Breaking News

ಕ್ರೀಡೆ

ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ…

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪುಣೆ-ಮುಂಬೈ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈಗ ಹಲವು ಊಹಾಪೋಹಗಳಿಗೆ ತೆರೆಬಿದ್ದಿದ್ದು, ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರೋಹಿತ್ ಶರ್ಮಾ ಮುಂಬೈನಿಂದ ಪುಣೆಗೆ ಬರುವಾಗ ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ನಿಜ, ಆದರೆ ಗುರುವಾರ ಅವರು ಗಂಟೆಗೆ 200 ಕಿ.ಮೀ ವೇಗದಲ್ಲಿ ಕಾರು ಚಾಲನೆ ಮಾಡಿದ್ದಾರೆ ಎನ್ನುವುದು ಸುಳ್ಳು …

Read More »

ಸೋತರೂ ಬಾಂಗ್ಲಾದೇಶ ಆಟಗಾರರನ್ನು ಹೊಗಳಿದ ನಟಿ ಸೆಹರ್ ಶಿನ್ವಾರಿ…

ಅಕ್ಟೋಬರ್ 19ರಂದು ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 256 ರನ್ ಗಳಿಸಿದರೆ, ಭಾರತ ತಂಡ ಕೇವಲ 41.3 ಓವರ್‌ಗಳಲ್ಲಿ 257 ರನ್‌ಗಳನ್ನು ಬೆನ್ನಟ್ಟಿತು. ಪುಣೆಯ ಅಂಗಳದಲ್ಲಿ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಏಕದಿನ ಮಾದರಿಯಲ್ಲಿ 48ನೇ ಶತಕ ಸಿಡಿಸುವ ಮೂಲಕ …

Read More »

ಪ್ರಮುಖ ವಿಶ್ವದಾಖಲೆಗಳು ಭಗ್ನವಾಗಿದ್ದು ಹೊಸ ವಿಶ್ವದಾಖಲೆಗಳು ಬರೆಯಲ್ಪಟ್ಟಿದೆ….

ಭಾರತದ ಆತಿಥ್ಯದಲ್ಲಿ ಐಸಿಸಿ ವಿಶ್ವಕಪ್ ಟೂರ್ನಿ ಭರ್ಜರಿಯಾಗಿ ಸಾಗುತ್ತಿದೆ. ಟೀಮ್ ಇಂಡಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ತಂಡಗಳು ಈವರೆಗಿನ ಸೆಣಸಾಟದಲ್ಲಿ ಭಾರೀ ಯಶಸ್ಸು ಸಾಧಿಸಿ ಎಲ್ಲರ ಗಮನಸೆಳೆಯುತ್ತಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳು ಭಾರೀ ಕಳಪೆ ಪ್ರದರ್ಶನ ನೀಡುತ್ತಿದ್ದು ಭಾರೀ ಹಿನ್ನಡೆಯಲ್ಲಿದೆ. ಪಂದ್ಯಗಳು ಮತ್ತಷ್ಟು ತೀವ್ರವಾಗಲಿದ್ದು ಮುಂದಿನ ದಿನಗಳಲ್ಲಿ ಈ ಕಾದಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವುದರಲ್ಲಿ ಅನುಮಾನವಿಲ್ಲ. ಇನ್ನು ಈ ಟೂರ್ನಿಯಲ್ಲಿ ಈಗಾಗಲೇ 14 ಪಂದ್ಯಗಳು ಆಯೋಜನೆಯಾಗಿದ್ದು ಸಾಕಷ್ಟು ಮನರಂಜನೆ …

Read More »

ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ…

ಪಾಕಿಸ್ತಾನ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ವಿರುದ್ಧ ಐಸಿಸಿಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 6ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೆದರ್ಲ್ಯಾಂಡ್ಸ್ ನಡುವಿನ ಪಂದ್ಯದ ವೇಳೆ, ಮೊಹಮ್ಮದ್ ರಿಜ್ವಾನ್ ನಮಾಜ್ ಮಾಡಿದ್ದರ ವಿರುದ್ಧ ದೂರು ನೀಡಲಾಗಿದೆ. ಸುಪ್ರೀಂ ಕೋರ್ಟ್ ವಕೀಲರಾದ ವಿನೀತ್ ಜಿಂದಾಲ್ ಅವರು ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸಿದ್ದಾರೆ. ರಿಜ್ವಾನ್ ಅವರು ಮೈದಾನದಲ್ಲಿ ನಮಾಜ್ ಮಾಡುವ ಮೂಲಕ …

Read More »

ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಳ್ಳಲು ಭಾರತ ಕ್ರಿಕೆಟ್ ತಂಡದ ಆಟಗಾರರು ಸಜ್ಜಾಗಿದ್ದಾರೆ…..

