Breaking News

ಹುಬ್ಬಳ್ಳಿ-ಧಾರವಾಡ

ಧಾರವಾಡ ಯುವತಿಯ ಶವ ಪತ್ತೆ – ಕೊಲೆ ಶಂಕೆ!

ಬೆಚ್ಚಿಬೀಳಿಸಿದ ಯುವತಿ ಕೊಲೆ ರಹಸ್ಯ..? ವಿದ್ಯಾಕಾಶಿ ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್‌ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಶವವಾಗಿ ಪತ್ತೆಯಾಗಿರುವ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಧಾರವಾಡದ ಹೊರವಲಯದ ಮನಸೂರು ರಸ್ತೆಯ ಸಮೀಪ ಇಂದು ಮುಂಜಾನೆ ಯುವತಿಯ ಶವ ಪತ್ತೆಯಾಗಿದೆ. ಗಾಂಧಿ ಚೌಕ್ ನಿವಾಸಿಯಾಗಿರುವ ಝಕಿಯಾ ಮುಲ್ಲಾ (19), ಪ್ಯಾರಾಮೆಡಿಕಲ್‌ ಶಿಕ್ಷಣ ಮುಗಿಸಿ ಉದ್ಯೋಗ ಹುಡುಕಾಟದಲ್ಲಿದ್ದಳು. ನಿನ್ನೆ ಮಂಗಳವಾರ ಸಂಜೆ ಸುಮಾರು 4:30ರ ವೇಳೆಗೆ “ಲ್ಯಾಬ್‌ಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ …

Read More »

ಯುವಕನ ಮೇಲೆ ಗೂಂಡಾಗಿರಿ.. ಹಾಡಹಗಲೇ ಯುವಕನನ್ನ ಆಟೋದಲ್ಲಿ‌ ಅಪಹರಣ…

ಎಲ್ಲಿ ದ್ದೀರಿ ಪೋಲೀಸ್ ಅಧಿಕಾರಿಗಳೇ… ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ನಿಲ್ಲುವ ಲಕ್ಷಣವೇ ಕಾಣಿಸುತ್ತಿಲ್ಲ.ದಿನೇ ದಿನೇ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಸಾರ್ವಜನಿಕರ ಭದ್ರತೆ ಪ್ರಶ್ನಾರ್ಥಕವಾಗುತ್ತಿದೆ.ಹಾಡಹಗಲೇ ಯುವಕನ ಮೇಲೆ ಗೂಂಡಾಗಿರಿ ನಡೆಸಿ, ಆಟೋದಲ್ಲಿ ಅಪಹರಣ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಣತಿ ದೂರದಲ್ಲೇ ನಡೆದಿದೆ.ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಸಹೋದರರು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಬಲವಂತವಾಗಿ ಆಟೋದಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ …

Read More »

15 ಕೆಜಿ 483 ಗ್ರಾಂ ಗಾಂಜಾ ವಶ : ಮುಂಬೈ ಮೂಲದ ಇಬ್ಬರು ಗಾಂಜಾ ಪೆಡ್ಲರ್‌ಗಳು ಬಂಧನ…

ಹುಬ್ಬಳ್ಳಿಯಲ್ಲಿ ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕಸಬಾಪೇಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದ ತಂಡವು ಅರೆಸ್ಟ್ ಮಾಡಿ, ಬರೋಬ್ಬರಿ 15 ಕೆ. ಜಿ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಮುಂಬೈ ಮೂಲದ ಪರೀಜ್ ಜಹೀರ್ ಖಾನ್ ಹಾಗೂ ಸಲ್ಮಾನ್ ರೈಜಾಖಾನ್ ಎಂಬುವರನ್ನು ಬಂಧಿಸಲಾಗಿದೆ. ನಿನ್ನೆ ದಿನದಂದು ಹಾವೇರಿ ಜಿಲ್ಲೆಯ ಹಾನಗಲ್‌ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಬ್ಬರು ಗಾಂಜಾ ಪೆಡ್ಲರ್‌ಗಳನ್ನು …

Read More »

