Breaking News

ಕ್ರೀಡೆ

ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿಕೆ…

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲೆಯ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಟೂರ್ನಿಯುದ್ದಕ್ಕೂ ಭಾರತೀಯ ಆಟಗಾರರ ಆಟ ನಿಜಕ್ಕೂ ಅಮೋಘ. ಆಟಗಾರರ ಈ ಪ್ರದರ್ಶನ ಐಸಿಸಿ ಶ್ರೇಯಾಂಕದ ಮೇಲೆ ನೇರ ಪರಿಣಾಮ ಬೀರಿದೆ. ಹೀಗಾಗಿ ಟೀಮ್ ಇಂಡಿಯಾದ ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ.ಈಗಾಗಲೇ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ …

Read More »

ಚೇಸಿಂಗ್ ಸ್ಟಾರ್‌ ಪ್ರಸಕ್ತ ವಿಶ್ವಕಪ್‌ನಲ್ಲಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ….

2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಎಡವಿದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ. ಈ ವಿಶ್ವಕಪ್‌ನ ಸ್ಟಾರ್ ಆಟಗಾರ ಹಾಗೂ ಸಾರ್ವಕಾಲಿಕ ಶ್ರೇಷ್ಠ ವಿರಾಟ್‌ ಕೊಹ್ಲಿ ಪಾಲಿಗೆ ಕೊನೆಯ ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಈ ವೇಳೆ ವಿರಾಟ್‌ ಕೊಹ್ಲಿ ತಮ್ಮ ಕೊನೆಯ ಪ್ರಯತ್ನದಲ್ಲಿ ವಿಶ್ವಕಪ್‌ ಗೆಲ್ಲದೇ ಇರುವ ನೋವನ್ನು ಹೊಂದಿದ್ದಾರೆ. ಇದೀಗ ವಿಶ್ವಕಪ್‌ ಇತಿಹಾಸದ ಪುಟ ಸೇರಿದೆ. ಚೇಸಿಂಗ್ ಸ್ಟಾರ್‌ ಪ್ರಸಕ್ತ ವಿಶ್ವಕಪ್‌ನಲ್ಲಿ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. …

Read More »

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗುವ ಸಮೀಪದಲ್ಲಿದ್ದಾರೆ…

ನವೆಂಬರ್ 23ರಂದು ವಿಶಾಖಪಟ್ಟಣದಲ್ಲಿ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡದ ಆಯ್ಕೆ ಮಾಡಲಾಗಿದೆ.2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ತಂಡದ ಭಾಗವಾಗಿದ್ದ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ, ಟಿ20 ತಂಡವು ತಾಜಾ ಹಾಗೂ ಯುವ ಮುಖಗಳನ್ನು ಹೊಂದಿದೆ. ಇದೇ ವೇಳೆ ಭಾರತ ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್ …

Read More »

ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ…

ಐಸಿಸಿ ಏಕದಿನ ವಿಶ್ವಕಪ್ ಸರಣಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ. ಅಲ್ಲದೆ ಪ್ರಸಕ್ತ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದೆ. ಹಾಗಿದ್ದರೆ ಈವರೆಗಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಶತಕ ಬಾರಿಸಿದ ಆಟಗಾರರ ಪಟ್ಟಿಯ ದೊಡ್ಡದಿದೆ. ಆದರೆ ಫೈನಲ್ ಪಂದ್ಯದಲ್ಲಿ ಟೀಮ್ …

Read More »

ಎರಡನೇ ಸ್ಥಾನದಲ್ಲಿ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ಇದ್ದಾರೆ….

2023ರ ವಿಶ್ವಕಪ್ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಪ್ರಸಕ್ತ ವಿಶ್ವಕಪ್ ನಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ. ಟೀಮ್ ಇಂಡಿಯಾ 10 ಪಂದ್ಯಗಳನ್ನು ಆಡಿದ್ದು ಎಲ್ಲ ಪಂದ್ಯದಲ್ಲಿ ಜಯ ಸಾಧಿಸಿದೆ. ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಅವರ ದಾಖಲೆ ಉತ್ತಮವಾಗಿದೆ. ಶಮಿ ಜೊತೆಗೆ ರವೀಂದ್ರ ಜಡೇಜಾ ಕೂಡ ಸಾಕಷ್ಟು ವಿಕೆಟ್ …

Read More »

ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ 11 ಬಳಗ ಹೇಗಿರಲಿದೆ ಎನ್ನುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ….

