BigTv News
July 11, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು. ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ …
Read More »
BigTv News
July 11, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರೊಂದರ ಟೈಯರ್ ಬ್ಲಾಸ್ಟ್ ಆಗಿ ಅಪಘಾತಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ನವನಗರದ ಆರ್.ಟಿ.ಓ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬಿ.ಆರ್.ಟಿಎಸ್ ಬ್ಯಾರಿಕೇಡ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಬೆಳಗಾವಿ ಮೂಲದ ವಕೀಲರೊಬ್ಬರು ಪ್ರಯಾಣಿಸುತಿದ್ದರೆನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »
Shaikh BigTv
July 10, 2023
Breaking News, News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಇಂದು ನಗರದ ಇಸ್ಲಾಂಪೂರ ರಸ್ತೆಯ ಬಳಿ ನಡೆದಿತ್ತು.ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು (26) ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ.ಆರೋಪಿಗಳ ಬಲೆ ಬೀಸಿದ್ದ ಪೊಲೀಸ್ ಪಡೆ ಕೆಲವೇ ಗಂಟೆಗಳಲ್ಲಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಈ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ …
Read More »
Shaikh BigTv
July 10, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಸೋಇಚ್ಛೆ ಹಲ್ಲೆ ಮಾಡಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ.ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ.ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು (26)ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಸಾವನ್ನಪ್ಪಿದ್ದಾನೆ.ಈ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …
Read More »
Shaikh BigTv
July 10, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಹುಬ್ಬಳ್ಳಿಯ ಆನಂದ ನಗರದಲ್ಲಿ ಇಂದು ಬೆಳಂ ಬೆಳಿಗ್ಗೆ ಪತ್ನಿ ಕೊಲೆ ಮಾಡಿದ್ದಾನೆ.ಹುಬ್ಬಳ್ಳಿಯ ಆನಂದ ನಗರದಲ್ಲಿ ಈ ಘಟನೆ ಸಂಭವಿಸಿದ್ದು ಮಂಜುಳಾ ಮುತ್ತಿಲಗೇರಿ ( 48)ಮೃತ ದುರ್ದೈವಿಯಾಗಿದ್ದು, ಕೊಡಲಿಯಿಂದ ಕೊಲೆ ಮಾಡಿದ್ದಾನೆ, ಕುಡಿದು ಜಗಳಮಾಡಿ ನಂತರದಲ್ಲಿ ಮತ್ತಿನಲ್ಲಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ತದನಂತರದಲ್ಲಿಪೋಲಿಸ್ ಠಾಣೆಗೆ ಆರೋಪಿ ಸೆಲೆಂಡರ ಹಾಗಿದ್ದಾನೆ.ಬೀಮಪ್ಪ ಎಂಬ ವ್ಯಕ್ತಿ ಕೊಲೆ ಮಾಡಿದ ಆರೋಪಿಯಾಗಿದ್ದು, ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಘಟನೆಗೆ ಸಂಭಂದಿಸಿದಂತೆ ಪ್ರಕರಣ ದಾಖಲು …
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದ್ದು ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿಯವರು …
Read More »
bigtvnews22
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ. ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ …
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡದಿಂದ ಸವದತ್ತಿ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಸಂಭವಿಸಿದೆ. ಧಾರವಾಡದಿಂದ ಹೊರಟಿದ್ದ ಬಸ್ಸು, ಅಮ್ಮಿನಬಾವಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಾರಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Read More »
BigTv News
July 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿನ ವಿಠಲ ಬಾಚಗುಂಡಿ ಹಾಗೂ ಸ್ನೇಹಿತರು ಅಮರನಾಥ ಯಾತ್ರೆಗೆ ಹೋಗುವ ವೇಳೆಯಲ್ಲಿ ಗುಡ್ಡ ಕುಸಿತದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 5 ದಿನಗಳಿಂದ ಪಂಚತರಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಫೋನ ಮೂಲಕ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸಂಕಷ್ಟದಲ್ಲಿರುವ ಸಹಾಯಕ್ಕೆ ಮುಂದಾದ ಶಾಸಕರು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರ …
Read More »