Breaking News

ಧಾರವಾಡ

ಹೆಣ್ಣಿನ ವಿಷಯಕ್ಕೆ ಬಿತ್ತು ಯುವಕನ ಹೆಣ

ಧಾರವಾಡ : ಜಿಲ್ಲೆ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಸುಮಾರು ಎರಡು ವರ್ಷಗಳಿಂದ ಹೆಣ್ಣು ಮಗಳೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದ ಕ್ಕಾಗಿ ಸಿಟ್ಟು ತಾಳಲಾರದೆ ಯುವಕನ ಜೊತೆಗೆ ಜಗಳವಾಡುತ್ತಿದ್ದಾಗ ಕಲ್ಲಿನಿಂದ ಹೊಡೆದ ಪರಿಣಾಮ ಯುವಕ ಮೂರ್ಛೆ ಬಿದ್ದಿದ್ದು ಅವನನ್ನು ಕೂಡಲೇ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ ಕೆಲವೇ ಕ್ಷಣಗಳಲ್ಲಿ ಮರಣ ಹೊಂದಿರುವ ಘಟನೆ ಇಂದು ನಡೆದಿದ್ದು ಈ ಪ್ರಕರಣ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಕಲಘಟಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ …

Read More »

ಅವಳಿ ನಗರದಲ್ಲಿ 1 ರಿಂದ 8ನೇ ತರಗತಿಗಳು ಬಂದ್

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು …

Read More »

ಹತ್ತು ಜನ ಪೊಲೀಸರಿಗೆ ಅಂಟಿದ ಕೊರೊನಾ

ಧಾರವಾಡ: ಜಿಲ್ಲೆಯಾದ್ಯಂತ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಶಾಲಾ ಮಕ್ಕಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಹತ್ತು ಜನ ಪೊಲೀಸರಿಗೆ ಸೋಂಕು ತಾಕಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಸದ್ಯ ಹತ್ತು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಸೋಂಕು …

Read More »

ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಅಗ್ನಿ ಅವಘಡ – ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿ..!

ಧಾರವಾಡ: ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಳಿ ನಡೆದಿದೆ. ಇನ್ನು ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಜಮೀನುಗಳಿಗೆ ವ್ಯಾಪಿಸುತ್ತ ಸಾಗಿದ್ದು, ಅಕ್ಕಪಕ್ಕದ ಜಮೀನುಗಳ ರೈತರಲ್ಲಿ ಆತಂಕ ಮೂಡುವಂತೆ ಮಾಡಿದೆ. ಹೀಗಾಗಿ ಸ್ಥಳೀಯರು ಸಮರೋಪಾಧಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಅಗ್ನಿ ಅವಘಡ ಸುದ್ದಿ ತಿಳಿಯುತ್ತಲೇ ಸಮಯ ಪಜ್ಞೆ ಮೆರೆದಿರುವ ಪೊಲೀಸ್ ಇಲಾಖೆಯ ಸಿಬ್ಬಂಧಿ ಹವಾಲ್ದಾರ ಮಲ್ಲಿಕಾರ್ಜುನ ಚೌಡಣ್ಣವರ …

Read More »

ರಾಮನಗರ ಘಟನೆ : ಗೂಂಡಾ ಕಾಂಗ್ರೆಸ್ ಗೂಂಡಾ

ಧಾರವಾಡ:ರಾಮನಗರದಲ್ಲಿ ನಡೆದ ರಾಜಕೀಯ ಬೆಳವಣಿಗೆ , ಕಾಂಗ್ರೆಸ್ಸ್ ನ ಡಿ ಕೆ.ಸಿ ಸಹೋದರರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹು – ಧಾ ಮಹಾನಗರ ಜಿಲ್ಲಾ ವತಿಯಿಂದ ಹು- ಧಾ ಪಶ್ಚಿಮ -74 , ಹಾಗು ಧಾರವಾಡ 71 ರ ಸಹಯೋಗದಲ್ಲಿ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಅರ್ಪಿಸಿದರು. ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 2 ಪ್ರತಿಮೆಗಳ ಲೋಕಾರ್ಪಣೆ …

Read More »

ಹಾಸ್ಟೇಲ್ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ : 1105 ಮಕ್ಕಳು ಭಾಗಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೇಲುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ಬೆಳೆಸಲು ಸರ್ಕಾರವು ಕರಾಟೆ,ಜೂಡೋ,ಟೇಕ್ವಾಂಡೋ ಮತ್ತಿತರ ಸಮರ ಕಲೆಗಳ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.ಹುಬ್ಬಳ್ಳಿ ಧಾರವಾಡ ಅವಳಿ ನಗರದ ಐದು ಹಾಸ್ಟೇಲುಗಳಲ್ಲಿ ಜನವರಿ 1 ರಿಂದ ಕರಾಟೆ ತರಬೇತಿ ಪ್ರಾರಂಭವಾಗಿದೆ ,1105 ವಿದ್ಯಾರ್ಥಿನಿಯರಿಗೆ 60 ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಸೈದಾಪೂರ,ಮಾಳಮಡ್ಡಿ,ಶಿವಗಿರಿ , ಕರ್ನಾಟಕ ವಿವಿ ಆವರಣ ಮತ್ತು ಹುಬ್ಬಳ್ಳಿಯ …

