Breaking News

ಕಲಬುರಗಿ

ಕಲಬುರಗಿಯಲ್ಲಿ ಸುಗಮ ಸುರಕ್ಷತೆಯ ಸಂಚಾರ ವ್ಯವಸ್ಥೆಗೆ ಕ್ರಮ: ಪೊಲೀಸ್ ಆಯುಕ್ತ ಡಾ.ಶರಣಪ್ಪ

ಕಲಬುರಗಿ : ನಗರದಲ್ಲಿ ಸುಗಮ ಮತ್ತು ಸುರಕ್ಷತೆಯ ಸಂಚಾರ ವ್ಯವಸ್ಥೆ ಕೈಗೊಳ್ಳುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವಾದ ಸಮಗ್ರ ಸಂಚಾರ ನಿರ್ವಹಣೆ ವ್ಯವಸ್ಥೆ (ಐಟಿಎಂಎಸ್) ಮೂಲಕ ಇ – ಚಲನ್ ಮುಂದಿನ 10 ದಿನಗಳಲ್ಲಿ ಜಾರಿ ಮಾಡುವ ಉದ್ದೇಶ ಇದೆ ಎಂದು ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಹೇಳಿದರು. ಕಲಬುರಗಿ ಆಕಾಶವಾಣಿಯಲ್ಲಿ ಇಂದು ನಡೆಸಿದ ಫೋನ್-ಇನ್ ಕಾರ್ಯಕ್ರಮದಲ್ಲಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಗ್ನಲ್ ವ್ಯವಸ್ಥೆ ಇದ್ದರೂ ನಿಯಮ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವ …

Read More »

ಕಲಬುರಗಿಯ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

ಕಲಬುರಗಿ : ನಗರದ ಹೃದಯ ಭಾಗದಲ್ಲಿ ಕೆ.ಕೆ.ಆರ್.ಡಿ.ಬಿ.ಯ ಸುಮಾರು 222 ಕೋಟಿ ರೂ. ಅನುದಾನದಿಂದ‌ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ರಾಜ್ಯದ ಮುಖ್ಯಮಂತ್ರಿಗಳಿಂದ ಈ ಐತಿಹಾಸಿಕ 371 ಹಾಸಿಗೆಯ ಆಸ್ಪತ್ರೆ ಲೋಕಾರ್ಪಣೆ ಮಾಡಲು ನಿರ್ಧರಿಸಿದ್ದು, ಕೂಡಲೇ ಅಂತಿಮ‌ ಹಂತದ‌ ಕೆಲಸ ಕಾರ್ಯಗಳನ್ನು ಮುಗಿಸುವಂತೆ ಸಂಸ್ಥೆಯ ಇಂಜಿನೀಯರ್ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರರಿಗೆ …

Read More »

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಚಾಲಕ ಸಾವು

ಚಿತ್ತಾಪುರ : ಚಿತ್ತಾಪುರ ತಾಲ್ಲೂಕಿನ ದಂಡೋತಿ ಸಮೀಪದಲ್ಲಿ ಭಾನುವಾರ ತಡ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿ ಸೇತುವೆಯ ಕೆಳಗೆ ಬಿದ್ದು ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಚಿತ್ತಾಪುರ ಪಟ್ಟಣದ ನಿವಾಸಿ, ಚಾಲಕ ನಿಂಗಪ್ಪ ಪೂಜಾರಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಮೇಶ ಮತ್ತ ಕೃಷ್ಣ ಅವರು ಗಾಯಗೊಂಡಿದ್ದಾರೆ. ಹಳೆಯ ಕಾರು ಖರೀದಿಗಾಗಿ ಚಿಂಚೋಳಿ ತಾಲ್ಲೂಕಿನ ಕೊಂಚಾವರಂಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಶಹಾಬಾದ್ …

Read More »

ನಾಳೆ ಕಲಬುರಗಿ ನಗರದಲ್ಲಿ ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಾಳೆ (ಅ.18 ರಂದು) ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲಿನ ಸರಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ ದಾಖಲೆಗಳೊಂದಿಗೆ ಮಿನಿ …

Read More »

