Breaking News

ಕಲಬುರಗಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ವಸೂಲಿ ಆಗುವ ತೆರಿಗೆಯ ಅರ್ಧಭಾಗ ನೀಡಬೇಕು: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಸರಿಯಾದ ಪಾಲು ನೀಡುತ್ತಿಲ್ಲ. ವಸೂಲಿ ಆಗುವ ತೆರಿಗೆಯಲ್ಲಿ ಅರ್ಧಭಾಗ ವಾಪಸ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಒಟ್ಟು ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಒಟ್ಟು 4.50 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ನಮ್ಮಿಂದ ಸಂಗ್ರಹವಾಗುತ್ತಿದೆ. ಆದರೆ ನಮಗೆ ವಾಪಸ್ ನೀಡುತ್ತಿರುವುದು ಒಂದು ರೂಪಾಯಿಗೆ ಹದಿಮೂರು ಪೈಸೆ …

Read More »

ಕಲ್ಯಾಣ ಕರ್ನಾಟಕಕ್ಕೆ ಶುಭಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ಪ್ರತ್ಯೇಕ ಸಚಿವಾಲಯ ರಚನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳು ಶೀಘ್ರವೇ ಭರ್ತಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, …

Read More »

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆಗೆ ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಘಟನೆಗೆ ಹಲವು ಎಂಎಲ್‌ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಿಎಂ ಗೆ ಮನವಿ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಜನ ಏಳು ಜನ ಶಾಸಕರನ್ನು ನೀಡಿದ್ದಾರೆ, ಹೀಗಾಗಿ ಈ ಭಾಗದಲ್ಲಿ ಇನ್ನೂ ಶೈಕ್ಷಣಿ, ಆರೋಗ್ಯ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕಾರ್ಯಗಳು ಆಗಬೇಕಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ KKRDB ವತಿಯಿಂದ ರೂ. 327.17 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು …

Read More »

ಕಲಬುರಗಿಯಲ್ಲಿ ಇಂದು ಜಯದೇವ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ನಗರದ ಡಾ.ಎಸ್.ಎಂ. ಪಂಡಿತ್ ‌ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು ಕ್ಯಾತಲ್ಯಾಬ್ ಸಂಕೀರ್ಣವನ್ನು ಲೋಕಾರ್ಪಣೆ ‌ಮಾಡಿದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ‌ಸಚಿವ …

Read More »

ಕಲಬುರಗಿ: ಇಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇಂದು ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ …

Read More »

ಬಿಜೆಪಿಯವರಿಗೆ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸಿ.ಟಿ. ರವಿ ನೀಡಿದ ಹೇಳಿಕೆ ಮನುವಾದಿ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯವರಿಗೆ ಮರ್ಯಾದೆ ಇಲ್ಲ. ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನುವಾದಿಗಳು ಹೆಣ್ಣನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಅವರು ಅಶ್ಲೀಲ ಪದ ಬಳಸುವ ಮೂಲಕ ಸ್ತ್ರೀ ಕುಲಕ್ಕೆ …

Read More »

ಕಲಬುರಗಿಯಲ್ಲಿ ಡಿ.22 ರಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇದೇ ಡಿಸೆಂಬರ್ 22 ರಂದು ಲೋಕಾರ್ಪಣೆ ಮಾಡಲಾಗುತ್ತಿದ್ದು, ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, …

Read More »

ಕಲಂ 371(ಜೆ) ಜಾರಿ ನಂತರ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ …

Read More »