Breaking News

ಕಲಬುರಗಿ

ಕಲಬುರಗಿ: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಕಲಬುರಗಿ: ಒಳ ಮೀಸಲಾತಿ ಜಾರಿಯನ್ನು ಯಥಾವತ್ತಾಗಿ ಅನುಷ್ಠಾನ, ಆದಿಜಾಂಭವ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಾ.ಬಾಬು ಜಗಜೀವನರಾಂ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯ ಜಿಲ್ಲಾ ಮುಖಂಡರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಟೌನ್‌ಹಾಲ್ ಮುಂಭಾಗದ ಡಾ.ಬಾಬು ಜಗಜೀವನರಾಂ ಮೂರ್ತಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ …

Read More »

ತೊಗರಿ ಧಾರಣೆ ಎರಡು ವಾರದಲ್ಲಿ ಕ್ವಿಂಟಲ್ ಗೆ ₹1,987 ಬೆಲೆ ಕುಸಿತ: ರೈತರಲ್ಲಿ ಆತಂಕ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ತೊಗರಿ ಇಳುವರಿ ಉತ್ತಮವಾಗಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎಪಿಎಂಸಿ) ಹೆಚ್ಚಿನ ಪ್ರಮಾಣದಲ್ಲಿ ಆವಕವಾಗುತ್ತಿದೆ. ಇದರಿಂದ ದಿಢೀರ್ ದರ ಕುಸಿದಿದ್ದು, ರೈತರು ಆತಂಕಗೊಂಡಿದ್ದಾರೆ. ಪ್ರಸಕ್ತ ವರ್ಷ ಜಿಲ್ಲೆಯ 5.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು, ಸುಮಾರು 50 ಲಕ್ಷ ಕ್ವಿಂಟಲ್ ಇಳುವರಿಯ ನಿರೀಕ್ಷೆ ಇದೆ. ಈಗಾಗಲೇ, ಜಿಲ್ಲೆಯ ಎಪಿಎಂಸಿಗಳಿಗೆ 4.50 ಲಕ್ಷ ಕ್ವಿಂಟಲ್‌ ತೊಗರಿ ಆವಕವಾಗಿದೆ. ಡಿಸೆಂಬರ್ 2ರಂದು ಕ್ವಿಂಟಲ್‌ಗೆ ಗರಿಷ್ಠ ದರ ₹11,000 …

Read More »

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ತಮಟೆ ಚಳವಳಿ

ಕಲಬುರಗಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಒಳ ಮೀಸಲಾತಿ ಬಗ್ಗೆ ಮಾತನಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನೆಯ ಮುಂಭಾಗದಲ್ಲಿ ಶನಿವಾರ ತಮಟೆ ಚಳವಳಿ ನಡೆಸಿದರು. ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ, ನ್ಯಾಯಾಲಯದ ತೀರ್ಪಿನಂತೆ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಬೇಕು. ಮಾದಿಗ ಸಮುದಾಯದ …

Read More »

ಕಲಬುರಗಿ: ಕೆಕೆಆರ್‌ಡಿಬಿಯ ₹3 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ₹ 3 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಂಡಿದ್ದ ನಗರದ ಆನಂದ ಹೋಟೆಲ್‌-ಎಸ್.ಎಂ. ಪಂಡಿತ ರಂಗಮಂದಿರ ಮಧ್ಯದ 700 ಮೀಟರ್ ಸಿ.ಸಿ. ರಸ್ತೆಯನ್ನು ಶಾಸಕ ಅಲ್ಲಮಪ್ರಭು ಪಾಟೀಲ ಲೋಕಾರ್ಪಣೆ ಮಾಡಿದರು. ರಸ್ತೆ, ಚರಂಡಿ, ಕಲ್ವರ್ಟ್, ಸಿ.ಡಿ ಹಾಗೂ ಪಾದಚಾರಿ ಮಾರ್ಗವುಳ್ಳ ಈ ರಸ್ತೆ ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು, ‘ಬಹಳ ಗಟ್ಟಿಮುಟ್ಟಾದ ರಸ್ತೆ ನಿರ್ಮಾಣವಾಗಿದ್ದು, 1.6 ಮೀಟರ್ ಅಗಲವಿದೆ. ನಮ್ಮ ಪಕ್ಷ ಅಧಿಕಾರಕ್ಕೆ …

Read More »

ಕಲಬುರಗಿ: ಪಿಎಂ ಸೂರ್ಯಘರ್ ಯೋಜನೆಗೆ ಗ್ರಾಹಕರ ನಿರಾಸಕ್ತಿ

ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ‘ಪ್ರಧಾನ ಮಂತ್ರಿ ಸೂರ್ಯಘರ್‌ ಯೋಜನೆ’ಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಅರ್ಜಿಗಳ ಸಲ್ಲಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಸೋಲಾರ್‌ ಪ್ಯಾನಲ್‌ ಅಳವಡಿಸಿಕೊಳ್ಳುವಲ್ಲಿ ಗ್ರಾಹಕರು ನಿರಾಸಕ್ತಿ ತೋರುತ್ತಿದ್ದಾರೆ. ಫೆಬ್ರುವರಿ 29ರಂದು ಈ ಯೋಜನೆಗೆ ಚಾಲನೆ ದೊರಕಿದ್ದು, 10 ತಿಂಗಳ ಅವಧಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ 7,083 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಇದರಲ್ಲಿ 244 ಜನರು ಮಾತ್ರ ಸೋಲಾರ್‌ ಪ್ಯಾನಲ್‌ಗಳನ್ನು ಅಳವಡಿಸಿಕೊಂಡಿದ್ದಾರೆ. …