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದ್ದು ಕ್ರಿಕೆಟ್ ಜಗತ್ತು ಈ ಪಂದ್ಯದ ಮೇಲೆ ಚಿತ್ತ ನೆಟ್ಟಿದೆ. ಇನ್ನು ಟೀಮ್ ಇಂಡಿಯಾ ಸುಮಾರು ಒಂದು ದಶಕದಿಂದ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ವಿಶ್ವಕಪ್ ಮೂಲಕ ಭಾರತದ ಈ ಐಸಿಸಿ ಟ್ರೋಫಿಯ ಬರ ನೀಗಲಿದೆ ಎನ್ನುವ ನಿರೀಕ್ಷೆ ಕೋಟ್ಯಂತರ ಅಭಿಮಾನಿಗಳಲ್ಲಿದೆ. ಟೀಮ್ ಇಂಡಿಯಾ …

Read More »

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ. ಈ ಬಹು ನಿರೀಕ್ಷಿತ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಇನ್ನು ಈ ಫೈನಲ್ ಪಂದ್ಯಕ್ಕೂ ಮುನ್ನ ಎರಡು ತಂಡಗಳ ಅಭಿಮಾನಿಗಳು ಹಲವಾರು ದೃಷ್ಟಿಕೋನದಿಂದ ಬೇರೆ ಬೇರೆ ರೀತಿಯಲ್ಲಿ ಲೆಕ್ಕಾಚಾರಗಳನ್ನು ಸಹಜವಾಗಯೇ ಮಾಡುತ್ತಾರೆ. ಪಂದ್ಯದ ಸಂದರ್ಭದಲ್ಲಿ ಹವಾಮಾನ ಹೇಗಿರಲಿದೆ? ಆಡುವ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ ದೊರೆಯಲಿದೆ? ಪಿಚ್ ಯಾವ ರೀತಿ ವರ್ತಿಸಬಹುದು? ಹೀಗೆ …

Read More »

ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ….

ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2023ರ ಐಸಿಸಿ ವಿಶ್ವಕಪ್ ಪ್ರಶಸ್ತಿಗಾಗಿ ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಅತಿ ದೊಡ್ಡ ಕ್ರೀಡಾಕೂಟಗಳಲ್ಲಿ ಒಂದು ಎಂದು ಹೇಳಲಾಗುವ ಏಕದಿನ ವಿಶ್ವಕಪ್‌ನ ಹೈ-ವೋಲ್ಟೇಜ್ ಪಂದ್ಯವು ಹಲವು ಗಣ್ಯಾತಿಗಣ್ಯರಿಂದ ಅಲಂಕರಿಸಲ್ಪಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ …

Read More »

ತನ್ನ ಮಾಜಿ ಹೆಂಡತಿಗೆ, ಶಮಿ ಬಾಲ್ ಮೂಲಕ ಉತ್ತರ…

ಭಾರತ ಕ್ರಿಕೆಟ್ ಟೀಂ ಐಸಿಸಿ ವಿಶ್ವಕಪ್ ಅಖಾಡದಲ್ಲಿ ಫೈನಲ್ ಪ್ರವೇಶಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯ ಆಡಿ ಕಪ್ ಗೆಲ್ಲಲು ಸಜ್ಜಾಗಿದೆ. ಅದ್ರಲ್ಲೂ ಭಾರತದ ಪರ ಬೆಂಕಿ ಬೌಲರ್ ಮೊಹಮ್ಮದ್ ಶಮಿ ತಮ್ಮ ರಿಯಲ್ ತಾಕತ್ ಏನು? ಅಂತ ಇಡೀ ಕ್ರಿಕೆಟ್ ಜಗತ್ತಿಗೆ ತೋರಿಸಿದ್ದಾರೆ. ಆದರೆ ತನ್ನ ಬಗ್ಗೆ ಪದೇ ಪದೆ ಮಾಡಬಾರದ ಆರೋಪಗಳನ್ನೇ ಮಾಡುತ್ತಾ ಟಾರ್ಗೆಟ್ ಮಾಡ್ತಿದ್ದ ತನ್ನ ಮಾಜಿ ಹೆಂಡತಿಗೆ, ಶಮಿ ಬಾಲ್ ಮೂಲಕ ಉತ್ತರಿಸಿದ್ದು ಹೇಗೆ …

Read More »

ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ…..

ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ ಭಾರತ ಈ ಬಾರಿ ಹೊಸ ಚರಿತ್ರೆ ಬರೆಯಲು ಎಲ್ಲ ಸಿದ್ಧತೆ ನಡೆಸಿದೆ. 2023ರ ಐಸಿಸಿ ವಿಶ್ವಕಪ್ ಕೊನೇ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇನ್ನೇನು ಈ ಭಾನುವಾರ ಗುಜರಾತ್ ರಾಜಧಾನಿ ಅಹಮದಾಬಾದ್‌ನ ‘ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ 2023ರ ಐಸಿಸಿ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತೆ. ಹೀಗಾಗಿ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ. ಐಸಿಸಿ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯಕ್ಕೆ ತಯಾರಿ ಜೋರಾಗಿ …

Read More »