ರೈತರ ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಚಿತ್ತಾಪುರ: ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ವಿವಿಧ ಗ್ರಾಮಗಳಲ್ಲಿ ರೈತರ ಜಮೀನು ಖರೀದಿಸಿ ಕಲ್ಲು ಗಣಿಗಾರಿಕೆ, ಸಿಮೆಂಟ್ ಉತ್ಪಾದನಾ ಘಟಕ ಸ್ಥಾಪಿಸುವ ಕುರಿತು ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಬೇಡಿಕೆಗಳನ್ನು ಕ್ರೋಢೀಕರಿಸಿ ಪರಿಸರ, ರೈತರು, ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು. ತಾಲ್ಲೂಕಿನ ರಾವೂರು ಗ್ರಾಮದ ಡಿವೈನ್ ಭರಹುತ್ ಫಂಕ್ಷನ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯಿಂದ ನಡೆದ ಅಲ್ಟ್ರಾಟೆಕ್ …

Read More »

ಕಲಬುರಗಿಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಸರ್ಕಾರಿ ಹಾಸ್ಟೆಲ್ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಕಲಬುರಗಿ ನಗರದ ಜಗತ್ ವೃತ್ತದಿಂದ ನೂರಾರು ಜನ ಹೊರ ಗುತ್ತಿಗೆ ಕಾರ್ಮಿಕರು ಪ್ರಾದೇಶಿಕ ಆಯುಕ್ತರ ಕಚೇರಿವರೆಗೆ ತೆರಳಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. …

Read More »

ಕಲಬುರಗಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಕಲಬುರಗಿ: ನಗರವೂ ಸೇರಿದಂತೆ ಶಹಾಬಾದ್‌, ಚಿತ್ತಾಪುರ, ಸೇಡಂ, ಕಾಳಗಿ, ಅಫಜಲಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಸುಮಾರು ರಾತ್ರಿ 8 ಗಂಟೆಯಿಂದ ಆರಂಭವಾದ ಮಳೆಯೂ ಧಾರಾಕಾರವಾಗಿ ಸುರಿದಿದೆ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿತ್ತು. ಆದರೆ ಕಲಬುರಗಿ ನಗರದಲ್ಲಿ ಬೆಳಿಗ್ಗೆ 11.10ರ ಸುಮಾರಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿದ್ದವು ಬೆಳಿಗ್ಗೆ 11.15 ಗಂಟೆ ಹೊತ್ತಿಗೆ ಆರಂಭವಾದ ಮಳೆ ಸುಮಾರು 50 ನಿಮಿಷಕ್ಕೂ ಹೆಚ್ಚು ಕಾಲ ಸುರಿಯಿತು. ಬೆಳಿಗ್ಗೆ ಗಾಳಿ, ಬಿರುಸಿನ ಮಳೆಗೆ …

Read More »

ಒಳ ಮೀಸಲಾತಿ ಜಾರಿಗೆ ಸರ್ಕಾರಕ್ಕೆ ಸೂಚಿಸಲು ಮಾದಿಗ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ : ಒಳ ಮೀಸಲಾತಿ ಸಂಬಂಧ ಇಂದು ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟವು ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಳಮಿಸಲಾತಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಮಾದಿಗರ ಒಕ್ಕೂಟವು ಮನವಿ ಮಾಡಿದೆ. ಒಳ ಮೀಸಲಾತಿ ಜಾರಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಲಾಯಿತು. ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ …

Read More »

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ತಜ್ಞರ ಸಮಿತಿ ರಚನೆ

ಕಲಬುರಗಿ: ಸತತವಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಿಂದುಳಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಶಿಕ್ಷಣ ತಜ್ಞ ಗುರುರಾಜ ಕರಜಗಿ ನೇತೃತ್ವದಲ್ಲಿ ಆರು ಜನ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು. ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಜಗಿ ಅವರೊಂದಿಗೆ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಡಾ. ರುದ್ರೇಶ್, ಹಿರೇಮಠ ಸ್ವಾಮೀಜಿ, ಬಳ್ಳಾರಿಯ ಫಾದರ್ ಫ್ರಾನ್ಸಿಸ್, ಬೀದರ್‌ನ …

Read More »

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಅಭಿವೃದ್ದಿಗೆ ಶಿಕ್ಷಣ ತಜ್ಞರ ಸಮಿತಿ ರಚನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳದ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್ ಡಿಬಿ) ಮಂಡಳಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಮಂಡಳಿಯಲ್ಲಿ ತಜ್ಞರ ಪ್ರಥಮ ಸಭೆ ನಡೆದು ಸಮಗ್ರವಾಗಿ ಸಮಾಲೋಚಿಸಲಾಯಿತು ಎಂದು ಸಭೆ ನಂತರ ಮಂಡಳಿ ಅಧ್ಯಕ್ಷ ಡಾ.‌ಅಜಯಸಿಂಗ್ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಸಭೆಯಲ್ಲಿ …

Read More »