ರಶ್ನೆ ಪತ್ರಿಕೆ-1ಕ್ಕೆ 12,202 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 5,684 ಅಭ್ಯರ್ಥಿಗಳು ಹಾಜರಾಗಿದ್ದರು. 6518 ಅಭ್ಯರ್ಥಿಗಳು ಗೈರಾದರು. ಮಧ್ಯಾಹ್ನ ನಡೆದ ಎರಡನೇ ಪತ್ರಿಕೆ ಪರೀಕ್ಷೆಯಲ್ಲಿ 5,665 ಅಭ್ಯರ್ಥಿಗಳು ಹಾಜರಾಗಿ, 6,537 ಅಭ್ಯರ್ಥಿಗಳು ಪರೀಕ್ಷೆಯಿಂದ …

Read More »

ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಕಲಬುರಗಿ: ಬಿಜೆಪಿ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಗತ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಜಗತ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ವಾಹನಗಳ ಸಂಚಾರ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಪೊಲೀಸ್, ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯಲ್ಲಿ ಕಾನೂನು …

Read More »

ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕಕ್ಕೆ ನಾಲ್ವರು ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಚಿಂಚೋಳಿ: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಒಳಗೊಂಡು‌ ನಾಲ್ವರು ಅಧಿಕಾರಿಗಳ ತಂಡ ಶುಕ್ರವಾರ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಪತ್ರಕರ್ತರು, ರೈತರು ಸೇರಿದಂತೆ ಯಾರನ್ನೂ ಒಳಗಡೆ ಬಿಡದೇ ಅಧಿಕಾರಿಗಳು‌, ವಕೀಲರು ಸಭೆ ನಡೆಸುತಿದ್ದಾರೆ. ಮಾಧ್ಯಮದವರಿಗೆ ಒಳಗಡೆ ಪ್ರವೇಶ ನಿರಾಕರಿಸಲಾಗಿದೆ. ತಾಲ್ಲೂಕಿನ‌ ವಿವಿಧ ಹಳ್ಳಿಗಳು ಹಾಗೂ ತಾಲ್ಲೂಕುಗಳಿಂದ ರೈತರನ್ನು …

Read More »

ಕಲಬುರಗಿ ನಗರ ಬಹುತೇಕ ಸ್ತಬ್ಧ: ಟೈರ್ ಗಳಿಗೆ ಬೆಂಕಿ, ವಾಹನಗಳ ಸಂಚಾರ ಬಂದ್

ಕಲಬುರಗಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ‌ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಕರೆ ನೀಡಿರುವ ಕಲಬುರಗಿ ಬಂದ್ ಪರಿಣಾಮ ನಗರ ಸ್ತಬ್ಧವಾಗಿದೆ. ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ನಗರದ ಜೇವರ್ಗಿ ರಸ್ತೆ, ಸೇಡಂ ರಸ್ತೆ, ಹುಮನಾಬಾದ್ ರಸ್ತೆ, ಆಳಂದ ಹಾಗೂ ಅಫಜಲಪುರದಿಂದ ನಗರಕ್ಕೆ ಸೇರುವ ರಸ್ತೆಗಳ ಮೇಲೆ ದಿಗ್ಬಂಧನ ವಿಧಿಸಿದ್ದರಿಂದ ನಗರದ ಹೊರಭಾಗದಲ್ಲಿಯೇ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. …

Read More »

ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಯಿಂದ ಕಲಬುರಗಿ ಮತ್ತು ಗದಗ ಬಂದ್ ಗೆ ಕರೆ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಇಂದು ಕಲಬುರಗಿ ಮತ್ತು ಗದಗ-ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಅಮಿತ್ …

Read More »

ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಸಚಿವ ಶಿವಾನಂದ ಪಾಟೀಲ್

ಆಳಂದ: ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆ ಕಾಡುತ್ತಿರುವ ದಿನಗಳಲ್ಲಿ ರೈತರೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು. ತಾಲ್ಲೂಕಿನ ಸರಸಂಬಾ ಗ್ರಾಮದಲ್ಲಿ ಸೋಮವಾರ ಸಮತಾ ಲೋಕ ಶಿಕ್ಷಣ ಸಮಿತಿ, ಕಲಬುರಗಿ ಕೃಷಿ ಮಹಾವಿದ್ಯಾಲಯ ಸಹೋಗದಲ್ಲಿ ಹಮ್ಮಿಕೊಂಡ ಎರಡು ದಿನದ ಸಾಸಿರನಾಡಿನ ಕೃಷಿ ಜಾತ್ರೆ ಉದ್ಘಾಟಿಸಿ ಮಾತನಾಡಿದರು. ಕಬ್ಬು, ಭತ್ತದಂತ ಬೆಳೆಗಳು ಹೆಚ್ಚು …

Read More »