admin
November 14, 2021
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಸಾಂದರ್ಭಿಕ ಚಿತ್ರ ಧಾರವಾಡ: ರಸ್ತೆ ದಾಟಿ ಹೊರಟಿದ್ದ ಪಾದಚಾರಿಯೊಬ್ಬರಿಗೆ ಬಿಆರ್‌ಟಿಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಕೋರ್ಟ್ ವೃತ್ತದ ಬಳಿ ನಡೆದಿದೆ.ಮಲ್ಲಣ್ಣ ಎಂಬಾತನೇ ಈ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ. ಬಿಆರ್‌ಟಿಎಸ್ ಬಸ್ ನಿಲ್ದಾಣದಿಂದ ಈ ವ್ಯಕ್ತಿ ಇಳಿದು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »
admin
November 13, 2021
ಕರ್ನಾಟಕ, ಧಾರವಾಡ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಬೆಂಬಲಿಗ ಗಜಾನನ ಅನ್ವೇಕರ್ ಎಂಬುವವರು ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿಕ್ಷಕರ ಸಂಘದ ಕೋಶ್ಯಾಧ್ಯಕ್ಷರಾದಂತಹ ಆರ್. ಎಚ್ ಪಾಟೀಲ್ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧ ಸಂಘ ಕಟ್ಟಿಕೊಂಡು ಚುನಾವಣೆ ಮಾಡುತ್ತಿದ್ದೀಯಾ ಎಂದು …
Read More »
admin
November 13, 2021
Uncategorized, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಾಂದರ್ಭಿಕ ಚಿತ್ರ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.ಬೆಳ್ಳಂಬೆಳಿಗ್ಗೆಯಿಂದ ಆರಂಭವಾದ ಮಳೆ ಹುಬ್ಬಳ್ಳಿ ಜನರನ್ನು ಗದುರಿಸಿದೆ. ಮೋಡ ಕವಿದ ವಾತಾವರಣದಲ್ಲಿ ಸುರಿದ ಮಳೆಯಿಂದ ಜನರು ಮಳೆಯಲ್ಲಿ ಸಿಲುಕಿಕೊಂಡು ಪರದಾಡುವಂತಾಗಿದೆ.ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಎರಡು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ ಕೆಲವೆಡೆ ತಗ್ಗು ಪ್ರದೇಶದ …
Read More »
admin
November 13, 2021
Breaking News, ಗಾಸಿಪ್, ಜಿಲ್ಲೆ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೆಲವೊಂದು ಕಿಡಿಗೇಡಿಗಳು ವ್ಯಾಯಾಮ ಶಾಲೆ, ಕುಸ್ತಿ, ಫಿಟನೆಸ್ ಸೆಂಟರ್ ಹಾಗೂ ಜಿಮ್ ಗೆ ಹೋಗುವುದಿಂದ ಹೃದಯಾಘಾತ ಹೆಚ್ಚಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಇದಕ್ಕೆ ತಲೆಕೊಡದೇ ತಜ್ಞರ ಸಲಹೆ ಮೇರೆಗೆ ಆರೋಗ್ಯ ಸಂಬಂಧಿಸಿದ ವ್ಯಾಯಾಮವನ್ನು ವ್ಯವಸ್ಥಿತವಾಗಿ ಮಾಡಬಹುದೆಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಮತ್ತು ಚಲನಚಿತ್ರ ನಟ ಕೃಷ್ಣ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ …
Read More »
admin
November 13, 2021
Breaking News, News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಅವರು ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಒಳ್ಳೆಯ ಕೆಲಸ ಮಾಡುತ್ತಾರೋ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟಾಗಲೇ ಮುಖ್ಯಮಂತ್ರಿ ಆಗಿರುತ್ತಾರೆ. ಬೊಮ್ಮಾಯಿ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಬದಲಾವಣೆ ಆಗುವುದಿಲ್ಲ. ಒಳ್ಳೆಯ …
