Breaking News

ಬೆಂಗಳೂರು

ರೆಬಲ್‌ ಶಾಸಕರಿಗೆ ಮಹತ್ವದ ಸ್ಥಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ…..

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಪಡೆಯಲು ಕಾಂಗ್ರೆಸ್‌ ಟಾರ್ಗೆಟ್‌ ಹಾಕಿಕೊಂಡಿದೆ. ಅದರಂತೆ ಕಾಂಗ್ರೆಸ್‌ ಪಾಳಯದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಲು ಪಕ್ಷದಲ್ಲಿ ಬಂಡಾಯಗೊಂಡ ಶಾಸಕರ ಅಸಮಾಧಾನವನ್ನ ಶಮನಗೊಳಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಂತ್ರಿಗಿರಿ ಮೇಲೆ ಕಣ್ಣೀಟ್ಟ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಕೆಲ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಈ ಅಸಮಾಧಾನ ಮುಂದಿನ ಲೋಕಸಭಾ ಚುನಾವಣೆಯ …

Read More »

ಅಮ್ಮ & ಅಪ್ಪನ ರೀತಿಯೇ ಸಿನಿಮಾ ರಂಗಕ್ಕೆ ಆರಾಧನಾ ರಾಮ್ ಹೆಜ್ಜೆ ಇಟ್ಟಿದ್ದಾರೆ…..

ಕಾಲವನ್ನು ತಡೆಯೋರು ಯಾರೂ ಇಲ್ಲ ಅನ್ನೋ ಸಾಲು ಹೊಂದಿರುವ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಅವರ ಹಾಡು ನಿಜವಾಗುತ್ತಲೇ ಇರುತ್ತೆ. ಈಗ ಸಿನಿಮಾ ಮಂದಿಗೂ ಈ ಹಾಡಿನ ಸಾಲು ಅನ್ವಯ ಆಗುತ್ತಿದೆ. ಅದರಲ್ಲೂ ‘ಕನಸಿನ ರಾಣಿ’ ಮಾಲಾಶ್ರೀ ಅವರ ಬದುಕಿನಲ್ಲಿ, ಈ ಹಾಡು ಮತ್ತೆ ಮತ್ತೆ ನಿಜವಾಗುತ್ತಿದೆ. ಒಂದು ಕಾಲದಲ್ಲಿ ಮಾಲಾಶ್ರೀ ಹೀರೋಯಿನ್ ಆಗಿದ್ರು ಹಾಗೂ ನೂರಾರು ಸಿನಿಮಾದಲ್ಲಿ ಮಿಂಚಿದ್ದರು. ಇದೀಗ ಮಗಳು ಕೂಡ, ಅಮ್ಮನ ಹಿರಿಮೆ ಮುಂದುವರಿಸಿದ್ದಾರೆ. ಆರಾಧನಾ ರಾಮ್ …

Read More »

ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು…

ಬೆಂಗಳೂರು:‌ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್‌ ನಿಮಗ ಮಂಡಳಿ ನೇಮಕದ ಕುರಿತು ಹೈಕಮಾಂಡ್‌ ಗೆ ಫೈನಲ್‌ ಲಿಸ್ಟ್‌ ನೀಡಿದೆ. ಮೊದಲ ನಿಗಮ ಮಂಡಳಿ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಅವಕಾಶ ನೀಡಿದ್ದಾರೆ ಎಂಬ ಮಾತುಗಳಿಗೆ ವಿರೋಧ ಕೇಳಿ ಬಂದಿತ್ತು. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ …

Read More »

ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು: ಎಂಬಿ ಪಾಟೀಲ.

ಬೆಂಗಳೂರು: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳುತ್ತಿಲ್ಲ. ಇದೆಲ್ಲ ನೋಡಿದರೆ ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕಾಂಗ್ರೆಸ್ ನಾಯಕ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬಿಜೆಪಿಗೆ ತಿರುತೇಟು ಕೊಟ್ಟಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಆರೋಪಿಸುತ್ತಿರುವ ಬಗೆಗಿನ ಸುದ್ದಿಗಾರರ ಪ್ರಶ್ನೆಗೆ …

Read More »

ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ….

ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್‌ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. …

Read More »

ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನ……

ಡಿಸೆಂಬರ್ ತಿಂಗಳು ಕನ್ನಡ ಚಿತ್ರರಂಗಕ್ಕೆ ಅಶುಭ ಅನ್ನೋದು ಮತ್ತೊಮ್ಮೆ ಸಾಬೀತಾಗುತ್ತಿದೆ. ಇತ್ತೀಚೆಗೆ ಹಿರಿಯ ನಟಿ ಲೀಲಾವತಿ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇನ್ನೇನು ಸಿನಿಪ್ರೇಮಿಗಳು ಆ ನೋವನ್ನು ಮರೆಯಲು ಯತ್ನಿಸುತ್ತಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 26)ಹೃದಯಾಘಾತದಿಂದ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. 57 ವರ್ಷ ಜಾಲಿ ಬಾಸ್ಟಿನ್ ಕನ್ನಡದ …

Read More »

ಈ ಸುತ್ತೋಲೆ ಅಪಘಾತ ಪರಿಹಾರ ನಿಧಿಯ ಪರಿಹಾರ ಮೊತ್ತವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ……

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ …

Read More »

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ…..

ಬೆಂಗಳೂರು: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬುಧವಾರ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಮಹಿಳೆ ಇಬ್ಬರು ಲೋಕಸಭೆಯ ಅತಿಕ್ರಮಣದಾರರಲ್ಲಿ ಒಬ್ಬರಾದ ಡಿ ಮನೋರಂಜನ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಕಳೆದ 10 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದೆಹಲಿ ಪೊಲೀಸರು ಮೈಸೂರಿನಲ್ಲಿರುವ ಮಹಿಳೆಯೊಬ್ಬರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಅವರ ಫೋನ್ ಕರೆ ದಾಖಲೆಗಳನ್ನು ಅಧ್ಯಯನ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ….

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ರಾಜಕೀಯ ನಾಯಕರಾದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ …

Read More »

ಶ್ರೀ ಸಿದ್ದರಾಮಯ್ಯ ಅವರು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ…

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿರುವ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಕಾರ್ಯಕ್ರಮವನನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲಿ ಒಂದಾದ ಯುವನಿಧಿ ಇದು ಜಾರಿಗೆ ತರಲಾಯಿತು. ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿರುವ ಇದು ಯುವಕರಿಗೆ ಸಹಾಯ ವಾಗುವುದು ಎಂದರು. …

Read More »