BigTv News
February 8, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಯುವಕನೊಬ್ಬ ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ರಾತ್ರಿ 2-30 ರ ಸುಮಾರಿಗೆ ನಡೆದಿದೆ. ಆನಂದ ನಗರದ ನಿವಾಸಿಯಾದ ಸಲಿಂ ಎಂಬ ಯುವಕ ನಿನ್ನೆ ತಡರಾತ್ರಿ ಮನೆಗೆ ಹೋಗುತ್ತಿದ್ದಾಗ ಇಂದಿರಾ ನಗರದ ಬಳಿ ಇರುವ ರಿಲಾಯನ್ಸ್ ಪೆಟ್ರೋಲ್ ಪಂಪ್ ಬಳಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಲೀಮ್ ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. …
Read More »
BigTv News
February 8, 2023
ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ವೈಯಕ್ತಿಕ ವಿಚಾರಗಳನ್ನು ಹಾಗೂ ಜಾತಿಗಳನ್ನು ಇಟ್ಟುಕೊಂಡು ಮಾತನಾಡಬಾರದು. ಜಾತಿಯ ಬಗ್ಗೆ ಮಾತನಾಡುವುದು ರಾಜಕೀಯ ನಾಯಕರಿಗೆ …
Read More »
BigTv News
February 8, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಸಂಘಟಿತ ಕಾರ್ಮಿಕರ ಒಕ್ಕೂಟ ಇದರ ಸಹಯೋಗದಲ್ಲಿ ಬಸವಶ್ರೀ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಫೆಬ್ರವರಿ ೧೨ ರಂದು ಕಾರ್ಮಿಕರ ಸಚಿವರ ಮನೆ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ೧೪ ಸೌಲಭ್ಯಗಳನ್ನು ನೀಡುವುದಾಗಿ …
Read More »
BigTv News
February 7, 2023
Breaking News, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ಮಹಾರಾಷ್ಟ್ರ ಮೂಲದ ಪೇಶ್ವೆ ಎಂದು ಅಪಮಾನಗೊಳಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯವಾಗಿದೆ ಎಂದು ಬಿಜಪಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಅವಮಾನಿಸುವ ಮೂಲಕ ಕುಮಾರಸ್ವಾಮಿಯವರು ಸಮಸ್ತ ಮಾನವ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ. ಒಂದು ವಾರದೊಳಗೆ ಅವರು ಹೇಳಿಕೆ ಪಡೆಯಬೇಕು. ಇಲ್ಲದಿದ್ದರೆ ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಶವಯಾತ್ರೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ …
Read More »
Shaikh BigTv
February 6, 2023
Breaking News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸಿದ್ದ ಮೀನಿನ ವ್ಯಾಪಾರಸ್ಥ ಕುಟುಂಬ ಪರಸ್ಪರ ಹೊಡೆದಾಡಿಕೊಂಡ ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹುಬ್ಬಳ್ಳಿಯ ಗಣೇಶ್ ಪೇಟೆಯ ಪ್ರಸಿದ್ದ ಮೀನಿನ ವ್ಯಾಪಾರಸ್ಥ ಯೂಸುಫ್ ಕೈರಾತಿ ಹಾಗೂ ಅವರ ಕುಟುಂಬದ ಮತ್ತೊಬ್ಬ ಸದಸ್ಯ ಅನೀಫ್ ಕೈರಾತಿ ಮದ್ಯ ಆಸ್ತಿ ವಿಚಾರಕ್ಕೆ ಪದೆ ಪದೆ ಜಗಳವಾಗುತ್ತಿತ್ತು, ಇವತ್ತು ಕೂಡ ಇದೆ ವಿಷಯವಾಗಿ ಇಬ್ಬರ ಮದ್ಯ ಜಗಳ ನಡೆದು ಜಗಳ ವಿಪೋಪಕ್ಕೆ ಹೋಗಿದೆ. ಹಲ್ಲೆಗೆ ಒಳಗಾದ ಯೂಸುಫ್ ನನ್ನು ಕಿಮ್ಸ್ ಆಸ್ಪತ್ರೆಗೆ …
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಸನ್ಮಾನ ಮಾಡಲಾಯಿತು.ಚನ್ನಬಸವೇಶ್ವರ ದೇವಸ್ಥಾನದ ಸೇವಾ ಸಮಿತಿಯವರು ಹಮ್ಮಿಕೊಂಡ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ನಾಟಕಗಳು ಮರೆ ಮಾಚುತ್ತಿವೆ ಆದ್ದರಿಂದ ಎಲ್ಲರೂ ನಾಟಕ ನೋಡಬೇಕು ಎಂದು ತಿಳಿಸಿದರು.
