BigTv News
July 19, 2023
News, ಕರ್ನಾಟಕ, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕನಾದ ನಾನು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು …
Read More »
BigTv News
July 19, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ …
Read More »
BigTv News
July 18, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿಪಕ್ಷಗಳ ಎರಡನೇ ಹಂತದ ಸಭೆ ನಡೆಯಲಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಯಾರೆಲ್ಲ ಭಾಗಿ?: ಕಾಂಗ್ರೆಸ್, ಎಎಪಿ, ಟಿಎಂಸಿ, ಡಿಎಂಕೆ, …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಮಹಾ ನಗರದಲ್ಲಿ 26 ಪ್ರತಿಪಕ್ಷ ನಾಯಕರು ಸೇರುತ್ತಿದ್ದೇವೆ. 2ನೇ ಸಭೆ ಇದಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು “ನಾವು ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಇದೊಂದು ಗೇಮ್ ಚೇಂಜರ್ ಸಭೆಯಾಗಲಿದೆ. ಇಲ್ಲಿ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ. ರಾಷ್ಟ್ರೀಯ ಪ್ರತಿಪಕ್ಷ ನಾಯಕರೆಲ್ಲ ಭಾಗವಹಿಸುತ್ತಿದ್ದು, ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದೇವೆ” ಎಂದು ತಿಳಿಸಿದರು.ಪಕ್ಷಗಳು ಒಂದೇ ಸಾಮಾನ್ಯ …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರ ಜಿಎಸ್‌ಟಿ ಸೋರಿಕೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ತೆರಿಗೆ ರಿಟರ್ನ್ಸ್ ಸಲ್ಲಿಸಲು ಮೂರು ವರ್ಷದ ಅವಧಿ ಕಲ್ಪಿಸುವುದು ದುರುಪಯೋಗಕ್ಕೆ ಕಾರಣವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿಧೇಯಕಗಳ ಮೇಲಿನ ಪರ್ಯಾಲೋಚನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕು ಮತ್ತು ಸೇವೆ ಇಡಿ ರಾಷ್ಟ್ರದಲ್ಲಿ ಏಕ ರೂಪ ತೆರಿಗೆ ಇರಬೇಕೆಂದು 2017 ರಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ಕೆಲವು ರಾಜ್ಯಗಳು ಉತ್ಪಾದನಾ …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ವಿನಾಯತಿಯಲ್ಲಿ ಐವತ್ತು ಲಕ್ಷದಿಂದ ಒಂದು ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು …
Read More »
BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ‘ಒಂದು ಕೈಯ್ಯಲ್ಲಿ ಐದು ಭಾಗ್ಯಗಳನ್ನು ಕೊಟ್ಟು, ಎರಡು ಕೈಯಲ್ಲಿ ಕಿತ್ತುಕೊಂಡರು’ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿ, ‘ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಹಾಲು ಮಾಡೋದಕ್ಕೆ ಹೊರಟಿರುವ ಕಾಂಗ್ರೆಸ್ ಸರಕಾರ, ಜನರ ಮೂಗಿಗೆ ಸವರುವ ಕೆಲಸ ಮಾಡಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಲಿನ ದರ 5 ರೂ.ಯಿಂದ 6ರೂ.ಗೆ …
Read More »
BigTv News
July 7, 2023
Uncategorized, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ಗೆ ಅನುಕೂಲ ಕಲ್ಪಿಸಿದೆ, ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಮಹತ್ವವನ್ನು ನೀಡಿದ್ದಾರೆ. ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ಮೆನು ಬದಲಾವಣೆ ಮಾಡಲಾಗುತ್ತಿದೆ. ಮೊದಲನೇ ಹಂತದ ಬಿಟ್ಟು ನಗರ ಸ್ಥಳೀಯ ಸಂಸ್ಥೆ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿರುವ ಎಲ್ಲಾ ಹೊಸ ಪಟ್ಟಣ ಮತ್ತು ಬಿಬಿಎಂಪಿ ಹೊಸ ವಾರ್ಡ್‌ಗಳಲ್ಲಿ ಕ್ಯಾಂಟೀನ್ ಆರಂಭವನ್ನು ಮಾಡಲಾಗಿದೆ. ಪ್ರಸಕ್ತ …
Read More »