Read More »

ಕಲಬುರಗಿಯ ಬಿಸಿಎಂ ಮಹಿಳಾ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ

ಕಲಬುರಗಿ : ಜಿಲ್ಲೆಯ ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಇಂದು ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದ ನಂತರ ರಾತ್ರಿ 9 ಗಂಟೆ ಸುಮಾರಿಗೆ ನಗರದ ಐವಾನ್-ಎ-ಶಾಹಿ ಪ್ರದೇಶದ ಬಿ.ಸಿ.ಎಂ. ಮೆಟ್ರಿಕ್ ನಂತರದ ಮಹಿಳಾ ವಸತಿ ನಿಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ವಸತಿ ನಿಲಯದಲ್ಲಿ ಫ್ಯಾನ್, ಲೈಟ್ ಇಲ್ಲ, ಕಟ್ಟಡ ಹಳೆದಾಗಿರುವುದರಿಂದ ದುರಸ್ತಿ ಮಾಡಿಸಬೇಕಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. ವಾರ್ಡನ್ ಮೇಡಂ ಸರಿಯಾಗಿ …

Read More »

ದೇಶದ ಪ್ರತಿಗಾಮಿ ಸರ್ಕಾರಗಳಿಗೆ ಅದಾನಿ ನೆರವು: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ದಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದು, ಧರ್ಮದ ಆಧಾರದ ಮೇಲೆ ಒಗ್ಗಟ್ಟಾಗುವ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ. ನರೇಂದ್ರ ಮೋದಿ-ಅಮಿತ್ ಶಾ ಅದಾನಿಯಂತಹ ಭಾರಿ ಬಂಡವಾಳಗಾರರಿಂದ …

Read More »

ಕಲಬುರಗಿಯಲ್ಲಿ ನ.17 ರಿಂದ 24 ರವರೆಗೆ ಐ.ಟಿ.ಎಫ್ ಕ್ರೀಡಾಕೂಟ

ಕಲಬುರಗಿ : ಜಿಲ್ಲೆಯಲ್ಲಿ ನವೆಂಬರ್ 17 ರಿಂದ 24ರಂದು ನಡೆಯುವ ಪ್ರತಿಷ್ಠತ ಐ.ಟಿ.ಎಫ್. ಕ್ರೀಡಾಕೂಟವನ್ನು ಯಾವುದೇ ಲೋಪದೋಷವಿಲ್ಲದಂತೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಲವಾರು ಸಮಿತಿಗಳನ್ನು ರಚಿಸಿದ್ದು. ಸಮಿತಿಯ ಕೆಲಸಗಳ ಪೂರ್ವ ಸಿದ್ಧತೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕೆಲಸ ಮಾಡುವಂತೆ ಸೂಚನೆ ನೀಡಿದರು. ಮೈದಾನದ ಸ್ವಚ್ಫತೆ, ಉಪ ವೇದಿಕೆಗಳ ಸಿದ್ಧತೆ, ಗ್ರೀನ್ ಮ್ಯಾಟ್ಗಳ ಅಳವಡಿಕೆ ಮೈಕ್ ಬ್ಯಾರಿಕೇಡ್ …

Read More »

ಮುಂಗಾರು ಹಂಗಾಮಿನಲ್ಲಿ 33 ಸಾವಿರ ರೈತರಿಗೆ 13.02 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಡಿ.ಸಿ ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪೈಕಿ ಪರಿಹಾರ ತಂತ್ರಾಂಶದ ಮೂಲಕ ನಮೂದಿಸಿದ ರೈತರಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಮೊದಲನೇ ಹಂತದಲ್ಲಿ 33,718 ರೈತ ಫಲಾನುಭವಿಗಳಿಗೆ 13.02 ಕೋಟಿ ರೂ.ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅನುಮೋದನೆ ನೀಡಿದ್ದಾರೆ. ಇನ್ ಪುಟ್ ಸಬ್ಸಿಡಿ ಹಣ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ …

Read More »

ಕಲಬುರಗಿಯಲ್ಲಿ 57 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಗಳ ರದ್ದು

ಕಲಬುರಗಿ: ಕಟ್ಟಡ ನಿರ್ಮಾಣ ಕಾರ್ಮಿಕರ ಹೆಸರಿನಲ್ಲಿ ಕಾರ್ಡ್ ಪಡೆದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯ ದೋಚುತ್ತಿದ್ದ ನಕಲಿ ಕಾರ್ಮಿಕರ ವಿರುದ್ಧದ ಕಾರ್ಯಾಚರಣೆಯನ್ನು ಕಾರ್ಮಿಕ ಇಲಾಖೆ ಚುರುಕುಗೊಳಿಸಿದೆ. ಕಲಬುರಗಿ ಪ್ರಾದೇಶಿಕ ವಿಭಾಗದ ಜಿಲ್ಲೆಗಳಲ್ಲಿ ಕಳೆದೊಂದು ವರ್ಷದಲ್ಲಿ ಒಟ್ಟು 57,840 ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಕಾರ್ಮಿಕ ಇಲಾಖೆಯ ಕಲಬುರಗಿ ಪ್ರಾದೇಶಿಕ ವಿಭಾಗವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ದಾವಣಗೆರೆ ಸೇರಿ ಒಂಬತ್ತು ಜಿಲ್ಲೆಗಳ …

Read More »