Breaking News

ಹುಬ್ಬಳ್ಳಿ-ಧಾರವಾಡ

ತವರು ಮನೆಯಿಂದ ಹೆಂಡತಿ ವಾಪಸ್‌ ಕಳಿಸದಿದ್ದಕ್ಕೆ ಅತ್ತೆಯ ಕುತ್ತಿಗೆಗೆ ಬ್ಲೇಡ್‌ ಹಾಕಿದ ಗಲಾಟೆ ಅಳಿಯ

ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ತವರು ಮನೆ ಸೇರಿರುವ ಹೆಂಡತಿಯನ್ನು ವಾಪಸ್ ಕಳುಹಿಸಲಿಲ್ಲ ಎಂಬ ಆಕ್ರೋಶದಿಂದ, ಅಳಿಯನೊಬ್ಬ ಅತ್ತೆಗೆ ಬ್ಲೇಡ್ ನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರದ ನಿವಾಸಿ ಸೋಮವ್ವ ಮಲ್ಲಾಡ ಹಲ್ಲೆಗೀಡಾದವರು. ಪಡದಯ್ಯನ ಹಕ್ಕಲದ ರಮೇಶ ದೊಡ್ಡಮನಿ ಎಂಬ ಅಳಿಯನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ನಾಲೈದು ವರ್ಷಗಳ ಹಿಂದೆ ಪತಿ ರಮೇಶನೊಂದಿಗೆ ಜಗಳವಾಡಿ ಪತ್ನಿ ತವರು ಸೇರಿದ್ದರು. ಡಿ .7 ರಂದು ಪತ್ನಿ ಜೊತೆ ರಮೇಶ ಜಗಳ …

Read More »

ವಿಧಾನ ಪರಿಷತ್ ಚುನಾವಣೆ: ಮತ ಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಹಾಗೂ ಚುನಾಯಿತ ಸದಸ್ಯರು ಉತ್ಸುಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ.

Read More »

ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನ ದೇಶ ಕಳೆದುಕೊಂಡಿದೆ. -ಪ್ರಲ್ಹಾದ ಜೋಶಿ

ಹುಬ್ಬಳ್ಳಿ– ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.ಬಿಪಿನ್ ರಾವತ್ ಘಟನೆ ಅಂತ್ಯಂತ ದುರಂತ.ನಮೆಗಲ್ಲಾ ತುಂಬಾ ದುಖಃ ಆಗಿದೆ. ಖಂಡಿತ ಆ ಬಗ್ಗೆ ತನೀಖೆಯಂತು ಆಗೇ ಆಗುತ್ತೆ.ಈ ಘಟನೆಯ ತನೀಖೆ ಮಾಡೋಕೆ ನಿರ್ಧಾರ ಆಗಿದೆ.ಮುಂದಿನ ದಿನಗಳಲ್ಲಿ ಈ ರೀತಿ ಘಟನೆಯಾಗದಂತೆ ನೋಡಿಕೊಳ್ಳುತ್ತವೆ.ಹುಬ್ಬಳ್ಳಿ ವಿಮಾನ ನಿಲ್ದಾಣ ದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ‌.

Read More »

ಹೊಸ ವರ್ಷ ಹಾಗೂ‌ ಕ್ರಿಸ್ಮಸ್ ಗೆ ಯಾವುದೇ ನಿರ್ಭಂದ ಇಲ್ಲ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ …

Read More »

ಹವಾಮಾನ ವೈಪರೀತ್ಯ; ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 26 ನಿಮಿಷ ಆಗಸದಲ್ಲೇ ಸುತ್ತಿದ ಸಿಎಂ ಫ್ಲೈಟ್

ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆಗೆ ಇಂದು ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮತದಾನಕ್ಕೆ ಮಾಡಲು ತಮ್ಮ ತವರು ಕ್ಷೇತ್ರಕ್ಕೆ ತೆರಳಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೂ ಹವಾಮಾನ ವೈಪರೀತ್ಯ ಬಿಸಿ ತಟ್ಟಿತ್ತು. ಬೆಂಗಳೂರಿನಿಂದ ಇಂಡಿಗೋ 6E 7227 ವಿಮಾನ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ವಿಮಾನ ನಿಗದಿತ ಸಮಯವಾದ 7.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್‌ಗೆ …

Read More »

