Breaking News

ಹುಬ್ಬಳ್ಳಿ-ಧಾರವಾಡ

Featured Video Play Icon

ಪ್ರಜಾಪ್ರಭುತ್ವದ ಹಬ್ಬ ಆರಂಭ: ಹುಬ್ಬಳ್ಳಿಯಲ್ಲಿ ಉತ್ಸುಕತೆಯಿಂದ ಮತದಾನ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರಜಾಪ್ರಭುತ್ವದ ಹಬ್ಬ ಆರಂಭವಾಗಿದೆ. ಲೋಕಸಭಾ ಚುನಾವಣೆಯ ಮತದಾನ‌ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಳ್ಳಂಬೆಳ್ಳಿಗೆ ಉತ್ಸಾಹದಿಂದ ಮತದಾನ ನಡೆಯುತ್ತಿದೆ.. ಲ್ಯಾಮಿಂಗ್ಟನ್ ಶಾಲೆಯ ಮತಗಟ್ಟೆಯಲ್ಲಿ‌ ಮತದಾನ‌ ಮಾಡಿದ ಹಿರಿಯ ಮತದಾರರು, ಅತ್ಯಂತ ಉತ್ಸುಕತೆಯಲ್ಲಿ ಮತದಾನ‌ ಪ್ರಕ್ರಿಯೆಯಲ್ಲಿ ಭಾಗಿಯಾದ ಮತದಾರರು, ಸರತಿ ಸಾಲಿನಲ್ಲಿ‌ ನಿಂತು ಮತದಾನಕ್ಕೆ ಮುಂದಾಗಿದ್ದಾರೆ.ಹಿರಿಯ ಮತದಾರರು ಹಾಗೂ ಪ್ರಥಮ‌ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾದ ಯುವ ಮತದಾರರು ಉತ್ಸಾಹದಿಂದ ಮತದಾನ ಮಾಡಿದರು‌.

Read More »
Featured Video Play Icon

ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ: ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ ಕಿಡಿ…

ಹುಬ್ಬಳ್ಳಿ: ಸಂವಿಧಾನದ ಬಗ್ಗೆ ಗೊತ್ತಿಲ್ಲದ, ಸಂವಿಧಾನ ಓದಿರದ ನರೇಂದ್ರ ಮೋದಿ ಪ್ರಚಾರಕ್ಕಾಗಿ ಸಂವಿಧಾನ ನಮ್ಮ ಧರ್ಮಗ್ರಂಥ ಎನ್ನುತ್ತಿದ್ದಾರೆ. ನರೇಂದ್ರ ಮೋದಿ ಸಾಧನೆಯ ವೀರ ಅಲ್ಲ, ಘೋಷಣಾ ವೀರ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯನ್ನು ತರುವುದು ವಾಡಿಕೆ. ಇದರಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ, ಮುಂದಿನ ದಿನಗಳಲ್ಲಿ ಮಾಡುವ ಯೋಜನೆ ಬಗ್ಗೆ ಹೇಳಬೇಕು. …

Read More »

ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ, ಪೋಲಿಸರಿಗೆ ಶರಣು ಸಾಧ್ಯತೆ…!

ಬೆಂಗಳೂರಿಗೆ ನಾಳೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ರೇವಣ್ಣನವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆಯೇ ಪೊಲೀಸರಿಗೆ ಶರಣಾರಾಗಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎನ್ನಲಾಗಿದ… ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಬೆಂಗಳೂರಿನ …

Read More »

ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ: ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,‌ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್. ಸಂತೋಷ ಆಗಮಿಸಿರುವುದು ನಿಜಕ್ಕೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ ಅವರಿಗೆ ಅದ್ದೂರಿಯಾಗಿ ಸ್ವಾಗತಕೋರಲಾಯಿತು.ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ದತ್ತಮೂರ್ತಿ ಕುಲಕರ್ಣಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ಸಂತೋಷ …

Read More »
Featured Video Play Icon

ಚುನಾವಣೆ ಅಧಿಕಾರಿಗಳ ಹಾಗೂ ಪೊಲೀಸರ ವಿರುದ್ಧ ಮಠಾಧೀಶರ ಹೋರಾಟ: ಕ್ಷಮೆಯಾಚನೆ ಮಾಡಿದ ಖಾಕಿ…

ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ..ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿಗಳು ತಡೆಯೊಡ್ಡಿದ್ದರಿಂದ ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ ಸೇರಿದಂತೆ ನಾಡಿನ ನೂರಾರು ಸ್ವಾಮಿಗಳು ಆಕ್ರೋಶ …

Read More »
Featured Video Play Icon

ನವನಗರ ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೋ: ಆರೋಪಿಯ ಬಂಧನ, ಕಮೀಷನರ್ ಹೇಳಿಕೆ..!

ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದರು.ನವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಇಂದು 4.30ಕ್ಕೆ ಕಿಮ್ಸ್ ಆಸ್ಪತ್ರೆಯಿಂದ ಎಂಎಲ್ ಸಿ ಕೇಸ್ ರೇಪರ್ ಆಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಾವು ಕೂಡಲೆ ಪೋಕ್ಸೋ ಅಡಿ ಪ್ರಕರಣ …

Read More »

ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಶವ: ಕೊಲೆಯ ಶಂಕೆ..!

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೋರ್ವನು ಶವವು ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ನಡೆದಿದೆ.ವ್ಯಕ್ತಿಯ ಶವವು ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ 30-35 ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನೂ ವ್ಯಕ್ತಿ ಬಗ್ಗೆ ಹಾಗೂ ಘಟನೆಯ ಬಗ್ಗೆ ಖಚಿತ ಮಾಹಿತಿ …

Read More »
Featured Video Play Icon

ಹುಬ್ಬಳ್ಳಿಗೆ ಚುನಾವಣೆ ಚಾಣಕ್ಯನ ಆಗಮನಕ್ಕೆ ಕ್ಷಣಗಣನೆ: ಕಿಕ್ಕಿರಿದ ಜನಸಾಗರ…

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪರವಾಗಿ ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಆಯೋಜಿಸಲಾಗಿರುವ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಹೌದು.. ಬಿಜೆಪಿ ಕರ್ನಾಟಕ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭಾಗಿದೆ. ಈಗಾಗಲೇ ಗಣ್ಯಾತಿಗಣ್ಯರು ಆಗಮಿಸಿದ್ದು, ಅಮಿತ್ ಶಾ ಆಗಮನವನ್ನು ಎದುರು ನೋಡುತ್ತಿದ್ದಾರೆ.ಇನ್ನೂ ಧಾರವಾಡ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಬಿಜೆಪಿ ಮತ್ತೊಮ್ಮೆ ಆತ್ಮಸ್ಥೈರ್ಯ …

Read More »
Featured Video Play Icon

ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟಪಡಿಸಬೇಕಿದೆ: ರಕ್ಷಾ ರಾಮಯ್ಯ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಜ್ವಲ್ ರೇವಣ್ಣ್‌ ನ ಪ್ರಕಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಸರ್ಕಾರ ಎಸ್ ಐ ಟಿಗೆ ಕೊಟ್ಟಿದೆ. ಈ …

Read More »
Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ …

Read More »