Breaking News

ಬೆಂಗಳೂರು

ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್….

ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ಬಳಿಕ ಅರಣ್ಯಾಧಿಕಾರಿಗಳು ಅಲರ್ಟ್ ಆಗಿದ್ದು, ಯಾರೆಲ್ಲಾ ಆ ರೀತಿಯ ಲಾಕೆಟ್ ಧರಿಸಿದ್ದಾರೋ ಅವರಿಗೆಲ್ಲ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ರಾಜ್ಯಸಭೆ ಸದಸ್ಯ, ನಟ ಜಗ್ಗೇಶ್ ಅವರಿಗೆ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ. ವರ್ತೂರ್ ಸಂತೋಷ್ ಬಂಧನವಾದ ಬಳಿಕ ಹುಲಿ ಉಗುರಿನ ಲಾಕೆಟ್ ಧರಿಸಿರುವ ಎಲ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ …

Read More »

ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು…

ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ವಿವಿಧ ಗಣ್ಯರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಸಚಿವರನ್ನು ಪ್ರಶ್ನೆ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ, ನಟ, ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ವಿವಾಹದ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಸರ ಧರಿಸಿದ್ದರು ಎಂಬ ಸುದ್ದಿ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. …

Read More »

ನಟ ದರ್ಶನ್ ಅವರ ವಿರುದ್ಧ ಕ್ರಮ….

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ …

Read More »

ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ…

ಕನ್ನಡದ ಹಿರಿಯ ನಟಿ ತಾರಾ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತವಾಗಿ ತಾರಾ (Tara) ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಹಬ್ಬವನ್ನು ಮನೆಮಂದಿ ಸಂಭ್ರಮದಿಂದ ಆಚರಿಸುತ್ತಿರುವ ಪ್ರೊಮೋವನ್ನು ವಾಹಿನಿಯು ಬಿಡುಗಡೆ ಮಾಡಿದೆ. ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ, ಭರ್ಜರಿ ಮನೆರಂಜನೆಯನ್ನು ಮನೆಯೊಳಗೆ ಇದ್ದವರ ಜೊತೆ ಪಡೆದಿದ್ದಾರೆ. ಒಂದು ಕಡೆ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೆ, ಮತ್ತೊಂದು ಕಡೆ ಸೂತಕದ ಛಾಯೆಯೂ ಆವರಿಸಿಕೊಂಡಿದೆ. ಅದನ್ನು …

Read More »

ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ , ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿ….

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?’ ಎಂದು ಸವಾಲೆಸೆದಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ …

Read More »

ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ಹೆಸರು ಚರ್ಚೆ: ಡಿ.ಕೆ.ಶಿ..

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷೆಯಾಗಿ ಶೋಭಾ ಕರಂದ್ಲಾಜೆ ಹೆಸರು ಚರ್ಚೆ ವಿಚಾರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಯಾರನ್ನಾದರೂ ಬೇಕಾದ್ರೂ ಅಧ್ಯಕ್ಷರನ್ನ ಮಾಡಲಿ ಪಕ್ಷದ ಅಧ್ಯಕ್ಷರ ನೇಮಕ ಬಿಡಿ ವಿರೋಧ ಪಕ್ಷದ ನಾಯಕನನ್ನೇ ಮಾಡಲಿಲ್ಲ ಕಟೀಲ್ ಅಧ್ಯಕ್ಷರಾಗಿದ್ದಾರೆ ಆಗಿರಲಿ ಐದು ತಿಂಗಳಾದ್ರೂ ವಿಪಕ್ಷ ನಾಯಕ ಮಾಡಲಿಲ್ಲ ಅಂದ್ರೆ ಹೇಗೆ ಅವರ ಪಕ್ಷದ ದೌರ್ಬಲ್ಯ ನಾನು ಹೇಳಲ್ಲಅವರು ಯಾರನ್ನಾದ್ರೂ ಮಾಡಲಿ ಅವರು ಪ್ರತಿಪಕ್ಷವಾಗಿ ನಮ್ಮನ್ನ …

Read More »

