BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ …
Read More »
BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ ಎಂದಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
Read More »
BigTv News
September 21, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಲಘಟ್ಟಪುರದ ನಾಗರಾಜ್ (47) ಮೃತರು. ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸನಾವುಲ್ಲಾ ಎಂಬಾತನ ಒಡೆತನದಲ್ಲಿರುವ ಕಂಪೆನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದರು. ಈ ಕಂಪೆನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ …
Read More »
BigTv News
September 21, 2023
ಬೆಂಗಳೂರು, ಸುದ್ದಿ
ಬೆಂಗಳೂರು: ಸಂಕಷ್ಟದ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಬಂಗಾರಪ್ಪರಂತೆ ಸುಗ್ರೀವಾಜ್ಞೆ ಜಾರಿಗೆ ತರಬೇಕು. ಇದಕ್ಕಾಗಿ ಕೂಡಲೇ ತುರ್ತು ಅಧಿವೇಶನ ಕರೆದು ಕಠಿಣ ನಿರ್ಧಾರಕ್ಕೆ ಮುಂದಾಗಬೇಕು, ಸರ್ಕಾರ ಹೋದರೂ ಚಿಂತೆ ಇಲ್ಲ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ನಿಲುವು ಪ್ರಕಟಿಸಬೇಕು ಎಂದು ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿಂದು, ನಮ್ಮ ನೀರು …
Read More »
BigTv News
September 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದ್ದು, ಅಲಂಕಾರಿಕ ವಸ್ತು, ಸರಕು ಸಾಗಣೆ ಕಾರಣದಿಂದ ಶೇ. 10 ರಿಂದ 20ರಷ್ಟು ಬೆಲೆ ಜಾಸ್ತಿಯಾಗಿದೆ. ಮನೆಗಳಲ್ಲಿ ಪೂಜಿಸಲ್ಪಡುವ ಚಿಕ್ಕ ಮೂರ್ತಿಗಳಿಂದ, ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲ್ಪಡುವ ದೊಡ್ಡ ಗಾತ್ರದ ಗಣೇಶ ವಿಗ್ರಹಗಳನ್ನು ಭಾನುವಾರ ಜನತೆ ಕೊಂಡೊಯ್ಯುತ್ತಿದ್ದುದು ನಗರಗಳಲ್ಲಿ ಕಂಡುಬಂತು. ಚೌತಿಗಾಗಿ ನಗರದ ಬೀದಿ ಬೀದಿಗಳಲ್ಲಿ ಗಣೇಶ ವಿಗ್ರಹಗಳು …
Read More »
BigTv News
September 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ ಎಂದು ಪುತ್ತಿಗೆಮಠದ ಸುಗುಣೇಂದ್ರ ತೀರ್ಥರು ತಿಳಿಸಿದರು. ಜೋಶಿ ಸಂಗೀತ ನೃತ್ಯ ನಾಟಕ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಮಣ್ಣಿನ ಗಣಪ ಮಾಡುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡುತ್ತಿದ್ದೇವೆ. ಅದರ ಜೊತೆಗೆ ಕೋಟಿ ಗೀತಲೇಖನ ಯಜ್ಞವನ್ನು ಮಾಡಬೇಕು. ಯಾಕೆಂದರೆ ಕೋಟಿ ಗೀತಾಲೇಖನ ಯಜ್ಞವನ್ನು ಮೊದಲು ಮಾಡಿದ್ದು ಗಣಪತಿ. ಆದ್ದರಿಂದ ಗಣಪತಿಗೂ …
Read More »
BigTv News
September 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ …
Read More »
BigTv News
September 16, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ …
Read More »
BigTv News
September 16, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಕರ್ನಾಟಕ IPS ಅಸೋಸಿಯೇಷನ್ ಅಧ್ಯಕ್ಷರಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಬಿ.ದಯಾನಂದ ನೇಮಕವಾಗಿದ್ದಾರೆ. ಅಸೋಸಿಯೇಷನ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಿ.ದಯಾನಂದ ಅವರು ಆಯ್ಕೆಗೊಂಡಿದ್ದಾರೆ. ಹಾಗೆ ಬೆಂಗಳೂರಿನಲ್ಲಿ ಇಂದು ಕೋಟ್ಯಂತರ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಮೂವರು ವಿದೇಶಿಯರು ಸೇರಿ 14 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದರು. ಬಂಧಿತರಿಂದ 7.83 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ
Read More »
BigTv News
September 15, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಯಲಹಂಕದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಮುನಿಯಮ್ಮರನ್ನು ಬಿಜೆಪಿ ನಿಯೋಗವು ಇಂದು ಭೇಟಿ ಮಾಡಿತು. ಕುಟುಂಬದ ಅಹವಾಲು ಆಲಿಸಿತು. ನಂತರ ಮಾತನಾಡಿದ ಮಾಜಿ ಡಿಸಿಎಂ ಕಾರಜೋಳ, ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ …
Read More »