Read More »

ಕೆಲಗೇರಿ ಕೆರೆಯಲ್ಲಿ ಹಾರಿ ಗೃಹಿಣಿಯೊರ್ವಳು ಆತ್ಮಹತ್ಯೆ

ಧಾರವಾಡ: ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಧಾರವಾಡ ಸಂತೋಷನಗರದ ನಿವಾಸಿ ಅನಿತಾ ಹೆಗಡೆ ಎಂಬುವವರೇ ಸಾವನ್ನಪ್ಪಿದವರು. ಅನಿತಾ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಹಲವು ದಿನಗಳಿಂದ ಧಾರವಾಡದ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗಿನಜಾವ ಏಕಾಏಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಮನೆಗೆ ಆಕಸ್ಮಿಕ ಬೆಂಕಿ: ಸಜೀವ ದಹನಗೊಂಡ ವ್ಯಕ್ತಿ

ಧಾರವಾಡ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಧಾರವಾಡದ ನಗರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ವಿನಾಯಕ ಚಿನಿವಾಲರ (36) ಎಂಬ ವ್ಯಕ್ತಿಯೇ ಸಜೀವ ದಹನಗೊಂಡವನು. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ವಿನಾಯಕ ದೀಪ ಹಚ್ಚಲು ಹೋಗಿ ಯಡವಟ್ಟು ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿನಾಯಕ ವಿಪರೀತ ಮದ್ಯವೆಸನಿಯಾಗಿದ್ದ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೋ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೋ ಎಂಬುದರ ಬಗ್ಗೆ …

Read More »

ಧಾರವಾಡದಲ್ಲಿ ಮೊಟ್ಟೆ ಹಿಡಿದು ಪ್ರತಿಭಟನೆ: ಮೊಟ್ಟೆ ವಿರೋಧಿಗಳ ವಿರುದ್ಧ ಧಿಕ್ಕಾರ ಕೂಗಿ ದಲಿತ ಸಂಘಟನೆಗಳ ಆಕ್ರೋಶ .

ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿತರಣೆ ಮಾಡುತ್ತಿರುವ ಮೊಟ್ಟೆ ನೀಡುವ ಯೋಜನೆಯನ್ನು ಮುಂದುವರೆಸಬೇಕು‌ ಎಂದು ಅಗ್ರಹಿಸಿ ಹಾಗೂ ಮೊಟ್ಟೆ ವಿರೋಧ ಮಾಡುತ್ತಿರುವುದನ್ನು ಖಂಡಿಸಿ, ಧಾರವಾಡದಲ್ಲಿ ವಿವಿಧ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ‌ ಸಮತಾ ಸೇನೆ ಹಾಗೂ ವಿವಿಧ ದಲಿತ ಸಂಘಟನೆಯ ನೇತೃತ್ವದಲ್ಲಿ, ನಗರದ ನಗರದ ಜನರು ಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ, ಕಾರ್ಯಕರ್ತರು ಮೊಟ್ಟೆ ಹಿಡಿದು ವಿರೋಧಿಗಳ ವಿರುದ್ಧ ಧಿಕ್ಕಾರ …

Read More »

ವಿ.ಪ ಚುನಾವಣೆಯಲ್ಲಿ ಕಾಂಗ್ರೇಸ್‌ ಗೆಲುವಾಗಿದೆ.-ಸಲೀಂ ಅಹ್ಮದ್

ಧಾರವಾಡ :ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಾಗಿದೆ. ಸಿದ್ದಾಂತ ಮತ್ತು ನಾಯಕತ್ವಕ್ಕೆ ಗೆಲುವಾಗಿದೆ ಕಾಂಗ್ರೆಸ್ ನ ಎಲ್ಲ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಗ್ರಾಮ ಸ್ವರಾಜ್ ನಲ್ಲಿ ಈ ಸರ್ಕಾರ ದುರ್ಬಲ ಮಾಡಿದೆ ರಾಜೀವ್ ಗಾಂಧಿ ಕನಸು ಗ್ರಾಮೀಣಕ್ಕೆ ಹೆಚ್ಚು ಒಲವು ತೋರಿದ್ರು ಆದ್ರೆ ಬೆಲೆ ಏರಿಕೆ ಸೇರಿದಂತೆ ಹಲವು ರೀತಿಯಾಗಿ ಜನರಿಗೆ ಸಮಸ್ಯೆಯಾಗಿದೆ. ಒಟ್ಟಾರೆ ಎಲ್ಲರೂ ಸೇರಿ ಈ ಚುನಾವಣೆ ಮಾಡಿದ್ವಿ, ನನ್ನ ಗೆಲುವು ಕಾರ್ಯಕರ್ತರ ಗೆಲುವು ಸದನದಲ್ಲಿ ಸರ್ಕಾರದ ವಿರುದ್ಧ …

Read More »