Breaking News

ಧಾರವಾಡ

ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ : ಕಾಗೇರಿ

ಧಾರವಾಡ: ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಈ ಬಾರಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಒಳ್ಳೆಯ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ …

Read More »

ಕೆಲಗೇರಿ ಕೆರೆಗೆ ಕಾಯಕಲ್ಪ : ಮೇಯರ್ ಸೂಚನೆ

ಧಾರವಾಡ: ಸರ್ ಎಂ. ವಿಶ್ವೇಶ್ವರಯ್ಯ ರವರಿಂದ ಸ್ಥಾಪಿತವಾದ ಧಾರವಾಡದ ಕೆಲಗೇರಿ ನಗರದ ನಾಗರಿಕರು ಹಾಗೂ ಸ್ಥಳೀಯ ಪಾಲಿಕೆಯ ಸದಸ್ಯರ ಕೋರಿಕೆಯ ಮೇರೆಗೆ ಇಂದು ಮುಂಜಾನೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಭೇಟಿ ನೀಡಿ ಕೆಲಗೇರಿ ಕೆರೆಯ ಸ್ವಚ್ಛತೆ ಹಾಗೂ ಅಭಿವೃದ್ಧಿಯ ಕುರಿತು ಪಾಲಿಕೆಯ ಅಧಿಕಾರಿಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಲು ಸೂಚಿಸಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಮಾತನಾಡಿ ಬರುವ ವಾರದಲ್ಲಿ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅತೀ ಶೀಘ್ರದಲ್ಲಿ …

Read More »

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುತಾಲಿಕ್ ಕಣಕ್ಕಿಳಿಯುವುದು ಖಚಿತ

ಧಾರವಾಡ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಲವು ಕ್ಷೇತ್ರಗಳ ಅಭಿಮಾನಿಗಳು ಮನವಿ ಮಾಡುತ್ತಿದ್ದು, ಡಿಸೆಂಬರ್ ಮೊದಲ ವಾರದ ಹೊತ್ತಿಗೆ ಯಾವ ಕ್ಷೇತ್ರ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದಾದರು ಒಂದು ಕ್ಷೇತ್ರದಿಂದ ಪ್ರಮೋದ್ …

Read More »

ಬೈಕಿನಲ್ಲಿ ಹೊರಟಿದ್ದ ಮಾರ್ಕೋಪೋಲೊ ಯುವಕ ಸಾವು

ಧಾರವಾಡ: ನಗರದ ಕೆಲಗೇರಿ ಸೇತುವೆಯ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಮಾರ್ಕೋಪೋಲೊ ಕಂಪನಿಯ ಯುವಕ ಸಾವಿಗೀಡಾದ ದುರ್ಘಟನೆ ಇದೀಗ ನಡೆದಿದೆ. ಮುಗದ ಗ್ರಾಮದಿಂದ ಬರುತ್ತಿದ್ದ ದೇವಾನಂದ ಸಿದ್ದಪ್ಪ ಕುಕನೂರ ಎಂಬಾತನೇ ಸಾವಿಗೀಡಾಗಿದ್ದಾನೆ. ಕೆಲವರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೀಗಾಗಿದೆ ಎದಿದಾರ್ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

Read More »

ಹಳ್ಳ ದಾಟಲು ಹೋಗಿ ಮಹಿಳೆ ಸಾವ

ಧಾರವಾಡ: ಹಳ್ಳ ದಾಟಲು ಹೋದ ಮಹಿಳೆಯೊಬ್ಬರು ನೀರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಶಂಕ್ರವ್ವ ಹಡಪದ (50) ಎಂಬ ಮಹಿಳೆಯೇ ಸಾವನ್ನಪ್ಪಿದ್ದರು. ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಶಂಕ್ರವ್ವ ಹಳ್ಳ ದಾಟಲು ಮುಂದಾದಾಗ ನೀರಿನ ರಭಸಕ್ಕೆ ಸಿಲುಕಿ, ಮುಳುಗಿ ಸಾವನ್ನಪ್ಪಿದ್ದಾರೆ. ಗ್ರಾಮಸ್ಥರೇ ಆಕೆಯ ಶವವನ್ನು ಹೊರತೆಗೆದಿದ್ದು, ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು …

Read More »

ಜಿಲ್ಲಾಸ್ಪತ್ರೆ ಬಳಿ ಮಹಿಳೆ ಕೊಲೆ

ಧಾರವಾಡ: ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಜಿಲ್ಲಾ ಆಸ್ಪತ್ರೆಯ ಬಳಿಯೇ ಇರುವ ಸ್ಪರ್ಶ ಎನ್ನುವ ಇನ್ನೊಂದು ಆಸ್ಪತ್ರೆ ಬಳಿ ಈ ಮಹಿಳೆಯ ಶವ ಬಿದ್ದಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ, ಕೊಲೆಯಾದ ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕತ್ತಲೆಯಲ್ಲಿ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಂತರ ದುಷ್ಕರ್ಮಿಗಳು …

Read More »

ಮಳೆ ಆರ್ಭಟ : ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನುಗ್ಗಿದ ನೀರು

ಧಾರವಾಡ : ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯ ಆರ್ಭಟ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ನಿನ್ನೆ ಸುರಿದ ಮಳೆಯ ರಭಸಕ್ಕೆ ವಿದ್ಯುತ್‌ ಕಂಬಗಳು ನೆಲಕ್ಕೂರುಳಿದೆ.ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದಾರೆ. ಇನ್ನೂ ಬೆಂಗಳೂರಿನ ಇಂದು ಬೆಳ್ಳಂಬೆಳಗ್ಗೆ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ . ನಗರದಲ್ಲಿ ನಿನ್ನೆ …

Read More »

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ …

Read More »

ಹುಟ್ಟೂರಿನ ಶಿಕ್ಷಕರಿಗೆ ಸನ್ಮಾನ– ಶಿಕ್ಷಕರ ದಿನೋತ್ಸವಕ್ಕೆ ಮೆರಗು

ಧಾರವಾಡ : ತಾಲೂಕಿನ ಹೆಬ್ಬಳ್ಳಿ ಗ್ರಾಮದವರು, ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಉಪ್ಪಿನ ಅವರು ತನ್ನ ಹುಟ್ಟೂರು ಹೆಬ್ಬಳ್ಳಿಯ ಎಲ್ಲಾ ಶಾಲೆಗಳ ಮುಖ್ಯ ಗುರುಗಳನ್ನು ಸತ್ಕರಿಸುವ ಮೂಲಕ ಶಿಕ್ಷಕ ದಿನೋತ್ಸವಕ್ಕೆ ಹೊಸ ಮೆರಗನ್ನು ತಂದಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಾತನಾಡಿದ ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಚಂದ್ರಶೇಖರ ಮಟ್ಟಿ, ಇವತ್ತು ಪವಿತ್ರ ದಿನ ಅಕ್ಷರದ ಬೆಳಕನ್ನು ನೀಡಿದ ಗುರುಗಳಿಗೆ ಗೌರವಿಸುವ …

Read More »

ಧಾರವಾಡ ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹ

ಧಾರವಾಡ : ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಕೂಡಲೇ ಪ್ರಾರಂಭಿಸಬೇಕು . ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನವಲಗುಂದ , ಅಣ್ಣಿಗೇರಿ , ಹುಬ್ಬಳ್ಳಿ ತಾಲೂಕ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಹೆಸರು ಕಾಳು ಖರೀದಿ ಕೇಂದ್ರ ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕೆಂದು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು , ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ …

Read More »