Breaking News

ಬೆಂಗಳೂರು

ತಮಿಳುನಾಡಿಗೆ ನೀರು ಹರಿಸುವುದು ಸಾಧ್ಯವಿಲ್ಲ: ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ನಾವು ಸುಪ್ರೀಂಕೋರ್ಟ್​ ಆದೇಶಿಸಿದಂತೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು, ಕಾನೂನು ತಜ್ಞರ ಸಲಹೆ ಪಡೆದುಕೊಳ್ಳುವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ನೀರು ಹರಿಸುತ್ತೇವೆ. ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ವಿಚಾರವಾಗಿ ಇಂದು ಕರೆಯಲಾಗಿರುವ …

Read More »

ಬಿಜೆಪಿಯ ಪ್ರಮುಖ ನಾಯಕರೇ ಸರ್ವಪಕ್ಷ ಸಭೆಗೆ ಗೈರು…..

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಕರೆಯಲಾಗಿರುವ ಸರ್ವಪಕ್ಷ ಸಭೆಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಗೈರಿನ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಭೆಗೆ ಹಾಜರಾಗುತ್ತಿಲ್ಲ ಎನ್ನುವ ಸಂದೇಶ ಕಳಿಸಿದ್ದಾರೆ. ಹಾಗಾಗಿ ಬಿಜೆಪಿಯ ಪ್ರಮುಖ ನಾಯಕರೇ ಸರ್ವಪಕ್ಷ ಸಭೆಗೆ ಗೈರಾಗುತ್ತಿದ್ದಾರೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಿಮಿತ್ತ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಸರ್ವ ಪಕ್ಷ ಸಭೆಗೆ ಆಗಮಿಸುತ್ತಿಲ್ಲ ಎಂದು ತಿಳಿಸಿದ …

Read More »

ಖಾಸಗಿ ಸಾರಿಗೆ ಬಂದ್​ಗೆ ಕರೆ…

ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಅಸಮಾಧಾನ, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ರೂಪಾಯಿ ಧನಸಹಾಯ, ರಸ್ತೆ ತೆರಿಗೆ ರದ್ದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್​ಗೆ ಕರೆ ನೀಡಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ರಾತ್ರಿ 12ರವರೆಗೆ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಬಂದ್‌ಗೆ ಒಕ್ಕೂಟ ನಿರ್ಧರಿಸಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ …

Read More »

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು X ಖಾತೆಯಲ್ಲಿ (ಹಿಂದಿನ ಟ್ವಿಟ್ಟರ್​) ಸರಣಿಯಾಗಿ ಸಮಸ್ಯೆಗಳನ್ನು ಬರೆದಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು …

Read More »

ಭಾರತೀಯರನ್ನು ಮರೆತಿರುವ ಭಾರತೀಯರು: ಮಧು ಬಂಗಾರಪ್ಪ…

ಬೆಂಗಳೂರು :ಕ್ರೆಡಿಟ್​ ಕಾರ್ಡ್​​ ಸಂಪೂರ್ಣ ಮೊತ್ತವನ್ನು ಪಾವತಿಸಿದ ಬಳಿಕವೂ 6 ಸಾವಿರ ರೂ. ಪಾವತಿ ಮಾಡುವಂತೆ ಗ್ರಾಹಕರೊಬ್ಬರಿಗೆ ಸೂಚನೆ ನೀಡಿದ್ದ ಖಾಸಗಿ ಬ್ಯಾಂಕ್​ವೊಂದಕ್ಕೆ ಗ್ರಾಹಕರ ನ್ಯಾಯಾಲಯವು 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಅಲ್ಲದೇ, ನೋ ಡ್ಯೂ ಸರ್ಟಿಫಿಕೆಟ್​ ನೀಡುವಂತೆ ಸೂಚನೆ ನೀಡಿದ್ದಲ್ಲದೇ, ದಂಡದ ಮೊತ್ತವನ್ನು ಆದೇಶ ಪ್ರತಿ ಲಭ್ಯವಾದ 45 ದಿನಗಳಲ್ಲಿ ಪಾವತಿಸಬೇಕು. ಇಲ್ಲವಾದಲ್ಲಿ ಮಾಸಿಕ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಿದೆ.ಬೆಂಗಳೂರಿನ …

