Breaking News

ಬೆಂಗಳೂರು

ಟೀಮ್ ಇಂಡಿಯಾ ಟ್ರೋಫಿ ಗೆಲ್ಲಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕು ಕಪಿಲ್ ದೇವ್

ಬೆಂಗಳೂರು: ತವರಿನ ಅಂಗಣದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಭಾರತ ತಂಡವೇ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಚಾಂಪಿಯನ್ ಪಟ್ಟ ಅಲಂಕರಿಸಬೇಕಾದರೆ ನಿರೀಕ್ಷೆಗಳ ಒತ್ತಡವನ್ನು ಜಯಿಸಬೇಕೆಂದು ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಲಹೆ ನೀಡಿದ್ದಾರೆ. 13ನೇ ಆವೃತ್ತಿಯ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯಲಿದ್ದು, ಇದಕ್ಕಾಗಿ ಬಿಸಿಸಿಐ, ಈಗಾಗಲೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸಂಭಾವ್ಯ …

Read More »

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರು ಪೊಲೀಸ್ ಕಸ್ಟಡಿ​ಗೆ..

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ. ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಏಳು ದಿನಗಳ ಕಾಲ ತೀವ್ರ ವಿಚಾರಣೆ ನಡೆದಿದ್ದು, ವಿಚಾರಣೆಯಲ್ಲಿ ಹಲವು ಸ್ಪೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ತಲೆಮರೆಸಿಕೊಂಡಿರುವ ಜುನೈದ್ …

Read More »

ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ….

ಬೆಂಗಳೂರು:ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ …

Read More »

ಆರ್​ಎಸ್​ಎಸ್​ನ ಹಿರಿಯ ಪ್ರಚಾರಕ ಮದನ್ ದಾಸ್ ದೇವಿ ನಿಧನ..

ಬೆಂಗಳೂರು: ಆರ್​ಎಸ್​ಎಸ್​ನ ಹಿರಿಯ ಪ್ರಚಾರಕ ಮದನ್ ದಾಸ್ ದೇವಿ (81 ವರ್ಷ ವಯಸ್ಸು) ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ದಾಸ್ ದೇವಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 1.30ರಿಂದ 4ರ ತನಕ ಬೆಂಗಳೂರಿನ ಆರ್​ಎಸ್​ಎಸ್​ ಕಾರ್ಯಾಲಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ಅಂತ್ಯಕ್ರಿಯೆ ಜರುಗಲಿದೆ.‌ ಜ್ಯೇಷ್ಠ ಪ್ರಚಾರಕರಾಗಿದ್ದ …

Read More »

ನಂದಿನಿ ಹಾಲು ದರ 3 ರೂಪಾಯಿ ಏರಿಕೆ: ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿ

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು …

Read More »

ಬ್ಯಾಂಕ್​ ಮ್ಯಾನೇಜರ್ ಬ್ಯಾಂಕ್​ಗೆ ಕನ್ನ..

ಗ್ರಾಮೀಣ ಬ್ಯಾಂಕ್​ವೊಂದರಲ್ಲಿ ಗ್ರಾಹಕರು ಕೋಟ್ಯಂತರ ಹಣ ಹೂಡಿಕೆ ಮಾಡಿದ್ದರು. ತಮ್ಮ ಜಮೀನು ಮಾರಿ ಅದರಿಂದ ಬಂದ ಹಣವನ್ನ ಬ್ಯಾಂಕ್​ನಲ್ಲಿ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ನಮ್ಮ ಹಣ ಸೇಫ್​ ಎಂದುಕೊಂಡಿದ್ದ ಗ್ರಾಹಕರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ, ಬ್ಯಾಂಕ್​ ಮ್ಯಾನೇಜರ್ ಬ್ಯಾಂಕ್​ಗೆ ಕನ್ನ ಹಾಕಿ ಪರಾರಿಯಾಗಿದ್ದಾರೆ. ಗಣೇಶ್ ಬಾಬು ಹೀಗೆ ಹಣ ಆರ್​​ಟಿಜಿಎಸ್​ ಮಾಡಿ ಪರಾರಿಯಾದ ಆರೋಪಿ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು …

Read More »

ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ……

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್​ ಊರುಳಿ ಬಿದ್ದಿದೆ. ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ …

Read More »

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ …

Read More »

ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ: ಸಿದ್ದರಾಮಯ್ಯ

ಬೆಂಗಳೂರು:ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …

Read More »

ಕಲಾಪ ಪ್ರತಿಭಟನೆ ವೇಳೆ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥ..

ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್‌ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್‌ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More »