Breaking News

ಬೆಂಗಳೂರು

ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್: ರಾಜ್ಯ ಬಿಜೆಪಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿಯ ಸಿಬಿಐ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಸಾರಸಗಟಾಗಿ ಹಿಂಪಡೆದು, ರಾಜ್ಯವನ್ನು ಗೂಂಡಾ, ಭ್ರಷ್ಟಚಾರಿಗಳ ಅಡುಗುದಾಣ ಮಾಡುತ್ತಿದೆ. ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ನ್ಯಾಯ, ಪ್ರಾಮಾಣಿಕತೆ ಎಂದು ಭಾಷಣ ಬಿಗಿಯುವ ಸಿದ್ದರಾಮಯ್ಯರವರೇ, ಡಿ. ಕೆ. ಶಿವಕುಮಾರ್ 5 ವರ್ಷಗಳಲ್ಲಿ 380 …

Read More »

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲು ಆತುರಪಡಬೇಡಿ….

ಬೆಂಗಳೂರು: ಜಾತಿ ಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲು ಆತುರಪಡಬೇಡಿ. ಈ ಬಗ್ಗೆ ಮುಂದುವರಿಯುವ ಮೊದಲು ಎಲ್ಲಾ ಸಮುದಾಯಗಳು ಮತ್ತು ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಜಾತಿ ಗಣತಿ ವರದಿಯ ಮೂಲ ಕರಡು ಪ್ರತಿ ನಾಪತ್ತೆಯಾದ ನಂತರ ಅವರು ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ …

Read More »

ಬಿಜೆಪಿ ಪಾಳಯದಲ್ಲಿನ ಅಸಮಾಧಾನ ಹೆಚ್ಚಾಗಿದೆ……

ಬೆಂಗಳೂರು: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್‌ ಕರ್ನಾಟಕದ ವಿರೋಧ ಪಕ್ಷದ ನಾಯಕರನ್ನಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್‌ ಅಶೋಕ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ನೇಮಕ ಮಾಡಿದ್ದು, ಬಿಜೆಪಿ ಪಾಳಯದಲ್ಲಿನ ಅಸಮಾಧಾನ ಹೆಚ್ಚಾಗಿದೆ. ಉತ್ತರ ಕರ್ನಾಟಕ ಭಾಗ ಬಿಜೆಪಿ ಹಿರಿಯ ನಾಯಕರು ಸೇರಿದಂತೆ ಬೆಂಗಳೂರು ಭಾಗವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ …

Read More »

ಬಿಜೆಪಿ ಶಾಸಕರು ಬಿ.ವೈ. ವಿಜಯೇಂದ್ರ ಆಯ್ಕೆ ಬಗ್ಗೆ ಅಸಮಾಧಾನ…

ಕರ್ನಾಟಕ ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ, ಬಿ.ವೈ. ವಿಜಯೇಂದ್ರ ಅವರನ್ನು ಅಧ್ಯಕ್ಷರಾಗಿ ನಿಯೋಜಿಸಿದ ನಂತರ ಸಾಕಷ್ಟು ಸಂಚಲನ ಸೃಷ್ಟಿಯಾಗಿದೆ. ಇದು ಯಾವ ಮಟ್ಟಿಗೆ ಎಂದರೆ ಬಹಿರಂಗವಾಗಿ ಬಿಜೆಪಿ ಶಾಸಕರು ಬಿ.ವೈ. ವಿಜಯೇಂದ್ರ ಆಯ್ಕೆ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ. ಅದರಲ್ಲೂ ಹಿಂದೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಕೆಲ ಬಿಜೆಪಿ ನಾಯಕರು ವಿಜಯೇಂದ್ರ ವಿರುದ್ಧ ತಿರುಗಿಬಿದ್ದಿದ್ದಾರೆ. ಇದನ್ನೇ ಈಗ ಕಾಂಗ್ರೆಸ್ ಅಸ್ತ್ರ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಬಿಜೆಪಿಗೆ ದೊಡ್ಡ ಸಂಕಷ್ಟ …

Read More »

ಇವರೆಗೆ ಶತಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದಾರೆ…

ಬೆಂಗಳೂರ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೊಟ್ಟ ಮೊದಲನೆಯದಾಗಿ ಜಾರಿಗೊಳಿಸಿದ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಐದು ತಿಂಗಳು ಪೂರೈಸಿದೆ. ಜೂನ್ 11 ರಿಂದ ನವೆಂಬರ್ 22 ವರೆಗೆ ಶತಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಲ್ಕು ನಿಗಮಗಳ ಬಸ್​ಗಳಲ್ಲಿ ಇಲ್ಲಿವರೆಗೆ ನೂರು ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂಬ ಮಾಹಿತಿಯಿದ್ದು, ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ …

Read More »

ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು‌ ಮೆಚ್ಚಿಸಲು ಹೊರಟಿದ್ದೀರಾ: ಸುನೀಲ್‌ ಕುಮಾರ್‌.

