BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.ಮಂಗಳವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ವರ್ಗದ ಜನರಿಗೆ ರಾಜಕೀಯ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಬೇಡ ಎಂದರು.
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗ್ತಿದೆ. ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಇಂದು (ಡಿ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಶ್ರೀ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ. ಮಂಗಳವಾರ ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ರಾಷ್ಟ್ರೀಯ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ಪ್ರಮುಖ ಬೇಡಿಕೆಯೊಂದು ಈಗ ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಚರ್ಚೆಯನ್ನು ಹುಟ್ಟುಹಾಕಿದೆ. ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡಬೇಕು ಎಂದು ಸಮುದಾಯದ ಒಂದು ವರ್ಗ ಮತ್ತೆ ಒತ್ತಾಯಿಸಿದೆ. ಧರ್ಮದ ಅಂಕಣದಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬಳಸಲು ಸಮುದಾಯದ ಸದಸ್ಯರಿಗೆ ಮನವಿ ಸೇರಿದಂತೆ ಎಂಟು ನಿರ್ಣಯಗಳನ್ನು ಸಮಾವೇಶವು ಅಂಗೀಕರಿಸಿದೆ. ವೀರಶೈವ ಲಿಂಗಾಯತ …
Read More »
BigTv News
December 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಕಿಲೋಮೀಟರ್‌ಗಟ್ಟಲೇ ರೌಡಿಶೀಟರ್ ಅನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಭಯಾನಕ ಘಟನೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್. ಸಂಜೆ 7 ಗಂಟೆ ಸುಮಾರಿನಲ್ಲಿ ಐದಾರು ದುಷ್ಕರ್ಮಿಗಳ ಗುಂಪು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಹನುಮ ಜಯಂತಿ ಹಿನ್ನೆಲೆ ಜೈಪ್ರಕಾಶ್ ಲಕ್ಕಸಂದ್ರ ಬಸ್ ನಿಲ್ದಾಣದ ಬಳಿ ಆಂಜನೇಯ ದೇವಸ್ಥಾನದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. …
Read More »
BigTv News
December 25, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಶಕ್ತಿ ಯೋಜನೆಯಿಂದ ನಷ್ಟಾಕ್ಕೊಳಗಾಗಿರುವ ಸಾರಿಗೆ ನಿಗಮಗಳಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಾದ ಕೆ ಎಸ್ ಆರ್ ಟಿ ಸಿ, ಬಿ ಎಂ ಸಿ ಟಿ ಇತ್ಯಾದಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ 541 ಕೋಟಿ ತೆರಿಗೆ ವಿನಾಯಿತಿ ಘೋಷಿಸಿದೆ ಇದರಿಂದ ನಷ್ಟಾಕ್ಕೊಲಗಾಗಿರುವ ಸಾರಿಗೆ ಸಂಸ್ಥೆಗೆ ಸ್ವಲ್ಪ ರಿಲ್ಯಾಕ್ಸ್ ಮೂಡಿದೆ. ನಾಲ್ಕು ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂ ನಷ್ಟು ಮೋಟಾರು ವಾಹನ …
Read More »