ಬಂದ್ ಕರೆ ಬೇಡ ಕನ್ನಡಪರ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಮನವಿ…!
ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …
Read More »ವರಿಷ್ಠರ ನಂಬಿಕೆಯಂತೆ ಕೆಲಸ ಮಾಡುತ್ತೇನೆ: 2023ರ ಚುನಾವಣೆಯಲ್ಲಿ ಜಯದ ಭರವಸೆ ನೀಡಿದ ಸಿಎಂ
ಹುಬ್ಬಳ್ಳಿ: 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ. ಇವಾಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಸ್ಟಾರ್ಟ್ ಮಾಡುತ್ತೇನೆ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ. ಕಾರ್ಯಕಾರಣಿಯಲ್ಲಿ ಕೆಲ …
Read More »ಅರುಣಸಿಂಗ್ ಹಾಗೂ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ-ಸಿಎಂ ಬೊಮ್ಮಾಯಿ
ಹುಬ್ಬಳ್ಳಿ- ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಹುಬ್ಬಳ್ಳಿ ಏರ್ ಪೊರ್ಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಾಗುತ್ತೆ ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ. ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರ. ಎಂ.ಪಿ ಕುಮಾರಸ್ವಾಮಿಗೆ ನನ್ಮೇಲೆ ಬಹಲ ಪ್ರೀತಿ ಇದೆ. ವರ್ಷಪೂತಿ ದಿನಾಲು …
Read More »15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ. ಮಕ್ಕಳಿಕೆ ಲಸಿಕೆ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಕ್ಕಳು ಲಸಿಕೆ ಪಡೆದುಕೊಳ್ಳುವುದೇ ಇರುವುದನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿಯೇ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ, …
Read More »ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ವಿದ್ಯಮಾನ, ರಾಜ್ಯದ ಮಹತ್ವದ ವಿಷಯಗಳು ಎರಡು ದಿನ ಇಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿಣಿಯಲ್ಲಿ ಚರ್ಚೆಗೆ ಬರಲಿವೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಸಲಹೆ, ಸೂಚನೆ ನೀಡಲು ಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. 11 ಸ್ಥಾನಗಳಲ್ಲಿ ಗೆದ್ದರೂ ಉತ್ತಮ ಸಾಧನೆ ತೋರಿದೆ. ಸೋಲಾದ ಕ್ಷೇತ್ರಗಳನ್ನು …
Read More »ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ ಅರುಣ ಸಿಂಗ್
ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ. ಕಾರ್ಯಕಾರಿಣಿಯ ಮೊದಲ ಹಂತದ ಕಾರ್ಯಕ್ರಮಕ್ಕೆ ಚಾಲನೆ. ಪೂರ್ಣ ಕುಂಭದೊಂದಿಗೆ ಅರುಣ್ ಸಿಂಗ್ ಅವರನ್ನ ಹೋಟೆಲ್ ಆವರಣಕ್ಕೆ ಕರೆತಂದ ಮಹಿಳಾ ಕಾರ್ಯಕರ್ತೆಯರು. ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ. ದೀನದಯಾಳ ಅವರ ಚಿಂತನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರವಸಾಧನೆ ಸಾರುವ ಪ್ರದರ್ಶಿನಿ ಉದ್ಘಾಟಿಸಿದ ಅರುಣ್ ಸಿಂಗ್. ದೀಪ ಬೆಳಗಿಸುವ ಮೂಲಕ ಚಾಲನೆ. ಅರುಣ್ ಸಿಂಗ್ ಅವರಿಗೆ ಸಾಥ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ …
Read More »ಕಲಾವಿದರ ಕುಂಚದಿಂದ ಅರಳಿದ ಬಿಜೆಪಿ ನಾಯಕರ ಸಾಧನೆಯ ಚಿತ್ರ ಪ್ರದರ್ಶನ
ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ದೀನದಯಾಳಜಿ ಅವರ ಚಿಂತನೆ, ಮೋದಿಯವರ ಸಾಧನೆ ಹಾಗೂ ಬಿಜೆಪಿ ಸಾಧನೆಯ ಕುರಿತು ಕಲಾವಿದರ ಕುಂಚದಿಂದ ಅರಳಿದ ಚಿತ್ರ ಪ್ರದರ್ಶಿನಿ ಏರ್ಪಡಿಸಲಾಗಿತ್ತು.. ಬಿಜೆಪಿ ಸಾಧನೆ ಹಾಗೂ ನಾಯಕರ ಚಿತ್ರ ಪ್ರದರ್ಶನಕ್ಕೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ನಳೀನ್ ಕುಮಾರ್ ಕಟೀಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ …
Read More »ಬಿಜೆಪಿ ಕಾರ್ಯಕಾರಣಿ ಸಭೆಗೆ ಸಕಲ ಸಿದ್ಧತೆ: ಮಹತ್ವದ ಚರ್ಚೆ ಕ್ಷಣಗಣನೆ…!
ಹುಬ್ಬಳ್ಳಿ: ಸತತ 10 ವರ್ಷಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಕಲ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರೀಮಯವಾಗಿ ರಾರಾಜಿಸುತ್ತಿದೆ. ಸತತ 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ …
Read More »ACB ಬಲೆಗೆ ಬಿದ್ದ ಇಬ್ಬರು ಅರಣ್ಯ ಇಲಾಖೆಯ ಅಧಿಕಾರಿಗಳು…
ಹುಬ್ಬಳ್ಳಿ : ಲಂಚ ಸ್ವೀಕರಿಸಿವಾಗ ಎಸಿಬಿ ಬಲೆಗೆ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿ ಬಿದಿದ್ದಾರೆ. ವಲಯ ಅರಣ್ಯ ಅಧಿಕಾರಿ ಅನ್ನದಾನಯ್ಯ ನೀಲಗುಂದಮಠ ಮತ್ತು ಕಂಪ್ಯೂಟರ್ ಆಪರೇಟರ್ ಶಿವಶಂಕರ ಹಿರೇಮಠ ಬಲೆಗೆ ಬಿದ್ದವರು. ಮೃತ ವಾಚರ್ ಮನೊಬ್ಬರು ಪರಿಹಾರ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದಿದ್ದಾರೆ. ಡಿವೈಎಸ್ಪಿ ಮಹಾಂತೇಶ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





