Breaking News

ಬೆಂಗಳೂರು

ಪ್ರಿಯಾಂಕಾ ಗಾಂಧಿ ಕಾಲಿ ಹೂ ಗುಚ್ಛ ನಿಡಿ ಸ್ವಾಗತ…

ಇಂದೋರ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಖಾಲಿ ಹೂಗುಚ್ಛ ನೀಡಿ ಸ್ವಾಗತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದೋರ್‌ನ ಚುನಾವಣಾ ಸಭೆಯ ವೇದಿಕೆಯಲ್ಲಿ ಈ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸ್ವಾಗತಿಸುವಾಗ ಸ್ಥಳೀಯ ಪಕ್ಷದ ನಾಯಕರೊಬ್ಬರು ಅವರಿಗೆ ಖಾಲಿ ಪುಷ್ಪಗುಚ್ಛವನ್ನು ನೀಡಿದರು. ಇದನ್ನು ನೋಡಿದ ಪ್ರಿಯಾಂಕಾ ಅವರಿಗೆ ಮುಗುಳ್ನಗೆಯನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚುನಾವಣಾ …

Read More »

ಬೀದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್: ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್‌ ನೀಡಿದೆ. ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್‌ಗಳ ತಂಡ …

Read More »

ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು …

Read More »

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಲು ಬಂದಿದೆ..

ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ …

Read More »

ಬೆಂಗಳೂರು ವಿಮಾನ ನಿಲ್ದಾಣದ ಕಾಲಿ ಇರುವ ಹುದ್ದೆಗೆ ಅರ್ಜಿ ಕುರಿತು ಸುತ್ತೋಲೆ…

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ …

Read More »

ರೈತ ಸಾಂತ್ವನ ಯಾತ್ರೆ ಸ್ವಾಗತಿಸಿದ ಸಿದ್ದರಾಮಯ್ಯ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ‘ರೈತ ಸಾಂತ್ವನ ಯಾತ್ರೆ’ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯದ 31 ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ ‘ರೈತ ಸಾಂತ್ವನ ಯಾತ್ರೆ’ಯನ್ನು ಸ್ವಾಗತ ಮಾಡಿದ್ದಾರೆ. ‘ಈ ಯಾತ್ರೆಯ ನಂತರ ಅವರು ಕೊಡುವ …

Read More »

ಸಹೋದರನ ಗೋಳಾಟ! ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ:

ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ ಅವರ ಸಹೋದರ ಗೋಳಾಡಿದ್ದಾರೆ. ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕಳೆದ 8 ವರ್ಷಗಳಿಂದ ಅದೇ …

Read More »

ಅಕ್ಕಿಭಾಗ್ಯ ಯೋಜನೆ: ಇನ್ನೂ ಕೆಲ ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪೂರೈಕೆ ಕೊರತೆ ಕಾಡುತ್ತಿರುವ ಹಿನ್ನೆಲೆ ಇನ್ನೂ ಕೆಲವು ತಿಂಗಳುಗಳು ಅಕ್ಕಿ ಬದಲು ಖಾತೆಗೆ ಹಣ ಹಾಕಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಕೆಎಫ್​ಸಿಸಿಐ) ಅಧ್ಯಕ್ಷರಾದ ರಮೇಶ್​ ಚಂದ್ರ ಲಹೋಟೆಯವರು ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆ ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಂದರೇ ಶೇ.14 ರಷ್ಟು ಅಕ್ಕಿ ಉತ್ಪಾದನೆಯಲ್ಲಿ ಕುಂಠಿತವಾಗುವ …

Read More »

ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ: ಕಾವೇರಿ ನಿವಾಸದಲ್ಲಿ ಕಾನ್ಫರೆನ್ಸ್ ಹಾಲ್ ಉದ್ಘಾಟಿಸಿದ ಡಿಕೆಶಿ

ಬೆಂಗಳೂರು: ಸಿಎಂ ಜೊತೆ ಮುನಿಸು ಮರೆತ್ರಾ ಡಿಸಿಎಂ ಡಿ ಕೆ ಶಿವಕುಮಾರ್ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಬಳಿ ಕಾನ್ಫರೆನ್ಸ್ ಹಾಲ್ ಉದ್ಘಾಟನೆ ಮಾಡಿಸಿದ‌ ಸಿಎಂ ಸಿದ್ದರಾಮಯ್ಯ.ಇದೇ ವೇಳೆ ಉಭಯ ನಾಯಕರು ರಾಜಕೀಯ ಚರ್ಚೆ ನಡೆಸಲಾಯಿತು. ಅಧ್ಯಕ್ಷರ ಕೈಯಿಂದ ಉದ್ಘಾಟನೆ ಆದ್ರೆ ಪಕ್ಷಕ್ಕೆ ಒಳ್ಳೆಯದು ಅಂದ ಪರಮೇಶ್ವರ ಈ ವೇಳೆ ಕೆ ಎನ್ ರಾಜಣ್ಣ ಎಲ್ಲಿ ಅಂತ ಕರೆದ ಡಿಕೆಶಿ ನಿನ್ನೆ ನೀವು ಸಿಎಂ ಆಗಲಿ ಅಂತ ಹೇಳಿಕೆ‌ನೀಡಿದ್ದಾರೆ …

Read More »

ಪ್ರೇತ ಸಿನಿಮಾ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ..

ಪ್ರೇತ ಸಿನಿಮಾ ಮೂಲಕ ಕಲಾಕರ್ ಹರೀಶ್ ರಾಜ್ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಗೊತ್ತೇ ಇದೆ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಈ ಚಿತ್ರದ ಆಡಿಯೋ ಲಾಂಚ್ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಜೆಸಿ ನಗರದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ತಮ್ಮದೇ ಕ್ಷೇತ್ರದ ಕಲಾವಿದರಾದ ಹರೀಶ್ ರಾಜ್ ನಟನೆಯ ಪ್ರೇತ ಸಿನಿಮಾದ ಆಡಿಯೋ ಲಾಂಚ್ ಮಾಡಿ ಶುಭ ಹಾರೈಸಿದ್ದಾರೆ. ಈ ವೇಳೆ ಕಾಂತಾರದ ಚೆಲುವೆ …

Read More »