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಮಾಡಿಕೊಂಡು ಹೋದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಹತ್ತಿಕಟಗಿ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ ಎಂದು ಗೊತ್ತಾಗಿದೆ. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮನ ಜಾತ್ರೆ ಇದ್ದ ಕಾರಣ ಈರಣ್ಣ ತಮ್ಮ ಬೈಕ್‌ನ್ನು ಮಸೂತಿ ಅವರ ಮನೆ ಮುಂದೆ ನಿಲ್ಲಿಸಿ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಆ ಬೈಕ್ ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಈರಣ್ಣ ಅವರು ಗರಗ …
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನಯಾನ ಇಂದಿನಿಂದ ಆರಂಭವಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು. ಹೌದು.. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗುವ ಮೂಲಕ ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಇದರಿಂದ ಹುಬ್ಬಳ್ಳಿ-ಧಾರವಾಡ ಅವಳಿನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. ನಮ್ಮ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿದ್ದಕ್ಕಾಗಿ ಪ್ರಧಾನಮಂತ್ರಿ …
Read More »
Shaikh BigTv
February 5, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದಲ್ಲಿರುವ ಲೋಟಸ್ ಬಾರ್ ಶಟ್ಟರ್ಸ್ ಮುರಿದು ಸುಮಾರು 20000/- ರೂ ಚಿಲ್ಲರೆ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಆರೋಪಿಯನ್ನು ಬಂಧನ ಮಾಡುವಲ್ಲಿ ನವನಗರ ಪೊಲೀಸರು ಯಶಸ್ವಿ ಆಗಿದ್ದಾರೆ. ರಾತ್ರಿ ವೇಳೆ ಶಟ್ಟರ್ಸ್ ಮುರಿದು ಬಾರಿನ ಕ್ಯಾಶ್ ಕೌಂಟರ್ ನಲ್ಲಿ ಇದ್ದ ಇಪ್ಪತ್ತು ಸಾವಿರ ರೂಪಾಯಿ ಚಿಲ್ಲರೆ ಹಣವನ್ನು ಕದ್ದು ಪರಾರಿ ಆಗಿದ್ದ, ಬಾರ್ ಮ್ಯಾನೇಜರ್ ದೂರಿನ ಮೇರೆಗೆ ನವನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಳು ಮಂಟುರ್ ಹಾಗೂ …
Read More »
BigTv News
February 5, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕೃಷಿಗೆ ಸಂಬಂಧಿಸಿದ ಕ್ರಿಮಿನಾಶಕಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನರೇಂದ್ರ ಬೈಪಾಸ್ ಬಳಿ ಟೋಲ್‌ಗೇಟ್ ಹತ್ತಿರ ಸಂಭವಿಸಿದೆ. ಪುಣೆಯಿಂದ ತಮಿಳುನಾಡಿನ ಕಡೆಗೆ ಈ ಲಾರಿ ಹೊರಟಿತ್ತು. ಬೈಪಾಸ್‌ನಲ್ಲಿ ಸೇಲ್ ಟ್ಯಾಕ್ಸ್‌ನವರು ತಪಾಸಣೆಗೆಂದು ಲಾರಿ ಪಕ್ಕಕ್ಕೆ ತೆಗೆದುಕೊಳ್ಳಲು ಹೇಳಿದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More »