ಬೆಂಗಳೂರು: ಬರೋಬ್ಬರಿ ೧೬೨ ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? ಪೋರ್ಜರಿ ವರದಿ ತಯಾರಿಸಿ ರಾಹುಲ್ ಗಾಂಧಿಯವರನ್ನು‌ ಮೆಚ್ಚಿಸಲು ಹೊರಟಿದ್ದೀರಾ ? ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಪ್ರಶ್ನಿಸಿದ್ದಾರೆ. ಬೆಂಗಳೂರು, ನವೆಂಬರ್‌ 23: ಬರೋಬ್ಬರಿ ೧೬೨ ಕೋಟಿ ರೂ. ವೆಚ್ಚ ಮಾಡಿ ತಯಾರಿಸಿದ ಜಾತಿ ಗಣತಿಯ ವರದಿಯೇ ಲಭ್ಯವಿಲ್ಲ ಎಂದರೆ ಇದಕ್ಕೆ ಹೊಣೆ ಯಾರು ? …

Read More »

ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್….

ಸಾಮಾನ್ಯವಾಗಿ ನಾವು ಆಟೋ ರಿಕ್ಷಾಗಳ ಹಿಂದೆ ಕವಿತೆಗಳು, ಕವನಗಳು, ತಾತ್ಪರ್ಯಗಳು, ಅಪ್ಪ ಅಮ್ಮನ ಆಶೀರ್ವಾದ ಈ ರೀತಿಯ ಬರಹಗಳನ್ನು ನೋಡುತ್ತೇವೆ. ಇನ್ನೂ ಕೆಲವು ಆಟೋ ಡ್ರೈವರ್ ಗಳು ಕನ್ನಡ ಅಭಿಮಾನ, ನೆಚ್ಚಿನ ನಟರ ಚಿತ್ರಗಳ ಹೆಸರು, ಫೋಟೊಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ ಮಾತ್ರ ತಾನು ತೆಗೆದುಕೊಂಡ ಅಟೋ ಮೇಲೆ ಅದನ್ನು ಖರೀದಿ ಮಾಡದಂತೆ ಬರೆದಿದ್ದು ವ್ಯಾಪಕ ವೈರಲ್ ಆಗಿದೆ. ಆಟೋರಿಕ್ಷಾಗಳ ಹಿಂದೆ ಜಾಹೀರಾತು ಕೂಡ ನೀಡುವುದು ಸಾಮಾನ್ಯವಾಗಿದೆ. …

Read More »

ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ…

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲಿ ಕಾಂಗ್ರೆಸ್‌ ಪಾಳಯದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಗೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ದಿಢೀರ್‌ ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.ಈ ಕುರಿತು ಸಿದ್ದರಾಮಯ್ಯ ಅವರ ಜೊತೆಗೆ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕದ ಕುರಿತು ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್‌, ನಿಗಮ ಮಂಡಳಿ ನೇಮಕ …

Read More »

ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗರ ಸಂಘ ಕಳುಹಿಸಿದ್ದ ಪತ್ರಕ್ಕೆಡಿಕೆ ಶಿವಕುಮಾರ್ ಸೇರಿದಂತೆ ಮೂವರು ಸಚಿವರು ಹಾಗೂ 10 ಶಾಸಕರು ಸಹಿ…..

ಬೆಂಗಳೂರು: ಕರ್ನಾಟಕ ಸರ್ಕಾರ ಸ್ವೀಕರಿಸಲು ಮುಂದಾಗಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿ ವರದಿಯನ್ನು ಸಿದ್ದರಾಮಯ್ಯ ಸ್ವೀಕರಿಸುತ್ತೇವೆ ಎಂದು ಹೇಳಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಈ ವರದಿಯನ್ನು ತಿರಸ್ಕರಿಸಬೇಕು ಎಂದು ಹೇಳಿರುವ ಒಕ್ಕಲಿಗರ ಸಂಘದ ಪತ್ರಕ್ಕೆ ಸಹಿ ಹಾಕಿದ್ದಾರೆ.ಕಾಂತರಾಜ್ ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯ ವಿರುದ್ಧ ಒಕ್ಕಲಿಗರ ಸಂಘ ಕಳುಹಿಸಿದ್ದ ಪತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮೂವರು ಸಚಿವರು ಹಾಗೂ 10 ಶಾಸಕರು ಸಹಿ ಹಾಕಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಸುಧಾರಿತ ತಂತ್ರಜ್ಞಾನಗಳನ್ನು ಬಳಸಲು ನಗರ ಪೊಲೀಸರು ಯೋಜಿಸುತ್ತಿದ್ದಾರೆ…

ಬೆಂಗಳೂರು: ಬೆಂಗಳೂರು ನಗರ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ವಾಹನ ದಟ್ಟಣೆಯ ಪರಿಣಾಮಕಾರಿ ನಿರ್ವಹಣೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ), ನಕ್ಷೆ ಎಪಿಐಗಳು, ಎಮೋಜಿ ಸ್ಪೀಡ್ ಅಲರ್ಟ್ ಡಿಸ್ಪ್ಲೇಗಳು ಮತ್ತು ಇತರ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲು ನಗರ ಪೊಲೀಸರು ಯೋಜಿಸುತ್ತಿದ್ದಾರೆ ಎಂದು ಮನಿಕಂಟ್ರೋಲ್ ವರದಿ ಮಾಡಿದೆ. ಹೊರ ವರ್ತುಲ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಮೈಸೂರು ರಸ್ತೆ ಮತ್ತು ಹೊಸೂರು ರಸ್ತೆಯಂತಹ 20 ಪ್ರಮುಖ ಜಂಕ್ಷನ್‌ಗಳಲ್ಲಿ …

Read More »