ಹುಬ್ಬಳ್ಳಿ- ಬಿದರ್ ನಡುವೆ ಸ್ಲೀಪರ್ ಬಸ್ ಆರಂಭ

ಹುಬ್ಬಳ್ಳಿ: ಸಾರ್ವಜನಿಕರ ಬಹುದಿನಗಳ ಬೇಡಿಕೆ ಮೇರೆಗೆ ಹುಬ್ಬಳ್ಳಿಯಿಂದ ಬೀದರ್ ಗೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಾಕರಸಾಸಂಸ್ಥೆ ಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಇದುವರೆಗೂ ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಬೀದರ್ ಗೆ ನೇರವಾಗಿ ಐಷಾರಾಮಿ ಬಸ್ ಸಂಚಾರ ಇರಲಿಲ್ಲ. ಹುಬ್ಬಳ್ಳಿಯಿಂದ ಬೀದರ್ ಗೆ ಹೋಗುವವರು ಕಲಬುರಗಿ ವರೆಗೆ ಹೋಗಿ ಅಲ್ಲಿಂದ ಮತ್ತೊಂದು ಬಸ್ ಹತ್ತಿ ಬೀದರ್ ಗೆ ತಲುಪಬೇಕಾಗಿತ್ತು. ಬೆಳಗಿನ …

Read More »

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಧಾರವಾಡ: ಕಳೆದ 20 ದಿನಗಳಿಂದ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರುಇಂದು ಆಯಾ ತಹಶೀಲ್ದಾರ ಕಚೇರಿಲ್ಲಿ ಮಸ್ಟರಿಂಗ್ ಕಾರ್ಯ ನಾಳೆ ಮುಂಜಾನೆ 8 ರಿಂದ ಸಂಜೆ 4 ರ ವರೆಗೆ ನಡೆಯಲಿರೋ ಮತದಾನಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿ ಬರಲಿರೊ ಮೂರು ಜಿಲ್ಲೆಗಳು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರೋ ಮತದಾನ ಮತಪೆಟ್ಟಿಗೆಗಳನ್ನು ಪಡೆದುಕೊಂಡು ಮತದಾನ ಕೇಂದ್ರಗಳತ್ತ ಸಾಗಿದ ಸಿಬ್ಬಂದಿಕಚೇರಿಗಳಿಗೆ ತೆರಳುತ್ತಿದ್ದಾರೆ. ಪ್ರತಿ ಬೂತ್‌ಗೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ …

Read More »

ಅಕ್ರಮ ಮದ್ಯ ಸಾಗಾಟ! ರೆಡ್ ಹ್ಯಾಂಡ್ ಆಗಿ ಹಿಡಿದ ಅಬಕಾರಿ ಅಧಿಕಾರಿಗಳು

ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ ಆರೋಪಿತ ಪರಾರಿಯಾಗಿದ್ದಾನೆ. …

Read More »

ಪ್ರಾಮಾಣಿಕತೆ ಮೆರೆದು ಮಾದರಿಯಾದ ಆಟೋ ಡ್ರೈವರ್‌

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಬ್ಯಾಗನ್ನು ಆಟೋ ಡ್ರೈವರೊಬ್ಬರು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಲ್ಲದೇ ಇತರರಿಗೆ ಮಾದರಿಯಾಗಿದ್ದಾರೆ. ಹೌದು ಹುಬ್ಬಳ್ಳಿಯ ಆಟೋ ಡ್ರೈವರ್‌ ಆಗಿರುವ ಮಹಮ್ಮದ್‌ ಯುಸೂಪ್‌ ಘಾಟಿವಾಲೇ ಎಂಬುವವರೇ ಬ್ಯಾಗ ಹಿಂತಿರುಗಿಸಿದ ಆಟೋ ಚಾಲಕನಾಗಿದ್ದು, ಗೀತಾ ಬಿಳೆಅಂಗಡಿ ಎಂಬುವರು ನಿನ್ನೆ ಆಟೋದಲ್ಲಿ ಪ್ರಯಾಣಿಸಿದ್ದು ಆಟೋ ಬಿಟ್ಟು ಇಳಿಯುವಾಗ ತಮ್ಮ ಬ್ಯಾಗನ್ನು ಮರೆತು ಹೋಗಿದ್ದು,ಅದನ್ನು ಗಮನಿಸಿದ ಮಹಮ್ಮದ ಯುಸೂಪ್‌ ತಕ್ಷಣ ಹಳೇ ಹುಬ್ಬಳ್ಳಿ ಪೋಲಿಸ್‌ ಠಾಣೆಗೆ ಹಿಂತಿರುಗಿಸಿದ್ದಾನೆ. ಠಾಣೆಯ ಪಿಎಸ್‌ …

Read More »