Read More »
admin
November 13, 2021
Breaking News, News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಸುಂದರ ಜೀವನದ ಹೊಂಗನಸು ಹೊತ್ತು ಮದುವೆಯ ನಿಶ್ಚಿತಾರ್ಥ ಮಾಡಿಕೊಂಡಿದ್ದ ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿಯೋರ್ವಳು ನೇಣಿಗೆ ಶರಣಾದ ಧಾರುಣ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಅಶೋಕನಗರ ಪೊಲೀಸ್‍ಠಾಣೆ ವ್ಯಾಪ್ತಿಯ ಸಂತೋಷ ನಗರ ನಿವಾಸಿ ಪವಿತ್ರ (25) ನಿನ್ನೆರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆಯಾಗಿದ್ದಾಳೆ.ನೆರೆಯ ಹಾವೇರಿ ಮೂಲದ ಅಭಿನಂದನ್ ಎಂಬುವವನ ಜೊತೆ ಸೆ.1ರಂದು ಪವಿತ್ರಾಗೆ ಮದುವೆಯ ನಿಶ್ಚಿತಾರ್ಥ ನೆರವೇರಿತ್ತು. ಆದರೆ ಸಂಶಯದ ಪಿಶಾಚಿಯಂತಿದ್ದ …
Read More »
admin
November 12, 2021
Breaking News, ಕರ್ನಾಟಕ, ಗಾಸಿಪ್, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಆಧಾರ ರಹಿತ ಸುಳ್ಳಿನ ಪ್ರಚಾರ ಮಾಡುತ್ತಿದೆ. ಅಲ್ಲದೇ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹ್ಯಾಕರ್ ಶ್ರೀಕಿಯು ಹ್ಯಾರಿಸ್ ಪುತ್ರ, ರುದ್ರಪ್ಪ ಲಮಾಣಿ ಪುತ್ರನ ಹೆಸರು ಹೇಳಿದ್ದಾನೆ. ಕಾಂಗ್ರೆಸ್ ನವರು ಕುಂಬಳಕಾಯಿ …
Read More »
admin
November 12, 2021
Breaking News, ಜಿಲ್ಲೆ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ/ಬೆಂಗಳೂರು : ಬಿಟ್ ಕಾಯಿನ್ ಹಗರಣ (Bitcoin Scam) ಸದ್ದು ಮಾಡುತ್ತಿರುವ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಮಿಂಚಿನ ಸಂಚಲನ ಮೂಡಿಸಿದೆ.l ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ನವದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದಾರೆ. ಹುಬ್ಬಳ್ಳಿ-ಗಾಜಿಯಾಬಾದ್ ವಿಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ …
Read More »
admin
November 12, 2021
Breaking News, News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ …
Read More »
admin
November 12, 2021
ಹುಬ್ಬಳ್ಳಿ-ಧಾರವಾಡ
ಧಾರವಾಡ : ಭಾರತದ ಪಕ್ಷಿ ಮನುಷ್ಯ ಸಲೀಂ ಎಂ ಅಬ್ದುಲ್ ಅಲಿ 125 ನೇ ಜನ್ಮದಿನವನ್ನು ಮಕ್ಕಳೊಂದಿಗೆ ಪ್ರಗತಿ ವಿದ್ಯಾ ಮಂದಿರದಲ್ಲಿ ಹೆಗಡೆ ಮೆಡಿಕಲ್ಸ್ ವತಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ಮಲ್ಲನಗೌಡ ಗುಬ್ಬಿ, ಪಕ್ಷಿ ವೀಕ್ಷಕರಾದ ಎಸ್.ಎಂ.ಪಾಟೀಲ, ಸುನೀಲ ಅಗಡಿ, ಹೇಮನ್ ಜೈನ್, ಅಜಯ್ ಉಡಿಕೇರಿ ಮತ್ತಿತರರ ಸಹಕಾರದೊಂದಿಗೆ.ಪಕ್ಷಿ ತಜ್ಞ ಎಸ್.ಎಂ.ಪಾಟೀಲ ಅವರು ಪರಿಸರ ವಿಜ್ಞಾನದಲ್ಲಿ ಪಕ್ಷಿಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
Read More »