Read More »

ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಸಂತೋಷ್‌ ಲಾಡ್‌ ವಿರೋಧ

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ ಗಿಮಿಕ್ ಮೂಲಕ ಸಮಾಜ ಹಾಗೂ ಜನರ ಕಣ್ಣು ಕಟ್ಟುವ ವಿದ್ಯೆಯನ್ನು ಕರಗತ ಮಾಡಿಕೊಂಡಿದೆ. ಕೇವಲ ಒಂದು …

Read More »

ರಸ್ತೆಗಿಳಿಯಲಿರುವ ಡಬಲ್ ಡೆಕ್ಕರ್ ಬಸ್ ?

90ರ ದಶಕದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ಗಳು ಅತ್ಯಂತ ಗಮನ ಸೆಲೆಯುತ್ತಿದ್ದವು. ಈ ಬಸ್ಗಳಿಗೆ ಹತ್ತಿ ಮುಂಬದಿ ಸಿಟ್ ಹಿಡಿದು ನಗರದ ಸೌಂದರ್ಯ ಸವಿಯುವುದಕ್ಕೆ ಜನ ಮುಗಿಬೀಳುತ್ತಿದ್ದರು. ಆದರೆ ಕಾಲಾಕ್ರಮೇಣ ಮರೆಯಾಗಿದ್ದ ಡಬಲ್ ಡೆಕ್ಕರ್ ಬಸ್ಗಳು ಮತ್ತೆ ನಗರದಲ್ಲಿ ರಸ್ತೆಗಿಳಿಸಲು ಬಿಎಂಟಿಸಿ ತೀರ್ಮಾನಿಸಿದೆ.ಈಗಾಗಲೇ ಟೆಂಡರ್ ಕರೆದಿದ್ದು,ಶೀಘ್ರದಲ್ಲೇ ಬಸ್ ಗಳು ರೋಡಿಗಿಳಿಯೋ ಸುಳಿವು ಸಿಕ್ಕಿದೆ.. SSĻC PU ಪರೀಕ್ಷೆ ವಿಧಾನದಲ್ಲಿ ಬದಲಾವಣೆ: ವರ್ಷಕ್ಕೆ 3 ವಾರ್ಷಿಕ ಪರೀಕ್ಷೆ ನಡೆಸಲು ನಿರ್ಧಾರ! …

Read More »

ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಚಾಲಕರು ಸೆ.11ರಂದು ಆಟೋ, ಟ್ಯಾಕ್ಸಿ ಸೇವೆ ಬಂದ್ :

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 11ರಂದು ನಗರದಲ್ಲಿ ಆಟೋ, ಟ್ಯಾಕ್ಸಿ ಸೇವೆ ಬಂದ್ ಮಾಡಿ ಮುಷ್ಕರ ಆಚರಿಸಲು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿದೆ. ಅದಕ್ಕೂ ಮುನ್ನವೇ ಚಾಲಕರ ಹೋರಾಟ ತೀವ್ರಗೊಂಡಿದೆ. ಇಂದು ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ಸಭೆ ಸೇರಿದ ಆಟೋ, ಟ್ಯಾಕ್ಸಿ ಚಾಲಕರು ವಾಹನಗಳಿಗೆ ಕಪ್ಪು ಬಾವುಟ ಕಟ್ಟಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ …

Read More »

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ….

ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್ ಅವರ 75ನೇ ಜನ್ಮದಿನ ಹಾಗೂ ವೃತ್ತಿಜೀವನದ 50ರ ಸಂಭ್ರಮದ ಆಚರಣೆಯ ಸಲುವಾಗಿ ‘ಅನಂತ ಅಭಿನಂದನೆ’ ಕಾರ್ಯಕ್ರಮವು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು. ಅನಂತ್​ ನಾಗ್ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು. …

Read More »

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರ ಕಾರ್ಯಾಚರಣೆ ಮುಂದೂಡಿಕೆ…

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಕಾರ್ಯಾಚರಣೆಯ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ …

Read More »