Breaking News

ಬೆಂಗಳೂರು

ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ತಲೆ ಮೇಲೆ ಬಿದ್ದ ಹಲಸಿನ ಕಾಯಿ:

ಬೆಂಗಳೂರು: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ ಹಿನ್ನೆಲೆ ರಾಜ್ಯದ ಎಲ್ಲಾ ಕಡೆಗಳನ್ನು ಕಾರ್ಯಕ್ರಮ ನಡೆಸಲಾಗುತ್ತಿದೆ. ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್ ಅದರಂತೆ ಆನೆಕಲ್​ನಲ್ಲೂ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಟಪ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮಹಿಳೆಯರು ಪರದಾಡುತ್ತಿದ್ದಾರೆ. ಇನ್ನು ಮಹಿಳೆ ತಲೆಯ ಮೇಲೆ ಹಲಸಿನ ಕಾಯಿ ಬಿದ್ದಿದ್ದು …

Read More »

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ…

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಾನು ಮನೆಯಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್​ ಡ್ರೈವ್ ವಾದ, ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕುಮಾರಸ್ವಾಮಿ ಅವರನ್ನು ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ತುಂಬಾ ವಿಷಯಗಳಿವೆ. ನನಗೆ ಎಲ್ಲವೂ ಗೊತ್ತಿದೆ. ಪೆನ್ ​ಡ್ರೈವ್ ಬಗ್ಗೆ …

Read More »

ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ:ಎಸ್.ಟಿ ಸೋಮಶೇಖರ್.

ಬೆಂಗಳೂರು: ಪಕ್ಷ ಬಿಡುವ ಕುರಿತು ನಾನು ಯಾರೊಂದಿಗೂ ಮಾತುಕತೆ ನಡೆಸಿಲ್ಲ, ಮುಂಬರಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧೆ ಬಯಸಿರುವವರು ಮಾತ್ರ ಕಾಂಗ್ರೆಸ್ ಸೇರಿದ್ದಾರೆ. ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟೀಕರಣ ನೀಡಿದ್ದಾರೆ. ಯಶವಂತಪುರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷ ಬಿಡುವ ಬಗ್ಗೆ ಯಾರ ಜತೆಗೂ ಚರ್ಚೆ …

Read More »

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಗೊಳಿಸುವಂತೆ ಸೂಚನೆ…..

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 2023-24ನೇ ಬಜೆಟ್​ನಲ್ಲಿ ಘೋಷಿಸಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎಕರೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿಗಳು, 81 ಸಾವಿರ …

Read More »

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮನ…..

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಸಫಲವಾದ ಹಿನ್ನೆಲೆ ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಯಾವುದೇ ರೋಡ್ ಶೋ ನಡೆಸದೇ, ಪಕ್ಷದ ಬಾವುಟ ಪ್ರದರ್ಶಿಸದೇ ಕೇವಲ ಇಸ್ರೋ ವಿಜ್ಞಾನಿಗಳ ಭೇಟಿಗೆ ಸೀಮಿತಗೊಳಿಸಿ ಪ್ರಧಾನಿ ಪ್ರವಾಸ ಆಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಾಳೆ ಬೆಳಗ್ಗೆ 6 ಗಂಟೆಗೆ ನಗರದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಅವರಿಗೆ ಏರ್​ಪೋರ್ಟ್​ನಲ್ಲಿ ಸ್ವಾಗತ …

Read More »

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ: ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೊಂಡಾಡಿದ್ದಾರೆ. ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ. 125 ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದು …

Read More »

ನಟ ಪ್ರಕಾಶ್‌ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ….

ಬೆಂಗಳೂರು: ಭಾರತದ ಇಸ್ರೋ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ, ಆದರೆ ನಟ ಪ್ರಕಾಶ್‌ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ. ಅಂಥವರು ಭಾರತದಲ್ಲಿ ಇರಬೇಕಾದ ಅವಶ್ಯಕತೆ ಇಲ್ಲ, ಅವರು ಭಾರತ ಬಿಟ್ಟು ಹೋಗಲಿ ಎಂದು ಕೇಂದ್ರ ರೈತ, ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ‌ ಸಮುದ್ರನೇ ಕಾಂಗ್ರೆಸ್ ಪಕ್ಷ: DKS ಟಾಂಗ್‌! ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್ ರೈ ಅವರು ಚಂದ್ರಯಾನದಂಥ …

Read More »

ಚಂದ್ರನ ಅಂಗಳದಲ್ಲಿ ವಿಕ್ರಮ: ಬಸವರಾಜ ಹೊರಟ್ಟಿ ಕೋಟಿ ಕೋಟಿ ಅಭಿನಂದನೆ..

ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ‌ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ… ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು ಐತಿಹಾಸಿಕ ಘಟನೆ ಜಗತ್ತಿನ ಇತರ ಯಾವುದೇ ದೇಶಕ್ಕೆ ಆಗದಂತಹ ಒಂದು ವಿಷಯವನ್ನು ಭಾರತದ …

Read More »

ಅಶುದ್ಧ ನೀರು ಕುಡಿದು ಸಾವು….

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸಭೆರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ …

Read More »

₹1,000 ಕೋಟಿ ದಾಟಿದ ʼಶಕ್ತಿʼ ಟಿಕೆಟ್‌ ಮೌಲ್ಯ

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿ ‘ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಈವರೆಗೆ ಸಂಚರಿಸಿರುವ ಟಿಕೆಟ್‌ ಮೌಲ್ಯ ₹1,000 ಕೋಟಿ ದಾಟಿದೆ. ಜೊತೆಗೆ ಆರ್ಥಿಕ ಇಲಾಖೆಯು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕದಂತೆ ತಡೆಯಲು ಪ್ರತಿ ತಿಂಗಳು ಮರು ಪಾವತಿಗೆ ಸಹಮತ ನೀಡಿದೆ. ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿಂದ ಆ.20ರವರೆಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ಬಸ್‌ಗಳಲ್ಲಿ 78.21 ಕೋಟಿ ಜನರು ಪ್ರಯಾಣಿಸಿದ್ದು, ಅದರಲ್ಲಿ 43.03 …

Read More »