ಗೌರಿ ಲಂಕೇಶ್ ಹತ್ಯೆ ಪ್ರಕರಣ-ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ …
Read More »ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. …
Read More »ಸಿದ್ಧಾರೂಢ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು.
ಹುಬ್ಬಳ್ಳಿ ; ಹಳೆ ಹುಬ್ಬಳ್ಳಿಯ ಪೋಲಿಸ ಠಾಣೆ ಹದ್ದಿಯ ಶ್ರೀ ಸಿದ್ದಾರೂಢರ ಮಠದ ಕೆರೆಯಲ್ಲಿನ ಶ್ರೀ ಸಿದ್ದಾರೂಢರ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರವ ಪೂಜೆ ಸಲ್ಲಿಸಲು ಹೋದ ಉಮೇಶಪ್ಪ ಜಾಲಿಹಾಳ ವಯಾ: ೨೨ ವರ್ಷ ಸಾ:ಕಲ್ಲೂರ , ತಾ ಯಲಬುರ್ಗಾ ,ಕೊಪ್ಪಳ, ಜಿ; ಕೊಪ್ಪಳ ಇತನು ಕೆರೆಯಲ್ಲಿ ಈಜಾಡುತ್ತಾ ಕೆರೆಯಲ್ಲಿ ಹೋದಾಗ ಆತನಿಗೆ ಕೈ ಸೋತು ಅಥವಾ ಆರೋಗ್ಯ ಕ್ಷಿಣಗೊಂಡ ಹಿನ್ನಲೆಯಲ್ಲಿ ಆತನು ಮುಳುಗಿದ್ದು ಮೇಲೆ ಬಂದಿರುವದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ …
Read More »ತಲೆಮರೆಸಿಕೊಂಡಿದ್ದ ವಂಚಕ ಅಂದರ್: ಪೋಲಿಸರ ಕಾರ್ಯಾಚರಣೆಗೆ ಕಮೀಷನರ ಶ್ಲಾಘನೆ
ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಮೂರೂವರೆ ಲಕ್ಷ ರೂ. ಸಾಲ ಪಡೆದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋಕುಲ ರೋಡ್ ಗಾಂಧಿನಗರ ನಿವಾಸಿ ಹನಮಂತ ಸುಂಕಪ್ಪ ಮುಳಗುಂದ ಬಂಧಿತ ಆರೋಪಿ, ಯಾರದ್ದೋ ಜಮೀನಿನ ದಾಖಲೆಗಳನ್ನು ನಕಲು ಮಾಡಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಎಸ್ಎಫ್ಸಿಯಲ್ಲಿ ಸಾಲ ಪಡೆದು ವಂಚಿಸಿ ಪರಾರಿಯಾಗಿದ್ದ. 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೇಶ್ವಾಪುರ ಠಾಣೆ ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ …
Read More »ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ
ಹುಬ್ಬಳ್ಳಿ: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ತಾರಿಹಾಳ ಬಳಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಕಾರು, ಹಾಗೂ ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ಸ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದರೇ, ಮೂವರಿಗೆ ಗಂಭೀರಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಮತ್ತು ಗಾಯಗೊಂಡರ …
Read More »ಸಿದ್ಧು, ಡಿಕೆಶಿ ವಿರುದ್ಧ ಗುಡುಗಿದ ಕೆ.ಎಸ್.ಈಶ್ವರಪ್ಪ: ಅವರು ಹೇಳುವುದೆಲ್ಲ ಬರಿ ಸುಳ್ಳು…!
ಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ಕೆ.ಎಸ್.ಈಶ್ವರಪ್ಪ ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ನಾಯಕರಿಗೆ ಕೇಳಲು ಬಯಸುವೆ. ನೀವೂ …
Read More »ಉಪನ್ಯಾಸಕರೊಬ್ಬರ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ ಕಿರಾತಕರು- ಹಣ ನೀಡದಂತೆ ಮನವಿ ಮಾಡಿದ ಮಹಾಂತೇಶ ಸೊಗಲದ
ಧಾರವಾಡ :ಉಪನ್ಯಾಸಕರೊಬ್ಬರ ಪೇಸ್ ಬುಕ್ ಪೇಜ್ ಅನ್ನು ಹ್ಯಾಕ್ ಮಾಡಿದ ಅಪರಿಚಿತ ವ್ಯಕ್ತಿ ಗಳು ಹಣದ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಉಪನ್ಯಾಸಕರಾದ ಮಹಾಂತೇಶ ಸೊಗಲದ ಅವರು ಸ್ನೇಹಿತರಿಗೆ, ಸಂಬಂಧಿಕರಿಗೆ ಹಾಗೂ ಪರಿಚಯದವರಿಗೆ ಹಣ ನೀಡಿದಂತೆ ಮನವಿ ಮಾಡಿದ್ದಾರೆ. ಧಾರವಾಡ ನಗರದಲ್ಲಿ ಖಾಸಗಿ ಕಾಲೇಜುವೊಂದರಲ್ಲಿ ಉಪನ್ಯಾಸಕಾರಾಗಿ ಸೇವೆ ಸೇವೆ ಸಲ್ಲಿಸುತ್ತಿರುವ ಮಹಾಂತೇಶ ಸೊಗಲದ ಅವರಪೇಸ್ ಬುಕ್ ಹ್ಯಾಕ್ ಮಾಡಿ 2000,3000, 6000 ಹೀಗೆ ಬೇಕಾಬಿಟ್ಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹಾಗೂ …
Read More »ಕಿಮ್ಸ್ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ ಹೃದಯ ರೋಗಕ್ಕೆ ಸರಿಯಾದ ಚಿಕಿತ್ಸೆ: ತಜ್ಞ ವೈದ್ಯರಿಲ್ಲ, ಅಗತ್ಯ ಸಲಕರಣೆ ಇಲ್ಲವೇ ಇಲ್ಲ…!
ಹುಬ್ಬಳ್ಳಿ : ಅದು ಇಡೀ ಉತ್ತರ ಕರ್ನಾಟಕ ಭಾಗದ ಬಡರೋಗಿಗಳಿಗೆ ಸಂಜೀವಿನಿ ಎಂದೇ ಹೆಸರು ವಾಸಿಯಾಗಿರುವ ಆಸ್ಪತ್ರೆ. ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಆ ಆಸ್ಪತ್ರೆಯಲ್ಲಿ ಹೃದ್ರೋಗ ಶಸ್ತ್ರ ಚಿಕಿತ್ಸೆಗೆ ಬೇಕಾದ ನುರಿತ ತಜ್ಞರೂ ಇಲ್ಲ, ಅಗತ್ಯ ಸಲಕರಣೆಗಳೂ ಇಲ್ಲ. ಹೌದು.. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯ ವ್ಯವಸ್ಥೆಯಿಲ್ಲದೇ ಹೃದಯ ರೋಗಿಗಳು ಪರದಾಡುವಂತಾಗಿದೆ. ಉತ್ತರ ಕರ್ನಾಟಕದ ಐದಾರೂ ಜಿಲ್ಲೆಯ ರೋಗಿಗಳಿಗೆ ಆಧಾರವಾದ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ …
Read More »ಸ್ವಾಮಿನಾಥನ್ ವರದಿ ಜಾರಿಗೆ ಪಟ್ಟು ಹಿಡಿದ ಅನ್ನದಾತ-ರಾಷ್ಟ್ರೀಯ ಹೆದ್ದಾರಿ ತಡೆದ ರೈತ ಮುಖಂಡರು
ಹುಬ್ಬಳ್ಳಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳಸಾ ಬಂಡೂರಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ ರೈತ ಮುಖಂಡರು ಹುಬ್ಬಳ್ಳಿಯ ಗಬ್ಬೂರು ಟೋಲ್ ಬಳಿ ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸ್ವಾಮಿನಾಥನ್ ಆಯೋಗದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