ಭಾರತ ಮತ್ತು ಪಾಕಿಸ್ತಾನ ಪಂದ್ಯ ಶುರುವಾಗಿದ್ದು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣ ಭಾರತದ ಅಭಿಮಾನಿಗಳಿಂದ ತುಂಬಿ ಹೋಗಿದೆ. ನಮ್ಮ ಹೆಮ್ಮೆ, ಭಾರತ ತಂಡದ ಗೆಲುವಿಗಾಗಿ ಶತಕೋಟಿ ಭಾರತೀಯರು ಪ್ರಾರ್ಥನೆ ಮಾಡುತ್ತಿದ್ದಾರೆ. ಈ ಸಮಯಕ್ಕೇ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಳ್ಳಲು ಭಾರತ ಕ್ರಿಕೆಟ್ ತಂಡದ ಆಟಗಾರರು ಸಜ್ಜಾಗಿದ್ದಾರೆ. ಹಾಗಾದ್ರೆ ವಿಶ್ವಕಪ್ ಅಖಾಡದಲ್ಲಿ ಭಾರತದ ಗೆಲುವಿನ ಅಬ್ಬರ ಹೇಗಿದೆ? ಇದುವರೆಗೆ ಭಾರತ & ಪಾಕಿಸ್ತಾನ ಆಡಿರುವ ಏಕದಿನ ಪಂದ್ಯಗಳ ಸಂಖ್ಯೆ 134 ಆಗಿದ್ದರೆ, …

Read More »

ಭಾರತ ಪಾಕಿಸ್ತಾನ ಪಂದ್ಯದಲ್ಲಿ ಶುಭಮನ್ ಗಿಲ್ ಆಡಬೇಕು: ಯುವರಾಜ್ ಸಿಂಗ್.

2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆಲ್ಲಲು ಆಲ್‌ರೌಂಡರ್ ಯುವರಾಜ್ ಸಿಂಗ್ ಪಾತ್ರ ಬಹಳ ಪ್ರಮುಖವಾಗಿತ್ತು. ಅವರು ತಮ್ಮ ಅದ್ಭುತ ಆಲ್‌ರೌಂಡ್ ಪ್ರದರ್ಶನದಿಂದ ಹಲವು ಪಂದ್ಯಗಳಲ್ಲಿ ಭಾರತ ಗೆಲ್ಲಲು ಸಹಾಯ ಮಾಡಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಕೂಡ ತಂಡಕ್ಕಾಗಿ ಆಡುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆದಿದ್ದರು. ಈ ಬಾರಿ ವಿಶ್ವಕಪ್‌ನಲ್ಲಿ ಶುಭಮನ್ ಗಿಲ್ ಡೆಂಗ್ಯೂವಿನಿಂದ ಬಳಲುತ್ತಿದ್ದು, ಮೊದಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ …

Read More »

ಭಾರತ ಹಾಗೂ ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮ…

ಈ ಬಾರಿಯ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಿತ್ತು. ಆದರೆ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇಲ್ಲದೆ ಸರಳವಾಗಿ ಈ ಪಂದ್ಯ ನಡೆದಿತ್ತು. ಆದರೆ ಉದ್ಘಾಟನಾ ಪಂದ್ಯ ತಾಣವಾದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮವನ್ನು ಬಿಸಿಸಿಐ ಹಮ್ಮಿಕೊಂಡಿದೆ. ಈ ವಿಚಾರವನ್ನು ಬಿಸಿಸಿಐ ಅಧಿಕೃತವಾಗಿ ‘ಎಕ್‌’ನಲ್ಲಿ ಹಂಚಿಕೊಂಡಿದೆ. ಈ ಮನರಂಜನಾ ಕಾರ್ಯಕ್ರಮದ ಬಗ್ಗೆ ಬಿಸಿಸಿಐ ಎಕ್ಸ್‌ನಲ್ಲಿ ಮೂರು …

Read More »

ಜಸ್ಪ್ರೀತ್ ಬುಮ್ರಾ ತನ್ನ ಪ್ರದರ್ಶನದಿಂದ ಸಂತೋಷವಾಗಿಲ್ಲ ಎಂದು ಹೇಳಿದ್ದಾರೆ…..

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಅತ್ಯತ್ತಮ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಸ್ಪಿನ್ನರ್ ಗಳು ಉತ್ತಮ ಬೌಲಿಂಗ್ ಮಾಡಿದ್ದರೆ, ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ವೇಗಿಗಳು ಮಿಂಚಿದ್ದರು. ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನದ ವಿರುದ್ದದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನವನ್ನು 272 ರನ್‌ಗಳಿಗೆ ಕಟ್ಟಿಹಾಕಿದರು. ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ ಎಂಟು ವಿಕೆಟ್‌ಗಳ ಭರ್ಜರಿ …

Read More »

ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ತಾಳ್ಮೆಯ ಬ್ಯಾಟಿಂಗ್ ಮಾಡುವ ಮೂಲಕ ಭಾರತವನ್ನು ಸೋಲಿನ ಸುಳಿಯಿಂದ ರಕ್ಷಿಸಿದರು…

ಭಾನುವಾರ ಚೆನ್ನೈನ ಎಂಎ ಚಿದಂಬರಂ ಅಂಗಳದಲ್ಲಿ ನಡೆದ 2023 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸ್ಪಿನ್ ದಾಳಿಗೆ ಸಿಕ್ಕು 199 ರನ್‌ಗಳಿಗೆ ಆಲೌಟ್ ಆಯಿತು. 200 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 2 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾದ ಇಶಾನ್ ಕಿಶನ್, ರೋಹಿತ್ ಶರ್ಮಾ ಸೊನ್ನೆಗೆ …

Read More »

ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ: ಅನಿಲ್ ಕುಂಬ್ಳೆ…

ಸೋಮವಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಜೋಡಿಯ ಅದ್ಭುತ ಜೊತೆಯಾಟದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ತಮ್ಮ ಮೂಲ ಆಟಕ್ಕೆ ಮರಳಿದ್ದಾರೆ. ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ ಎಂದು ಅನಿಲ್ ಕುಂಬ್ಳೆ ಹೇಳಿದರು. ನಾವೆಲ್ಲರೂ ನೋಡಿದಂತೆ ಕೆಎಲ್ ರಾಹುಲ್ ಅವರು ತಮ್ಮ ಮೂಲ …

Read More »