admin
November 20, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಧಾರವಾಡ: ರಾಜ್ಯದಲ್ಲಿ ಕಾರ್ತಿಕ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮಳೆ ಹೆಚ್ಚಾಗುವ ಲಕ್ಷಣ ಇದೆ. ಕಾರ್ತಿಕ ಕಳೆಯುವವರೆಗೂ ಮಳೆ ಇರುತ್ತದೆ. ಸದ್ಯ ಪ್ರಕೃತಿ ವಿಕೋಪವಾಗಿದೆ. ಏನೂ ಮಾಡಲು ಆಗುವುದಿಲ್ಲ ಎಂದರು.ಅನಾಹುತಗಳು ಹೆಚ್ಚಾಗುವ ಸಾಧ್ಯತೆ ಇದೆ. ಸಂಕ್ರಾಂತಿವರೆಗೂ ಮಳೆ ಇರಲಿದೆ ಎಂದರು. ಇದೇ ವೇಳೆ ರಾಜಕೀಯದ ಬಗ್ಗೆ ಭವಿಷ್ಯ …
Read More »
admin
November 19, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕುಂದಗೋಳ: ಎಲ್ಲೇಡೆ ಸುರಿಯುತ್ತಿರುವ ಅಕಾಲಿಕ ಮಳೆಯ ಪರಿಣಾಮ ಬೆಳೆದ ಬೆಳೆ ನೆಲಕಚ್ಚಿ ಅನ್ನದಾತನ ಬದುಕು ಕಷ್ಟವಾಗಿ ಅದೆಷ್ಟೋ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಪರಿಸ್ಥಿತಿಯನ್ನು ಮನಗಂಡ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಜನರು ಶಾಂತಿನಾಥರ ಮೋರೆ ಹೋಗಿ ಮಳೆ ಆರ್ಭಟ ಕಡಿಮೆ ಮಾಡುವಂತೆ ಪಂಚಾಮೃತ ಅಭಿಷೇಕ ಕೈಗೊಂಡಿದ್ದಾರೆ. ಗುಡೇನಕಟ್ಟಿ ಗ್ರಾಮದ ಶ್ರೀ 1008 ಶಾಂತಿನಾಥರ ಜೈನ್ ಮಂದಿರದಲ್ಲಿ ಇಂದು ಜೈನ ಧರ್ಮದ ಗುರುಗಳು ಮಳೆರಾಯ ಆರ್ಭಟ ಕಡಿಮೆ ಮಾಡಿ …
Read More »
admin
November 19, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಧಾರವಾಡ: ಎಲ್ಲಿ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಶಾಲೆಗೆ ಹೋಗುತ್ತಾರೋ ಹಾಗೂ ಪ್ರವಾಹ ಎದುರಾಗುವ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಾದ್ಯಂತ ಎರಡ್ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದರಿಂದ ಹಳ್ಳ, ಕೊಳ್ಳಗಳು ತುಂಬಿ ಬರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಲ್ಲಿ ಹಳ್ಳಗಳನ್ನು ದಾಟಿಕೊಂಡು ಮಕ್ಕಳು ಶಾಲೆಗೆ ಹೋಗಬೇಕೋ ಅಂತಹ ಪ್ರದೇಶದಲ್ಲಿನ ಶಾಲೆಗೆ ರಜೆ …
Read More »
admin
November 19, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ.ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು, ನಿಜ. ಆದರೆ ರೈತರ ಹಿತಕ್ಕಾಗಿ ಕೃಷಿ ಕಾಯಿದೆ ನಿಷೇಧ ಮಾಡಲಾಗಿದೆ. ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಹಿನ್ನೆಲೆಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. …
Read More »
admin
November 19, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇವತ್ತು ಬಹಳ ಐತಿಹಾಸಿಕ ದಿನ. …
Read More »
admin
November 19, 2021
ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ಖಡಕ್ ಎಚ್ಚರಿಕೆ ನೀಡಿದೆ. ಹೌದು. ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ ಕುಲಕರ್ಣಿ ಅವರು ಪಿಐಎಲ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನಗರದ …
Read More »
admin
November 19, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾಂಗ್ರೆಸ್ನ ನಾಯಕರು ಪಾರ್ಟ್ ಟೈಮ್ ಲೀಡರ್ಸ್ ಇದ್ದಂತೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಪಾರ್ಟ್ ಟೈಮ್ ಅಲ್ಲ ಫುಲ್ ಟೈಮ್ ಲೀಡರ್ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನು ಬರೆಯುತ್ತೇವೆ. ಹಿಂದುಳಿದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಾಗೆ ಬಿಜೆಪಿ ಮಾಡಿಲ್ಲ. ಕಾಂಗ್ರೆಸ್ ಹಗರಣದ ರಾಜಕಾರಣ ಮಾಡುತ್ತಾ …
Read More »
admin
November 18, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಉತ್ತರ ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಹೆಚ್. ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಜೋರು ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಮಳೆ ದಕ್ಷಿಣದಿಂದ ಈಗ ಉತ್ತರಕ್ಕೆ ಬಂದಿದೆ. ನಮ್ಮ ರಾಜ್ಯದ ದಕ್ಷಿಣ ಭಾಗದಂತೆ ಈಗ ಉತ್ತರ ಭಾಗದಲ್ಲಿಯೂ ಮಳೆಯಾಗಲಿದೆ ಎಂದರು.ನವೆಂಬರ್ 19 ಮತ್ತು 20ರಂದು …
Read More »
admin
November 18, 2021
ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ :ಭಾರತೀಯ ಜನತಾ ಪಾರ್ಟಿಯ ಹು-ಧಾ ಪಶ್ಷಿಮ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ನಗರದ ಖಾಸಗಿ ಹೊಟೆಲ್ನಲ್ಲಿ ಗುರುವಾರ ಜರುಗಿತು.ಸಭೆಯಲ್ಲಿ ಮುಖ್ಯ ಅಥಿಯಾಗಿ ಪಾಲ್ಗೊಂಡು ಮಾತನಾಡಿದ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷರು ಆದ ಶಾಸಕ ಅರವಿಂದ ಬೆಲ್ಲದ,ಪಕ್ಷದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ವಾರ್ಡ್ ಮಟ್ಟದಲ್ಲಿ ಸಭೆ ನಡೆಸಬೇಕು. ಪ್ರಮುಖವಾಗಿ ಯುವ ಮೋರ್ಚಾ, ಮಹಿಳಾ ಮೋರ್ಚಾ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮೋರ್ಚಾ, ಹಿಂದುಳಿದ ವರ್ಗ ಮೋರ್ಚಾಗಳ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ …
Read More »
admin
November 18, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತೃಗಳು ಸದ್ದು ಮಾಡುತ್ತಿವೆ. ದುಷ್ಕರ್ಮಿಗಳು ರೈಲ್ವೆ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿ ನಡೆದಿದೆ. ಹುಬ್ಬಳ್ಳಿ- ಗದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿಯೇ ಚಂದ್ರಶೇಖರ ನಾಯ್ಡು ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಮೂರ್ನಾಲ್ಕು ಬಾರಿ ಇರಿದಿದ್ದರಿಂದ ತೀವ್ರವಾದ ರಕ್ತಸ್ರಾವವಾಗಿದೆ. ತಕ್ಷಣವೇ ರೈಲ್ವೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ …
Read More »