Breaking News

ಬೆಂಗಳೂರು

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯಲ್ಲಿ ದುರಾಡಳಿತವಿದೆ: ರಾಬಿನ್‌ ಉತ್ತಪ್ಪ.

ನವದೆಹಲಿ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ)ಯಲ್ಲಿ ದುರಾಡಳಿತವಿದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಪ್ರತಿಭೆಗಳನ್ನು ಬೆಳೆಯಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹಿರಿಯ ಕ್ರಿಕೆಟಿಗರನ್ನು ಕಡೆಗಣಿಸಿದ ರೀತಿ, ಹಲವರು ವಲಸೆ ಹೋಗುವಂತೆ ಮಾಡಿದ್ದರ ಬಗ್ಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಬಹಳಷ್ಟು ಪ್ರತಿಭೆಗಳು ದುರಾಡಳಿತಕ್ಕೆ ಬಲಿಯಾಗಿದ್ದಾರೆ. ಕೊನೆ ಬಾರಿ(2014-15)ರಣಜಿ ಟ್ರೋಫಿ ಗೆದ್ದ ತಂಡದಲ್ಲಿದ್ದ ಆಟಗಾರರು ವಿಭಜನೆಗೊಂಡು ಬೇರೆಡೆ ವಲಸೆ ಹೋಗಿದ್ದಾರೆ. …

Read More »

ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದ್ದು, ಕೇವಲ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಹೊಸ ಸಿನಿಮಾಕ್ಕಾಗಿ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಿನ್ನೆ ಸದ್ದಿಲ್ಲದೇ ಮಹೂರ್ತ ನೆರವೇರಿಸಲಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿದ್ದು, ಅಜನೀಶ್ ಲೋಕನಾಥ್ ಅವರ ಮ್ಯೂಸಿಕ್ ಇರಲಿದೆಯಂತೆ. ಸದ್ಯ, ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಡಿ-57’ ಎಂಬ ಹೆಸರಿಡಲಾಗಿದೆ. ಇದು ಪಕ್ಕಾ ಮಾಸ್ ಎಂಟರ್‌ಟೈನರ್‌ …

Read More »

ವಿದ್ಯುತ್‌ ದರ ಹೆಚ್ಚಳವಾಗಿದೆ: ಯಡಿಯೂರಪ್ಪ.

ಬೆಂಗಳೂರು: ವಿದ್ಯುತ್‌ ದರ ಹೆಚ್ಚಳವಾಗಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಹಿಂದಿನ ಬಿಜೆಪಿ ಸರ್ಕಾರವನ್ನೇ ಕುರಿತು ಟೀಕೆ ಮಾಡಿದಂತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮೂಲಕ ಅವರು ಯಡಿಯೂರಪ್ಪ ಅವರ ಆರೋಪಗಳಿಗೆ ಉತ್ತರ ನೀಡಿದ್ದಾರೆ. ಕೆಇಆರ್‌ಸಿ ಮಾರ್ಚ್‌ ತಿಂಗಳಿನಲ್ಲಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಮುಂದೆ ಮಂಡಿಸಿತ್ತು, ಈ ಪ್ರಸ್ತಾವನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದರಿಂದ ಮೇ. 12 …

Read More »

ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು: ಯಡಿಯೂರಪ್ಪ.

ಬೆಂಗಳೂರು: ರಾಜ್ಯ ಸರ್ಕಾರ ಎಟಿಎಂ ಆಗಿರುವುದಕ್ಕೆ ರಾಜ್ಯಕ್ಕೆ ವರಿಷ್ಠರು ಭೇಟಿ ನೀಡಿದ್ದಾರೆ. ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದಾರೆ. ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದರು.ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ.ಸರ್ಕಾರದ ಮೇಲೆ ನಿಯಂತ್ರಣವಿಲ್ಲದೆ ಸಿಎಂ ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದೆ ಉಚಿತ …

Read More »

ರಾಮಾಪುರ ಆನೆ ಶಿಬಿರದಲ್ಲಿದ್ದ 36 ವರ್ಷದ ಗಂಡಾನೆ ಸಾವು..!

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ರಾಮಾಪುರ ಆನೆ ಶಿಬಿರದಲ್ಲಿದ್ದ 36 ವರ್ಷದ ಗಂಡಾನೆ ಮೃತ ಪಟ್ಟಿದೆ. ಆರೋಗ್ಯವಾಗಿಯೇ ಇದ್ದ ಆನೆ, ತರಬೇತಿ ನೀಡುತ್ತಿದ್ದ ಸಂದರ್ಭ ದಿಢೀರ್‌ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಈ ಆನೆಗೆ ಅಕ್ಕಿರಾಜ ಎಂಬ ಹೆಸರು ಇದೆ, ತಮಿಳುನಾಡಿನ ಕೊಯಮತ್ತೂರಿನಲ್ಲಿ 2021ರಲ್ಲಿ ಸೆರೆ ಹಿಡಿದು ಬಂಡೀಪುರ ಸಮೀಪದ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಭಾರೀ ಗಾತ್ರದ ಆನೆಯು ಬಂಡೀಪುರ ಹುಲಿ ಸಂರಕ್ಷಿತ …

Read More »

ಜಗನ್ನಾಥ ಭವನದಲ್ಲಿ ಬಿಜೆಪಿ ಶಾಸಕರ ಸಭೆ….

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, …

Read More »

ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್…

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ …

Read More »

68 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….

ಬೆಂಗಳೂರು: ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಬಾರಿ 68 ಮಂದಿಗೆ ನೀಡಲಾಗಿದೆ. ಇದರ ಜತೆಗೆ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇವರಲ್ಲಿ ನೂರು ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ …

Read More »

ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ…

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 …

Read More »

ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಪತ್ತೆ…

ಬೆಂಗಳೂರು: ನಗರದ ಲುಲು ಮಾಲ್​ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ವೀಡಿಯೊ …

Read More »