ಟಿ.ಎ.ಶರವಣ ಪೊಲೀಸರ ಜೊತೆಗೂಡಿ ದಸರಾ ಹಬ್ಬವನ್ನು ಆಚರಣೆ…

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ಇಂದು ಪರಿಷತ್‌ ಸದಸ್ಯ ಟಿ.ಎ.ಶರವಣ ಅವರು ಜನರಿಗೆ ಭದ್ರತೆ ನೀಡುವ ಪೊಲೀಸರ ಜೊತೆಗೂಡಿ ದಸರಾ ಹಬ್ಬವನ್ನು ಆಚರಿಸಿಕೊಂಡರು. ಪೊಲೀಸ್‌ ವ್ಯವಸ್ಥೆ ಸಾಮಾಜಿಕವಾಗಿ ಭದ್ರತೆ, ರಕ್ಷಣೆಯ ವಿಚಾರದಲ್ಲಿ ಅಪಾರ ಗೌರವವನ್ನು ಹೊಂದಿದೆ. ಹಾಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್‌ ಸಿಬ್ಬಂದಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ತಮ್ಮ ವಯಕ್ತಿಕ ಜೀವನವನ್ನು ಬಿಟ್ಟು ಜನರಿಗಾಗಿ ತಮ್ಮ ಸೇವೆಯನ್ನು ಮುಡುಪಾಗಿಟ್ಟವರು ಈ …

Read More »

ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜಕಾರಣಿಗಳಿಗೆ ಯಾವುದೇ ಬರವಿಲ್ಲ…

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಭೀಕರ ಬರಗಾಲ ತಾಂಡವವಾಡುತ್ತಿದ್ದು, ಮಳೆ,ಬೆಳೆಯಿಲ್ಲದೇ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅಲ್ಲದೇ ಅಭಿವೃದ್ದಿ ಕೆಲಸಗಳೆಲ್ಲಾ ಮಂದಗತಿಯಲ್ಲಿ ಸಾಕುತ್ತಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ದಸರಾ ಹಬ್ಬಕ್ಕೆ ಸಂಪುಟದ ಸಚಿವರಿಗೆ ಭರ್ಜರಿ ಹೊಸ ಇನೋವಾ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ. ರಾಜ್ಯದಲ್ಲಿ ಉತ್ತರ ಮಳೆಯಾಗದೇ, ಇತ್ತ ಗ್ಯಾರಂಟಿ ಯೋಜನೆಗಳಿಂದಾಗಿ ಎಲ್ಲಾ ಇಲಾಖೆಯಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷಗಳು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಭೀಕರ ಬರಗಾಲದ ನಡುವೆ ಸಚಿವರಿಗೆ …

Read More »

ಬಹಳ ವಿಶೇಷ ಮತ್ತು ಸ್ಮರಣೀಯ ದಿನ: ಸಿದ್ದರಾಮಯ್ಯ

ಬೆಂಗಳೂರು: ಕೆ ಆರ್ ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಮೆಟ್ರೋ ರೈಲು ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ಶುಕ್ರವಾರ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುಯಲ್ ಸಭೆ ಮೂಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದರು. ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ ರಾಜೀವ್ ಗೌಡ, ಮಾಜಿ ಸಚಿವ, ಶಾಸಕ ಎಸ್ ಟಿ …

Read More »

ಯಾರೇ ತಪ್ಪು ಮಾಡಿದರೂ ಇದ್ರೆ ಶಿಕ್ಷೆ ಆಗಬೇಕು: ಸಿ.ಟಿ.ರವಿ

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ವಿಚಾರಕ್ಕೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡಿಲೇಬೇಕು ಎಂದು ವ್ಯಂಗ್ಯವಾಡಿದ್ದಾರೆ.ಇವೆಲ್ಲ ಹಳೇ ಕಾಲದ ಗಾದೆ ಮಾತುಗಳು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ತೊಂದರೆ ಆಗಬಾರದು. ಯಾರಾದರೂ ಅಕ್ರಮ ಮಾಡಿದರೆ ಅದು ಇಂದಲ್ಲ ನಾಳೆ ಬಯಲಿಗೆ ಬರಬೇಕು. ಸುಮ್‌ ಸುಮ್ನೆ ಗಾದೆ …

Read More »