Breaking News

ಹುಬ್ಬಳ್ಳಿ-ಧಾರವಾಡ

ಟೊಮೇಟೊ ಬೆಳೆಗೆ ಬೆಂಕಿ ರೋಗ: ಚಿಂತಾ ಕ್ರಾಂತನಾದ ರೈತ.

ಹುಬ್ಬಳ್ಳಿ: ರಾಜ್ಯಾದ್ಯಂತ ಟೊಮೊಟೋ ಬೆಳೆ ಬೆಲೆ ಗಗನಕ್ಕೇರಿದೆ. ಇತಿಹಾಸದಲ್ಲಿಯೇ ಇಷ್ಟೊಂದು ಬೆಲೆ ಬಂದಿರಲಿಲ್ಲ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಅನ್ನದಾತರಿಗೆ ಚಿನ್ನದ ಬೆಲೆ. ಒಂದೆಡೆ ಬೆಳೆಗಾರರು ಲಾಭದಲ್ಲಿದ್ರೆ, ಕೊಳ್ಳುವವರು ಜೇಬಿಗೆ ಮಾತ್ರ ಬರೆ ಬೀಳುತ್ತಿದೆ. ಆದ್ರೆ ಧಾರವಾಡದ ರೈತ ಟೊಮೊಟೋ ಬೆಳೆದರೂ ಸಹ ಸಂಕಷ್ಟ ಎದುರಿಸುವಂತಾಗಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಪ್ರಕಾಶ ಸುಣಗಾರ ಎಂಬಾತರು ತಮ್ಮ ಒಂದೂವರೆ ಎಕರೆಯಲ್ಲಿ …

Read More »

ಜೈನ ಮುನಿಗಳ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಮಾಜ ಸೇವಕ ಮಾಬುಸಾಬ ಅರಗುಪ್ಪಿ ಆಗ್ರಹ

ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ …

Read More »

ಏಕರೂಪದ ನಾಗರಿಕ ಸಂಹಿತೆ ಜಾರಿಗೆ ಐದು ಲಕ್ಷ ಸಹಿ ಅಭಿಯಾನ – ಪ್ರಮೋದ ಮುತಾಲಿಕ

ಧಾರವಾಡ: ಭಾರತ ದೇಶದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಲು ಐದು ಲಕ್ಷ ಸಹಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಕರೂಪದ ನಾಗರಿಕ ಸಂಹಿತೆ ಈ ವಿಷಯದ ಕುರಿತು ಇಡೀ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆ ಪ್ರಾರಂಭವಾಗಿದೆ. ಈ ದೇಶದಲ್ಲಿ ಒಂದೇ ಕಾನೂನು ಇರಬೇಕು ಎನ್ನುವುದಕ್ಕೆ ಬೆಂಬಲವನ್ನ ಸೂಚಿಸುತ್ತಿದ್ದೇವೆ. ಇಡೀ ಜಗತ್ತಿನಲ್ಲಿ ಎರಡೆರಡು ಕಾನೂನುಗಳು ಯಾವ …

Read More »

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Read More »

ಹು-ದಾ ನಗರದಲ್ಲಿ ಹಲವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಪಿಎಸ್ಐ ಹೃದಯಾಘಾತದಿಂದ ನಿಧನ.

ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. 1993 ರ ಬ್ಯಾಚಿನ‌ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕಬಾಡೆ ಅವರ ಪಾರ್ಥಿವ ಶರೀರವನ್ನ ಕೆಲಕಾಲ ಆಸ್ಪತ್ರೆಯಲ್ಲಿಟ್ಟು ನಂತರ ಅವರ ಹುಟ್ಟೂರಾದ …

Read More »

ಪೌರ ಕಾರ್ಮಿಕರು ಮತ್ತು ನೌಕರ ಸಂಘದ ವತಿಯಿಂದ ನೂತನ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸನ್ಮಾನ

ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಾಗೂ ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್, ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, …

Read More »

‌ಧಾರವಾಡದಲ್ಲಿ ವಿಭಿನ್ನ ಪ್ರತಿಭಟನೆ

ಧಾರವಾಡ : ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಧಾರವಾಡದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಬರ್ಟ್ …

Read More »

ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಆಯ್ಕೆ

ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ. ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ …

Read More »

ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಕೋರ್ಸ ಈ ವರ್ಷದಲ್ಲೇ ಆರಂಭ: ಇದರ ಸದುಪಯೋಗ ಪಡೆಯುವಂತೆ ಶಾಸಕ ವಿನಯ ಕುಲಕರ್ಣಿ ಕರೆ.

ಧಾರವಾಡ: ನಗರದ ಸರ್ಕಾರಿ ಕಾಲೇಜಿನಲ್ಲಿ ಈ ವರ್ಷದಿಂದಲೇ ಜಾರಿಗೆ ಬರುವಂತೆ ಬಿಸಿಎ ಕೋರ್ಸ ಆರಂಭಿಸಲು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕರಾದ ವಿನಯ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಇಂದು ಹೇಳಿಕೆ ನೀಡಿರುವ ಅವರು, ವಿಧ್ಯಾರ್ಥಿಗಳ ಕಾಳಜಿಗಾಗಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರಾದ ವಿನಯ ಕುಲಕರ್ಣಿ ಮನವಿ ಮಾಡಿದ್ದಾರೆ.

Read More »

ಪೋಟೋ ವಿಡಿಯೋ ಮಾಹಿತಿ ತಂತ್ರಜ್ಞಾನದ ಅಡಿಪಾಯ- ಡಾ ವಿಶ್ವನಾಥ ಕೋಟಿ ಅಭಿಮತ.

ಧಾರವಾಡ ಡಿಜಿಟಲ್ ತಂತ್ರಜ್ಞಾನದ ಭರಾಟೆಯ ಮಧ್ಯೆಯೂ ಫೋಟೊಗ್ರಾಫರ್ ಗಳು ಹಾಗೂ ವಿಡಿಯೋಗ್ರಾಫರ್ ಗಳು ವೃತ್ತಿ ಉಳಿಸಿಕೊಳ್ಳುವುದು ದೊಡ್ಡ ಸವಾಲು ಎಂದು ಡಾ. ವಿಶ್ವನಾಥ ಕೋಟಿ ಹೇಳಿದರು. ಅವರು ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ ಧಾರವಾಡ ಸಂಘದ 16ನೇ ವಾರ್ಷೀಕೋತ್ಸವ, ಸಂಸ್ಥಾಪಕ ಆಡಳಿತ ಮಂಡಳಿ ಸದಸ್ಯರಿಗೆ ಅಭಿನಂದನಾ ಮತ್ತು ಹಿರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು. ಧಾರವಾಡ ಸುವರ್ಣ ಸಾಂಸ್ಕೃತಿಕ ಭವನ, ರಂಗಾಯಣದಲ್ಲಿ ಉದ್ಘಾಟಿಸಿ ಮಾತನಾಡಿದಠು ಪ್ರತಿಯೊಬ್ಬರ ಕೈಯಲ್ಲಿರುವ ಮೊಬೈಲ್ ಕ್ಯಾಮೆರಾಮನ್ ಗಳ ಹಾಗೂ …

Read More »