BigTv News
November 3, 2024
Breaking News, ಕಲಬುರಗಿ
ಕಲಬುರಗಿ : ವಕ್ಫ್ ಆಸ್ತಿ ಕುರಿತು ಬಿಜೆಪಿ ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸುವ ಪ್ರಯತ್ನ ಮಾಡುತ್ತಿದೆ ಇದರಿಂದ ಬಿಜೆಪಿಗೆ ಯಾವುದೇ ರೀತಿಯ ಲಾಭ ಆಗುವುದಿಲ್ಲ ಎಂದು ಸಚಿವ ಝಮೀರ್ ಅಹ್ಮದ್ ಖಾನ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಸ್ವಾತಂತ್ರ್ಯ ಬರುವುದಕ್ಕಿಂತ ಮುಂಚೆಯಿಂದಲೂ ಇದೆ ವಕ್ಫ್ ಬಳಿ ಇರುವುದು ಸರಕಾರ ಕೊಟ್ಟಿರುವ ಜಮೀನಲ್ಲ, ಬದಲಿಗೆ ದಾನಿಗಳು ಕೊಟ್ಟಿರುವ ಜಮೀನಾಗಿದೆ. ಅದೀಗ ಮಂಡಳಿ ಬಳಿಯಿದೆ ಇಷ್ಟಾದರೂ ಕೇಂದ್ರ …
Read More »
BigTv News
November 2, 2024
Breaking News, ಕಲಬುರಗಿ
ಕಲಬುರಗಿ : ಅಫಜಲಪುರ ತಾಲೂಕಿನ ಗೊಬ್ಬರ ಬಿ.ಗ್ರಾಮದ ಜಮೀನೊಂದರ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಕಬ್ಬಿನ ಬೆಳೆ ಮಧ್ಯೆ ಬೆಳೆದಿರುವ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು, ಒಟ್ಟು 57.7.ಕೆ.ಜಿ. ಒಣ ಗಾಂಜಾ ಮತ್ತು 15 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಮೀನಿನ ಮಾಲೀಕರ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆ-1985ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. …
Read More »
BigTv News
November 2, 2024
Breaking News, ಕಲಬುರಗಿ
ಕಲಬುರಗಿ : ರಾಜ್ಯಾದ್ಯಂತ ಓಡಾಡಿ ದೇವಸ್ಥಾನ, ದರ್ಗಾ, ಚರ್ಚ್‌ಗಳ ಆಸ್ತಿಗಳನ್ನು ವಕ್ಫ್‌ಗೆ ಬರೆಸಿಕೊಳ್ಳುವ ಮೂಲಕ ರಾಜ್ಯದ ಜನರ ಆಸ್ತಿಯನ್ನು ಲೂಟಿ ಮಾಡುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕೆಂದು ಸೇಡಂನ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಆಗ್ರಹಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಕ್ಫ್ ಬೋರ್ಡ್‌ನಿಂದ ಸಮುದಾಯಕ್ಕೆ ಯಾವುದೇ ಲಾಭ ಸಿಗುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಸೇರಿಸಲಾಗಿರುವ ಕಾಂಗ್ರೆಸ್ …
Read More »
BigTv News
November 1, 2024
Breaking News, ಕಲಬುರಗಿ
ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ₹ 100 ತೆರಿಗೆ ಕಟ್ಟುವ ಪ್ರದೇಶಕ್ಕೆ ವಾಪಸ್ ₹ 333 ಹೋಗುತ್ತಿದೆ. ಕರ್ನಾಟಕಕ್ಕೆ 12 ಪೈಸೆ ಮಾತ್ರ ವಾಪಸ್ ಬರುತ್ತಿದೆ. ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾದರಂತೂ ದಕ್ಷಿಣದ ರಾಜ್ಯಗಳು ತಮ್ಮ ಧ್ವನಿಯನ್ನೇ ಕಳೆದುಕೊಳ್ಳಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನಗರೇಶ್ವರ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ …
Read More »
BigTv News
November 1, 2024
Breaking News, ಕಲಬುರಗಿ
ಕಲಬುರಗಿ: ನಗರದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು …
Read More »
BigTv News
November 1, 2024
Breaking News, ಕಲಬುರಗಿ
ಕಲಬುರಗಿ: ದೇಶದ ಮೊದಲನೇ ಉಪಪ್ರಧಾನಿ ಹಾಗೂ ಗೃಹಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತ್ಯುತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಸರ್ದಾರ್ ಪಟೇಲ್ ವೃತ್ತದ ಆಧುನೀಕರಣ ಮತ್ತು ನವೀಕರಣ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ರಾಧಾಕೃಷ್ಣ ದೊಡ್ಡಮನಿ, ಮೇಯರ್ ಯಲ್ಲಪ್ಪ ನಾಯಕೊಡಿ, …
Read More »
BigTv News
October 31, 2024
Breaking News, ಕಲಬುರಗಿ
ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶದ ಗ್ರಾಮೀಣ ರಸ್ತೆ ಸುಧಾರಣೆ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲ್ಯಾಣ ಪಥ ಯೋಜನೆಯಡಿ 1,000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಇನ್ನು 15 ದಿನದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಂದು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಈಗಾಗಲೇ …
Read More »
BigTv News
October 26, 2024
Breaking News, ಕಲಬುರಗಿ
ಚಿತ್ತಾಪುರ: ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ₹ 63 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯ 2023-24ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ ₹ 4.50 ಕೋಟಿ ವೆಚ್ಚದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ, ₹ 4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಪ್ರಿಯಾಂಕ್ ಅಡಿಗಲ್ಲು ನೆರವೇರಿಸಿದರು. …
Read More »
BigTv News
October 26, 2024
Breaking News, ಕಲಬುರಗಿ
ಕಲಬುರಗಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ …
Read More »
BigTv News
October 23, 2024
Breaking News, ಕಲಬುರಗಿ
ಕಲಬುರಗಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾದ ಕಾರಣ ಆಳಂದ ಹಾಗೂ ಅಫಜಲಪುರ ತಾಲ್ಲೂಕುಗಳ ಗಡಿ ಗ್ರಾಮಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ತಿಳಿಸಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಚುವಲ್ ಮೂಲಕ ನಡೆದ ಅಂತರರಾಜ್ಯ ಸಹಕಾರ ಸಭೆಯಲ್ಲಿ ಮಾತನಾಡಿದರು. ಆಳಂದ ತಾಲ್ಲೂಕಿನ 17 ಮತ್ತು ಅಫಜಲಪುರ ತಾಲ್ಲೂಕಿನ 5 ಗ್ರಾಮಗಳು ಮಹಾರಾಷ್ಟ್ರದ ಸೋಲಾಪುರ ಹಾಗೂ ಧಾರಾಶಿವ ಜಿಲ್ಲೆಯ ಗಡಿ ಭಾಗದಲ್ಲಿವೆ. ಮಾದರಿ ನೀತಿ ಸಂಹಿತೆ …
Read More »