ಗುತ್ತಿಗೆದಾರ ವಿಠ್ಠಲ ರಾಠೋಡ್ ಕೊಲೆ: ಛತ್ತೀಸಗಡ ಮೂಲದ ಮೂವರ ಬಂಧನ…

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಿಕ್ಕೋಟಾದ ಕಟ್ಟಡ ಗುತ್ತಿಗೆದಾರ ವಿಠ್ಠಲ ರಾಠೋಡ್ ಅವರನ್ನು ಕೊಲೆ ಮಾಡಿರುವ ಆರೋಪದ ಮೇಲೆ ನವನಗರ ಠಾಣೆ ಪೊಲೀಸರು ಛತ್ತೀಸಗಡ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದಾರೆ. ಛತ್ತೀಸಗಡದ ಕಬಿರ್ದಾಮ ಜಿಲ್ಲೆಯ ಜೋಗೀಪುರದ ಮೇಘವ್‌ ಸತನಾವಿ, ವಿಮಲಾ ಸತನಾವಿ ಮತ್ತು ಭಗವಾನದಾಸ ಸತನಾವಿ ಕೊಲೆ ಆರೋಪಿಗಳು. ‘ವಿಮಲಾ ಅವರು ವಿಠ್ಠಲ ಅವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೋಪಗೊಂಡ ಅವರ ಪತಿ ಮೇಘವ್‌ ಅವರು, ಮಗ …

Read More »

ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳು ಅರೆಸ್ಟ್

ನಗರದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ವಿಕೃತ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ 9ರಂದು ನಗರದ ಅಂಬೇಡ್ಕರ್ ಮೈದಾನದ ಸಮೀಪ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದ ಆರೋಪಿಗಳು, ಮದ್ಯಪಾನ ಮಾಡಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣ …

Read More »

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಹುಬ್ಬಳ್ಳಿಗೆ ಸಿಐಡಿ ತಂಡ…

ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್‌‍ ಅಧಿಕಾರಿ ಶಲ್ಲೋ, ಡಿವೈಎಸ್‌‍ಪಿ ಸಂತೋಷ್‌ ಹಾಗೂ ಇನ್ನಿತರ ಅಧಿಕಾರಿಗಳ ನೇತೃತ್ವದ ಸಿಐಡಿ ತಂಡಕ್ಕೆ ಪ್ರಕರಣಗಳ ಕಡತಗಳನ್ನು ಹಸ್ತಾಂತರ ಮಾಡಲಾಗಿದೆ. ಜ. 2 ರಿಂದ ಇಲ್ಲಿಯವರೆಗೂ ಇದೇ ಘಟನೆಗೆ ಸಂಬಂಧಿಸಿದಂತೆ 6 ಎಫ್‌ಐಆರ್‌ ದಾಖಲಾಗಿದ್ದು, ಎಫ್‌ಐಆರ್‌ಗಳ ಕಡತಗಳನ್ನು ಸಂಗ್ರಹಿಸಿರುವ ಸಿಐಡಿ …

Read More »

ಹುಬ್ಬಳ್ಳಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ – ಸಿಐಡಿಗೆ..

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದ ನಂತರ ಸಿಐಡಿಗೆ ತನಿಖೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಗಳನ್ನು ಸಿಐಡಿ ಸಂಪೂರ್ಣವಾಗಿ ತನಿಖೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುದನ್ನು …

Read More »

ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎತ್ತಂಗಡಿ..

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ… ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, …

Read More »

ನಾಳೆ ಖಚಿತವಾಗಿ ಪೊಲೀಸರ ಸಸ್ಪೆಂಡ್…?

ಹುಬ್ಬಳ್ಳಿ:- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ಈಗ ತಾರಕಕ್ಕೇರಿದೆ.ಆ ಹಿನ್ನೆಲೆಯಲ್ಲಿ ಪೋಲೀಸ ಇಲಾಖೆ ಕೂಡಾ ಈಗ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದಂತಾಗಿದೆ.ನಾಳೆ ಬಿಜೆಪಿ ಕೊಟ್ಟ ಹತ್ತು ಘಂಟೆಯ ಟೈಂ ಬಾಂಡ್ ನೊಳಗಾಗಿ ಪೋಲೀಸರ ತಲೆದಂಡ ಆಗುತ್ತಾ..ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಮಹಿಳೆಯ ಪರವಾಗಿ ಹೋರಾಟಕ್ಕಿಳಿಯಲಿದೆ ಅಲ್ಲದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ ನಾಳೆ ಹತ್ತು ಘಂಟೆಯೊಳಗೆ ಪೋಲೀಸರನ್ನ ಸಸ್ಪೆಂಡ್ ಮಾಡಬೇಕು ಎಂದು …

Read More »

ಕೇಶ್ವಾಪುರ ಬಟ್ಟೆ ಬಿಚ್ಚಿ ಪ್ರಕರಣ : ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ..

ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್‌ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. …

Read More »